ಬೀದರ್‌ | ಗಡಿ ತಾಲೂಕಿನಲ್ಲಿ ಕನ್ನಡ ಶಾಲೆಗಳನ್ನು ಮುಚ್ಚದಂತೆ ಕಸಾಪ ಮನವಿ

Date:

ಬೀದರ ಜಿಲ್ಲೆಯಲ್ಲಿರುವ ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚದಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಶಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿತು.

- Advertisement -

“ಇತ್ತೀಚೆಗೆ ಔರಾದ ತಾಲೂಕಿನ ಕಿರುಗುಣವಾಡಿಯಲ್ಲಿರುವ ಮಾತೋಶ್ರೀ ಜೀಜಾಬಾಯಿ ಕನ್ನಡ ಮಾಧ್ಯಮ ಶಾಲೆಯನ್ನು ಮುಚ್ಚುತ್ತಿರುವ ಬಗ್ಗೆ ವರದಿಯಾಗಿದ್ದನ್ನು ಗಮನಿಸಿ, ಗಡಿ ಭಾಗದಲ್ಲಿ ಕನ್ನಡದ ಬೆಳವಣಿಗೆ
ಕಷ್ಟಸಾಧ್ಯವಾದ ಈ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದು ಸೂಕ್ತವಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿರುವ ಮತ್ತು ಓದುತ್ತಿರುವ ಮಕ್ಕಳ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು
ಮತ್ತು ಕನ್ನಡ ನಾಡಿನ ನೆಲ, ಜಲ, ಭಾಷೆ ಇವುಗಳ ಸಂರಕ್ಷಣೆ ಮಾಡುವುದು ಪರಿಷತ್ತಿನ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಶಾಲಾ ಶಿಕ್ಷಣ ಇಲಾಖೆಗೆ ಜಿಲ್ಲೆಯ ಯಾವುದೇ ಶಾಲೆಗಳನ್ನು ಮುಚ್ಚದಂತೆ ಮನವಿ ಮಾಡಿಕೊಂಡಿರುವುದಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿಯವರು ತಿಳಿಸಿದ್ದಾರೆ.

ಹೊಸ ಶಾಲೆಗೆ ಮನವಿ :

ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಕಮಲನಗರ ಮತ್ತು ದಾಬಕಾ ಪಟ್ಟಣಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಲ್ಲ. ಹೀಗಾಗಿ ಅಲ್ಲಿ ಕನ್ನಡ ಮಾಧ್ಯಮ ಪ್ರೌಢ ಶಾಲೆಗಳನ್ನು ತೆರೆಯುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಮನವಿ ಮಾಡಿದರು.

ದಾಬಕಾದಲ್ಲಿ ಕನ್ನಡ ಮಾಧ್ಯಮ ಶಾಲೆ ಇಲ್ಲದೇ ಇರುವುದರಿಂದ ಅಲ್ಲಿನ ಮಕ್ಕಳು 30ಕಿ.ಮಿ.ದೂರದ ಔರಾದ ಪಟ್ಟಣದ ಶಾಲೆಗಳಿಗೆ ಪ್ರವೇಶ ಪಡೆಯಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ದಾಬಕಾ ಮತ್ತು
ಕಮಲನಗರಗಳಲ್ಲಿ ಹೊಸದಾಗಿ ಕನ್ನಡ ಮಾಧ್ಯಮ ಪ್ರೌಢ ಶಾಲೆ ತೆರೆಯಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.ಎರಡೂ ಮನವಿಗಳಿಗೂ ಉಪನಿರ್ದೇಶಕರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ ಲೋಕಸಭಾ | ಇವರಿಬ್ಬರು ʼಹ್ಯಾಟ್ರಿಕ್‌ʼ ಸಾಧಕರು, ಕ್ಷೇತ್ರದ ಅತಿ ಕಿರಿಯ, ಹಿರಿಯ ಸಂಸದರು

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವಕುಮಾರ ಕಟ್ಟೆ
ಮತ್ತು ಉಪಾಧ್ಯಕ್ಷರಾದ ದಾನಿ ಬಾಬುರಾವ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...