ಉಡುಪಿ‌ | ಕಟಪಾಡಿ ಬಳಿ ಮಗುಚಿ ಬಿದ್ದ ಎಲ್‌ಪಿಜಿ ಟ್ಯಾಂಕರ್

Date:

ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದ ಘಟನೆ ಸೋಮವಾರ ಸಂಭವಿಸಿದೆ.

- Advertisement -

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಟ್ಯಾಂಕರ್ ನಿಯಂತ್ರಣ ತಪ್ಪಿ ಪಕ್ಕಕ್ಕೆ ಮಗುಚಿ ಬಿದ್ದಿರುವುದಾಗಿ ತಿಳಿದುಬಂದಿದೆ. ಘಟನೆಯ ನಂತರ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
1010046305

ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಸಂಭವಿಸಿತೇ ಎಂಬುದರ ಕುರಿತು ಪರಿಶೀಲನೆ ನಡೆಸಿದರು. ಯಾವುದೇ ಅಪಾಯ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಟ್ಯಾಂಕರ್ ಮೇಲೆ ನೀರು ಹಾಯಿಸಿ ಶೀತೀಕರಣ ಮಾಡುವ ಮೂಲಕ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

1010036681 2
ಜಾಹಿರಾತು

ಘಟನೆಯ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರವನ್ನು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದರು.

ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...