ಕಾರವಾರ | ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ ನೀಡದಿದ್ದರೆ ರಾಜಕೀಯ ನಿವೃತ್ತಿ :ಶಾಸಕ ಸತೀಶ್ ಸೈಲ್

Date:

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಅನುದಾನ ಘೋಷಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಘೋಷಿಸಿದ್ದಾರೆ. ಇಂದು ಕಾರವಾರದ ಸದಾಶಿವಗಡದ ಕಾಳಿ ಸಂಗಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸತೀಶ್ ಸೈಲ್, ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯ ಬಹಳಷ್ಟಿದೆ.

- Advertisement -

ಕಳೆದ ಮೂರು ವರ್ಷಗಳಿಂದ ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಾ ಬಂದಿದ್ದರೂ, ಇದುವರೆಗೂ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಅಥವಾ ಘೋಷಣೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಚಿಕಿತ್ಸೆಗಾಗಿ ನಮ್ಮ ಕ್ಷೇತ್ರದ ಜನ ಗೋವಾಕ್ಕೆ ಹೋಗಬೇಕು. ನಾನೇ ನನ್ನ ವೈಯಕ್ತಿಕ ಚಿಕಿತ್ಸೆಗಾಗಿ ದೆಹಲಿಗೆ ಹೋಗುವ ಪರಿಸ್ಥಿತಿ ಇದೆ. ಹೀಗಾಗಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅತ್ಯಂತ ಅವಶ್ಯಕವಾಗಿದೆ. ನಾನು ಈ ಆಸ್ಪತ್ರೆಯನ್ನು ಮಾಡಿಯೇ ಸಿದ್ಧ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞರ ಕೊರತೆ; ಹೆರಿಗೆಗೆ ಖಾಸಗಿಯೇ ಏಕೈಕ ಆಯ್ಕೆ

ಮಾರ್ಚ್‌ನಲ್ಲಿ ಬರುವ ಬಜೆಟ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆಯಾಗಲೇಬೇಕು. ಒಂದು ವೇಳೆ ಘೋಷಣೆ ಆಗದೇ ಇದ್ದರೆ ನಾನು ಪಕ್ಷ ಬಿಟ್ಟು ಹೋಗುವುದಿಲ್ಲ. ಬದಲಾಗಿ, ರಾಜೀನಾಮೆ ನೀಡಿ ಮನೆಯಲ್ಲಿ ಇರುತ್ತೇನೆ, ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಬಜೆಟ್‌ನಲ್ಲಿ ಅನುದಾನ ಘೋಷಣೆ ಆಗದಿದ್ದರೆ, ಬಜೆಟ್ ಆದ ಮಾರನೇ ದಿನವೇ ನಾನು ರಾಜಕೀಯದಿಂದ ದೂರ ಇರುತ್ತೇನೆ,” ಎಂದು ಸೈಲ್ ಸ್ಪಷ್ಟಪಡಿಸಿದರು. ಅಲ್ಲದೆ, “ನಾನು ಯಾವ ಪಕ್ಷಕ್ಕೂ ಹೋಗುವುದಿಲ್ಲ, ಯಾವುದೇ ಕೆಲಸವನ್ನು ಮಾಡುವುದಿಲ್ಲ. ಈ ಕ್ಷೇತ್ರದ ಜನರಿಗೆ ಸೂಕ್ತನಾಗಿಲ್ಲ (I am not fit for people) ಎಂದು ತಿಳಿದುಕೊಳ್ಳುತ್ತೇನೆ,” ಎಂದು ಹೇಳಿದ್ದಾರೆ.

ಸತೀಶ್ ಸೈಲ್ ಅವರ ಈ ಎಚ್ಚರಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿಗಳು ಕಾರವಾರದ ಬೇಡಿಕೆಗೆ ಯಾವ ರೀತಿ ಸ್ಪಂದಿಸುತ್ತಾರೆ ಮತ್ತು ಮುಂದಿನ ಬಜೆಟ್‌ನಲ್ಲಿ ಆಸ್ಪತ್ರೆಗೆ ಅನುದಾನ ಘೋಷಣೆಯಾಗುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...

ಕಸ್ತೂರಿರಂಗನ್ ವರದಿ ವಿರುದ್ಧ ಆಕ್ರೋಶ: ಶೃಂಗೇರಿ ಬಂದ್‌ಗೆ ರೈತ ಸಂಘಟನೆಗಳ ಬೆಂಬಲ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು...