ತುಮಕೂರು | ವಿಮೋಚನೆಯ ಹೊಸ ಹಾದಿ ತೆರೆದ ಕೃತಿ ‘ಕವಿರಾಜಮಾರ್ಗ’: ಬರಗೂರು ರಾಮಚಂದ್ರಪ್ಪ

Date:

Advertisements

126 ವರ್ಷಗಳ ಹಿಂದೆ ಕೆ.ಬಿ ಪಾಠಕ್‌ ಅವರು ಸಂಪಾದಿಸಿ, ಪರಿಷ್ಕರಿಸಿ ಹೊರತಂದ ‘ಕವಿರಾಜಮಾರ್ಗ’ವು ಕನ್ನಡ ಸಾಹಿತ್ಯ ನೆಲೆಯನ್ನು ಕಟ್ಟಿಕೊಡುವ ಕೆಲಸವನ್ನು ಈಗಲೂ ಮಾಡುತ್ತಿದೆ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ವಿಭಾಗವು ಆಯೋಜಿಸಿದ್ದ ’ಶ್ರೀವಿಜಯ ವಿರಚಿತ ಕವಿರಾಜಮಾರ್ಗ-125’ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಗ್ರಂಥ ಸಂಪಾದನೆ ಎನ್ನುವುದು ಯಾವುದೇ ಪ್ರಕಾರದ ಸಾಹಿತ್ಯ ನೆಲೆಯನ್ನು ಕಟ್ಟಿಕೊಡುವ ಕೆಲಸವಾಗಬೇಕು. ಕವಿರಾಜಮಾರ್ಗ ಕನ್ನಡಕಟ್ಟುವ, ಸಂಸ್ಕೃತದ ನೆಲೆಯಿಂದ ತನ್ನನ್ನು ವಿಭಜಿಸಿಕೊಂಡು, ಸಾಮಾಜಿಕ ಬಲಾಢ್ಯತೆಯಿಂದ ಹಳೆಗನ್ನಡದ ಓದನ್ನು ಕುಗ್ಗಿಸದೆ, ಪರಧರ್ಮ ಸಹಿಷ್ಣುತೆ, ಸಾಮಾಜಿಕ ಪರಂಪರೆಯನ್ನು ಸಾರುವ ಜನಸಾಮಾನ್ಯರ ಕೃತಿಯಾಗಿ, ತಾತ್ವಿಕ ಬೀಜ ಬಿತ್ತುವುದರ ಮೂಲಕ ಇಂದಿಗೂ ತನ್ನ ಸತ್ವ ಪ್ರಶಂಸೆಯನ್ನು ಸಾರುತ್ತಿದೆ” ಎಂದು ತಿಳಿಸಿದರು.

“ಕವಿರಾಜಮಾರ್ಗವು ಕಾವ್ಯಾಲಂಕಾರವೂ ಹೌದು, ಲಾಕ್ಷಣಿಕ ಗ್ರಂಥವೂ ಹೌದು.ನಿರ್ವಚನಗೊಳಿಸುವ ಕೃತಿಎಂದೇ ಹೇಳಬಹುದು.ಚಾರಿತ್ರಿಕ ಮಹತ್ವ, ಸಮಕಾಲೀನ ದೃಷ್ಟಿಯಿಂದ ನೋಡಿದಾಗ ಸಾಹಿತ್ಯ ಕೃತಿಗೆ, ಕಾವ್ಯಕ್ಕೆಇರಬೇಕಾದಎಲ್ಲ ಅಂಶಗಳನ್ನು ಸಾರುವ, ಹಳೆಗನ್ನಡದ ಮೆರುಗನ್ನು ವ್ಯಕ್ತಪಡಿಸುವ ಏಕೈಕ ಕೃತಿಯಾಗಿದೆ.ಭಾಷಿಕ, ಧಾರ್ಮಿಕ, ಸಾಮಾಜಿಕ ವಿಮೋಚನೆಯ ಹೊಸ ಹಾದಿ ತೆರೆದ ಕೃತಿಯಾಗಿದೆ” ಎಂದರು.

Advertisements

“ಕನ್ನಡದ ಜಾಯಮಾನಕ್ಕೆ ಹೊಂದಿಕೊಳ್ಳುವ ಸಂಸ್ಕೃತ ಪದಗಳನ್ನು ಬಳಸಬಹುದು.ಭಾಷಾ ಸೌಂದರ್ಯವನ್ನು ಹೆಚ್ಚಿಸಲು, ಪದ ಬಳಕೆ ಸಹಜ ಹೊಂದಾಣಿಕೆಯಾದಾಗ ಇತರೆ ಭಾಷಾ ಪದಗಳನ್ನು ಅಳವಡಿಸಿಕೊಂಡಾಗ ಆಧುನಿಕ ವಿವೇಕ ಹೊಂದಿ, ಭಾಷೆಯ, ಸಮಾಜದ ಮೇಲಿನ ಗೌರವ ಬಹುತ್ವರೂಪು ಪಡೆದು ಬಹುತ್ವದ ಪರಿಕಲ್ಪನೆ ನೆಲೆಗೊಳ್ಳುತ್ತದೆ. ಆಗ ಭಾಷೆಯು ಸಾಮಾಜಿಕ ಉತ್ಪನ್ನದ ಪ್ರಾದೇಶಿಕ, ಸಾಂಸ್ಕೃತಿಗಳ ಕುರಿತು ಮಾತನಾಡುತ್ತದೆ” ಎಂದು ಹೇಳಿದರು.

ವಿವಿ ಕುಲಪತಿ ಪ್ರೊ. ಎಂ ವೆಂಕಟೇಶ್ವರಲು ಮಾತನಾಡಿ, “ವಿಶ್ವವಿದ್ಯಾನಿಲಯಗಳ ಬಲವನ್ನು ನಿರೂಪಿಸಲು ಸಾಧ್ಯವಾಗುವುದು ಕನ್ನಡ ವಿಭಾಗದ ಮಹತ್ವದಿಂದ.ಕನ್ನಡ ವಿಭಾಗಗಳು ಪ್ರಾದೇಶಿಕತೆಯನ್ನು ಕಟ್ಟುವ, ಸಾರುವ ಪ್ರತಿನಿಧಿಗಳಾಗಬೇಕು” ಎಂದರು.

ಕಾರ್ಯಕ್ರಮದಲ್ಲಿ ವಿವಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಕಾಶ್ ಎಂ.ಶೇಟ್, ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೆಂಕಟರೆಡ್ಡಿರಾಮರೆಡ್ಡಿ, ರಾಷ್ಟ್ರೀಯ ವಿಚಾರ ಸಂಕಿರಣದ ಸಂಘಟನಾ ಕಾರ್ಯದರ್ಶಿ ಡಾ.ನಾಗಭೂಷಣ ಬಗ್ಗನಡು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X