ಕಾರವಾರ | ತೀಕ್ಷ್ಣ ಮೂಗಿನ ಮೀನು ಚುಚ್ಚಿ ಯುವಕ ಸಾವು

Date:

ಮೀನುಗಾರಿಕೆಗೆ ತೆರಳಿದ್ದ ಯುವಕನೊಬ್ಬ ತೀಕ್ಷ್ಣ ಮೂಗಿನ ʼಕಾಂಡೆʼ ಮೀನು ಚುಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಾರವಾರದ ಮಾಜಾಳಿ ದಂಡೆಭಾಗದಲ್ಲಿ ನಡೆದಿದೆ.

- Advertisement -

ಮೃತನನ್ನು ಮಾಜಾಳಿ ದಂಡೇಭಾಗದ ನಿವಾಸಿ ಅಕ್ಷಯ್ ಅನಿಲ್ ಮಾಜಾಳಿಕರ್ (24) ಎಂದು ಗುರುತಿಸಲಾಗಿದೆ. ಅಕ್ಷಯ ಸ್ಥಳೀಯ ಮಟ್ಟದಲ್ಲಿ ಪ್ರತಿಭಾವಂತ ಕ್ರಿಕೆಟ್ ಕ್ರೀಡಾಪಟುವಾಗಿದ್ದು, ಯುವ ಸಮುದಾಯದಲ್ಲಿ ಜನಪ್ರಿಯನಾಗಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕಳೆದ ಮಂಗಳವಾರ (ಅ.14) ಅಕ್ಷಯ್ ಸಹಮೀನುಗಾರರೊಂದಿಗೆ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಅಚಾನಕ್ ನೀರಿನಿಂದ ನೆಗೆದ ಸುಮಾರು 8 ರಿಂದ 10 ಇಂಚು ಉದ್ದದ “ಕಾಂಡೆ” ಎಂಬ ತೀಕ್ಷ್ಣ ಮೂಗಿನ ಮೀನು ನೇರವಾಗಿ ಅವರ ಹೊಟ್ಟೆಗೆ ಚುಚ್ಚಿದೆ. ಘಟನೆಯಿಂದ ಅಕ್ಷಯ್ ಗಂಭೀರವಾಗಿ ಗಾಯಗೊಂಡಿದ್ದು, ಮೀನಿನ ಮೂಗಿನ ತಿವಿತದಿಂದ ಕರುಳಿನ ಭಾಗಕ್ಕೂ ಗಾಯವಾಗಿದೆ ಎಂದು ತಿಳಿದುಬಂದಿದೆ.

WhatsApp Image 2025 10 16 at 4.04.45 PM

ಕೂಡಲೇ ಅವರನ್ನು ಕಾರವಾರದ ಕೆಐಎಂಎಸ್‌ (KIMS) ಆಸ್ಪತ್ರೆಗೆ ದಾಖಲಿಸಲಾಯಿತ್ತು. ವೈದ್ಯರು ಹೊಲಿಗೆ ಹಾಕಿ ಚಿಕಿತ್ಸೆ ನೀಡಿ ಅಕ್ಷಯ್ ಅವರನ್ನು ಆಸ್ಪತ್ರೆಯಲ್ಲೇ ತೀವ್ರ ನಿಗಾ ಘಟಕದಲ್ಲಿ ಇರಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಅ.16) ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕುಮಟಾ | ಪೊಲೀಸರ ಮಿಂಚಿನ ಕಾರ್ಯಾಚರಣೆ: 48 ಗಂಟೆಗಳಲ್ಲಿ ಅಂತರಾಜ್ಯ ಕಳ್ಳರ ಬಂಧನ

ಅಕ್ಷಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರು ಹಾಗೂ ಸಂಬಂಧಿಕರು ಆಸ್ಪತ್ರೆಗೆ ಬಂದು ಆಕ್ರೋಶ ವ್ಯಕ್ತಪಡಿಸಿದರು. ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡಿಲ್ಲ ಎಂದು ವೈದ್ಯರ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾದರು. ತಕ್ಷಣವೇ  ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ವೈದ್ಯಾಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಯುವಕನ ಸಾವಿನಿಂದ ಮಾಜಾಳಿ ಪ್ರದೇಶದ ಮೀನುಗಾರ ಸಮುದಾಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ಕುರಿತು ಕಾರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...