ಉಡುಪಿ | ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ, ಆಪ್ತ ಸಮಾಲೋಚಕನ ಬಂಧನ

Date:

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುನಂದಾ ವೆಲ್ನೆಸ್ ಸೆಂಟರ್‌ನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಆಪ್ತ ಸಮಾಲೋಚಕನನ್ನು ಕಾಪು ಪೊಲೀಸರು ನವೆಂಬರ್ 15ರ ಸಂಜೆ ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ನಿರಂಜನ ಶೇಖರ ಶೆಟ್ಟಿ (52) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

- Advertisement -

ದಾಂಪತ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ಕೌನ್ಸಿಲಿಂಗ್ ಪಡೆಯಲು ಮಹಿಳೆಯೊಬ್ಬರು ಮೂಳೂರು ಗ್ರಾಮದ ಕಂಕಣಗುತ್ತು ಕಂಪೌಂಡ್‌ನಲ್ಲಿರುವ ಸುನಂದಾ ವೆಲ್ನೆಸ್ ಸೆಂಟರ್‌ಗೆ ಭೇಟಿ ನೀಡಿದ್ದರು. ಅಲ್ಲಿನ ಸಮಾಲೋಚಕನಾಗಿರುವ ನಿರಂಜನ ಶೇಖರ ಶೆಟ್ಟಿ ಕೌನ್ಸಿಲಿಂಗ್ ವೇಳೆ ದೈಹಿಕವಾಗಿ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದಂತೆ ಮಹಿಳೆ ತನ್ನ ದೂರುರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂಬಂಧ ಸಂತ್ರಸ್ಥೆಯು ಕಾಪು ಪೊಲೀಸ್ ಠಾಣೆಗೆ ಸಲ್ಲಿಸಿದ ಲಿಖಿತ ದೂರು ಆಧಾರವಾಗಿ ಪ್ರಕರಣ ದಾಖಲಾಗಿತ್ತು. ನಂತರ ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ. ಹರ್ಷ ಪ್ರಿಯಂವದಾ ಹಾಗೂ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ, ಕಾಪು ಠಾಣೆಯ ಎಸ್ಸೈ ಶುಭಕರ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿ ನಿರಂಜನ ಶೇಖರ ಶೆಟ್ಟಿಯನ್ನು ಬಂಧಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

WhatsApp Image 2025 11 15 at 10.16.13 PM

ಆರೋಪಿ ನಿರಂಜನ ಶೇಖರ ಶೆಟ್ಟಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...