ಬೀದರ್‌ | ಜಿಲ್ಲಾದ್ಯಂತ ಕನ್ನಡದಲ್ಲಿ ನಾಮಫಲಕ ಅಳವಡಿಸಲು ಕಸಾಪ ಆಗ್ರಹ

Date:

ರಾಜ್ಯದಲ್ಲಿರುವ ಅಂಗಡಿ ಮುಂಗಟ್ಟುಗಳ ಮೇಲಿರುವ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡದಲ್ಲಿ ಮತ್ತು ಉಳಿದ ಶೇ.40 ರಷ್ಟು ಭಾಗದಲ್ಲಿ ಇತರ ಭಾಷೆಗಳಲ್ಲಿ ಬರೆಯಿಸಲು ರಾಜ್ಯ ಸರ್ಕಾರ ಆದೇಶಿಸಿದ್ದು, ಆ ಪ್ರಕಾರ ಬೀದರ ನಗರ ಮತ್ತು ಜಿಲ್ಲೆಯಾದ್ಯಂತ ಎಲ್ಲಾ ಅಂಗಡಿ ಮಳಿಗೆಗಳ ನಾಮಫಲಕಗಳನ್ನು ಕನ್ನಡದಲ್ಲಿ ಬರೆಸಲು ಸಂಘ ಸಂಸ್ಥೆಗಳು ಮಾಲೀಕರು ತಕ್ಷಣ ಕ್ರಮ ಜರುಗಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಆಗ್ರಹಿಸಿದ್ದಾರೆ.
“ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರಸ್ಥಾನ ಇರುವುದನ್ನು ಅಂಗಡಿ ಮಾಲೀಕರು ಅರ್ಥ ಮಾಡಿಕೊಳ್ಳಬೇಕು, ಕನ್ನಡ ನಾಡಿನ ನೆಲ, ಜಲ, ಭಾಷೆಗೆ ಧಕ್ಕೆಯಾಗದಂತೆ ನಾವೆಲ್ಲರೂ ನೋಡಿಕೊಳ್ಳಬೇಕಾಗಿದೆ. ಅಂಗಡಿ ಮಾಲೀಕರು ಸರ್ಕಾರದ ಆದೇಶದ ಪ್ರಕಾರ ಸ್ವಯಂಪ್ರೇರಿತರಾಗಿ ತಮ್ಮ ಅಂಗಡಿ, ಮುಗ್ಗಟ್ಟಿನ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಪ್ರಥಮಾದ್ಯತೆಯಲ್ಲಿ ಬರೆಯಿಸುವ ಮೂಲಕ ಕನ್ನಡದ ಅಭಿಮಾನವನ್ನು ಮೆರೆಯಬೇಕು” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಸರ್ಕಾರದ ಆದೇಶದ ಹೊರತಾಗಿಯೂ ಸರ್ಕಾರದ ಆದೇಶದ ವಿರುದ್ಧ ಕನ್ನಡೇತರ ನಾಮಫಲಕಗಳನ್ನು ಹೊಂದಿದ್ದರೆ ಅಂತಹವರ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ತು ಹೋರಾಟ ಮಾಡುತ್ತದೆ ಮತ್ತು ಯಾವ ಅಂಗಡಿಯ ನಾಮಫಲಕಗಳಲ್ಲಿ ಸಂಪೂರ್ಣ ಕನ್ನಡಕ್ಕೆ ಆದ್ಯತೆ ನೀಡಲಾಗಿದೆಯೋ ಅಂತಹ ನಾಮಫಲಕಗಳನ್ನು ಗುರುತಿಸಿ ಕನ್ನಡ ಸಾಹಿತ್ಯ ಪರಿಷತ್ತು ಅವರನ್ನು ಗೌರವಿಸುತ್ತದೆ” ಎಂದಿದ್ದಾರೆ.
“ಇದರ ಜೊತೆಗೆ ಸರ್ಕಾರಿ, ಅರೆಸರ್ಕಾರಿ, ಸರ್ಕಾರದ ಅನುದಾನ ಪಡೆಯುವ ಕಚೇರಿಗಳು, ಶಾಲಾ ಕಾಲೇಜುಗಳು ತಮ್ಮ ಸಂಸ್ಥೆಯ ನಾಮಫಲಕದಲ್ಲಿ ಕನ್ನಡಕ್ಕೆ ಪ್ರಥಮಾದ್ಯತೆಯನ್ನು ನೀಡಿ  ಬರೆಯಿಸಬೇಕು. ಅಧಿಕಾರಿಗಳೂ ಸಹ ಕೋಣೆಯ ಎದುರು ಅಂಟಿಸಿರುವ ಫಲಕಗಳು, ಮೇಜಿನ ಮೇಲೆ ಇಟ್ಟಿರುವ ನೇಮ್ ಪ್ಲೇಟ್ ಗಳು ( ಹೆಸರು ಸೂಚನಾ ಫಲಕಗಳು) ಸಹ ಕನ್ನಡದಲ್ಲಿ ಬರೆಯಿಸಬೇಕು ಎಂದು ಚನ್ನಶೆಟ್ಟಿ ಆಗ್ರಹಿಸಿದ್ದಾರೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...