ಕತ್ತರಘಟ್ಟ ದಲಿತ ಯುವಕನ ಸಾವು ಪ್ರಕರಣ: ಎಎಸ್‌ಐ ಅಮಾನತು; ನೈಜ ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಆಗ್ರಹ

Date:

ಕೆ.ಆರ್‌ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ನಡೆದಿದ್ದ ದಲಿತ ಯುವಕ ಜಯಕುಮಾರ್ ಸಾವಿನ ಪ್ರಕರಣದಲ್ಲಿ ಲೋಪವೆಸಗಿರುವ ಆರೋಪದ ಮೇಲೆ ಎಎಸ್‌ಐ ಕುಮಾರ್ ಅವರನ್ನುಅಮಾನತು ಮಾಡಲಾಗಿದೆ. ಆದರೆ, ಪ್ರಕರಣವನ್ನು ತಿರುಚಿದ್ದು ಎಎಸ್‌ಐ ಕುಮಾರ್ ಅವರಲ್ಲ, ಪ್ರಕರಣದಲ್ಲಿ ಆರೋಪಿಗಳೊಂದಿಗೆ ಶಾಮೀಲಾಗಿ ಪ್ರಕರಣವನ್ನು ತಿರುಚಿರುವ ನೈಜ ಆಪಾದಿತ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ದಲಿತ ಸಂಘಟನೆಗಳು ಆಗ್ರಹಿಸಿವೆ.

- Advertisement -

ಮೇ 25ರಂದು ಕತ್ತರಘಟ್ಟದಲ್ಲಿ ದಲಿತ ಯುವಕ ಜಯಕುಮಾರ್ ಅವರನ್ನು ಸವರ್ಣೀಯ ದುರುಳನೊಬ್ಬ ಅಮಾನುಷವಾಗಿ ಥಳಿಸಿ, ಹುಲ್ಲಿನ ಮೆದೆಯೊಳಗೆ ಹಾಕಿ ಜೀವಂತವಾಗಿ ಸುಟ್ಟುಹಾಕಿದ್ದ ಎಂದು ಹೇಳಲಾಗಿದೆ. ಆದರೆ, ಈ ಪ್ರಕರಣವನ್ನು ಆತ್ಮಹತ್ಯೆಯೆಂದು ಪೊಲೀಸರು ತಿರುಚಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ದಲಿತ ಯುವಕನ ಸಾವು ಪ್ರಕರಣದಲ್ಲಿ ಆರೋಪಿಯೊಂದಿಗೆ ಶಾಮೀಲಾಗಿ, ಲಂಚ ಪಡೆದು, ಪ್ರಕರಣವನ್ನು ಪೊಲೀಸರು ತಿರುಚಿದ್ದಾರೆ ಎಂಬ ಗಂಭೀರ ಆರೋಪಗಳಿವೆ. ಆರೋಪಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ದಲಿತ ಯುವಕನ ಸಾವಿಗೆ ನ್ಯಾಯ ದೊರಕಿಸಬೇಕು ಎಂದು ಆಗ್ರಹಿಸಿ ಹಲವಾರು ಸಂಘಟನೆಗಳು ‘ಕೆ.ಆರ್‌ ಪೇಟೆ ಚಲೋ’ ಪ್ರತಿಭಟನೆ ನಡೆಸಿದ್ದವು. ಈ ಬೆನ್ನಲ್ಲೇ, ದಲಿತ ಯುವಕನ ಸಾವಿಗೆ ಸಂಬಂಧಿಸಿದಂತೆ ಎನ್‌ಸಿಆರ್ ದಾಖಲಿಸಿದ್ದ ಎಎಸ್‌ಐ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಆದರೆ, ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಿದ್ದು, ಎಫ್‌ಐಆರ್‌ನಲ್ಲಿ ಹತ್ಯೆಯನ್ನು ಆತ್ಮಹತ್ಯೆಯೆಂದು ತಿರುಚಿದ್ದು ಎಎಸ್‌ಐ ಕುಮಾರ್‌ ಅವರಲ್ಲ. ಪ್ರಕರಣ ತಿರುಚುವಲ್ಲಿ ಶಾಮೀಲಾಗಿರುವವರು ಕೆ.ಆರ್.ಪೇಟೆ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್‌ (ಸಿಐ) ಆನಂದೇಗೌಡ, ಸಬ್‌ಇನ್ಸ್‌ಪೆಕ್ಟರ್‌ ಸುಬ್ಬಯ್ಯ, ದಪೇದಾರ್ ವೈರಮುಡಿ, ಡಿವೈಎಸ್ಪಿ ಚಲುವರಾಜು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ್ ಎಂದು ಆರೋಪಿಸಲಾಗಿದೆ. ಈ ಅಧಿಕಾರಿಗಳು ಲಂಚ ಪಡೆದು ಪ್ರಕರಣವನ್ನು ತಿರುಚಿದ್ದಾರೆ. ಈ ಐವರನ್ನೂ ಅಮಾನತು ಮಾಡಿ, ಕ್ರಮ ಕೈಗೊಳ್ಳಬೇಕು ಎಂದು ದ್ರಾವಿಡ ಕನ್ನಡಿಗರು ಚಳುವಳಿ ಸಂಘಟನೆ ಆಗ್ರಹಿಸಿದೆ.

“ಹತ್ಯೆಯಾದ ದಲಿತ ಯುವಕ ಜಯಕುಮಾರ್ ಅವರು ತಮ್ಮ ಹತ್ಯೆಯ ಹಿಂದಿನ ದಿನವೇ ಪೊಲೀಸರಿಗೆ ದೂರು ನೀಡಿದ್ದರು. ಆದರೂ, ಪೊಲೀಸರು ಕ್ರಮ ಕೈಗೊಳ್ಳದೆ, ಆತನಿಗೆ ರಕ್ಷಣೆ ನೀಡದೆ ಲೋಪವೆಸಗಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಪರಿಹಾರ ನೀಡಿ ಕೈತೊಳೆದುಕೊಳ್ಳುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ್ ಅವರು ಮೃತದೇಹವನ್ನು ಹೂಳುವ ಬದಲು ಸುಟ್ಟುಹಾಕುವಂತೆ ಒತ್ತಡಹಾಕಿ, ಸುಟ್ಟು ಹಾಕಿಸಿದ್ದಾರೆ. ಮುಂದನ ದಿನಗಳಲ್ಲಿ ಯಾವುದೇ ಪರೀಕ್ಷೆಗೆ ಅಗತ್ಯವಿದ್ದಾಗ ಮೃತದೇಹ ದೊರೆಯದಂತೆ ಮಾಡಿದ್ದಾರೆ” ಎಂದು ಸಂಘಟನೆ ಆರೋಪಿಸಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಮೆಟ್ರೋ ಯೋಜನೆ: ಕೇಂದ್ರದ ನೆರವು ನಾಮಮಾತ್ರ, ಆರ್ಥಿಕ ಹೊರೆಯಲ್ಲಿ ರಾಜ್ಯದ್ದೇ ‘ಸಿಂಹಪಾಲು’

ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಪ್ರಮುಖವಾಗಿರುವ 'ನಮ್ಮ ಮೆಟ್ರೋ' ಯೋಜನೆಯು ಕೇಂದ್ರ...

ವಿಜಯಪುರ |ಪ್ರವಾಸಿಗರ ಕಣ್ಮನ ಸೆಳೆಯುತ್ತಿದ್ದ ಆಲಮಟ್ಟಿಯ 30ಕ್ಕೂ ಅಧಿಕ ಒಣಗಿದ ಮರಗಳ ತೆರವಿಗೆ ಚಾಲನೆ

ಪ್ರವಾಸಿಗರ ಆಕರ್ಷಣೆಯಾಗಿದ್ದ ಆಲಮಟ್ಟಿಯ ರಸ್ತೆ ಬದಿಯ ಮರಗಳ ಸಾಲಿನಲ್ಲಿ ಒಣಗಿ, ಅಪಾಯಕಾರಿಯಾಗಿದ್ದ...

ರಾಯಚೂರು | ಮೌಲಾನಾ ಅಬುಲ್ ಕಲಾಂ ಅಜಾದ್ ಜಯಂತಿ ಆಚರಣೆ

ದೇಶದ ಮೊದಲ ಶಿಕ್ಷಣ ಸಚಿವ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್...