ಕೆಜಿಎಫ್ | ಚೆಕ್ ಡ್ಯಾಂ ಧ್ವಂಸಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

Date:

ಕಂಗಾಂಡ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಗಲಕೊಪ್ಪ ಗ್ರಾಮದಲ್ಲಿನ ಸರ್ಕಾರಿ ಗೋಮಾಳ ಭೂಮಿಯ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಬೇಕು ಹಾಗೂ ಚೆಕ್ ಡ್ಯಾಂ ನಾಶಪಡಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತೊಂಗಲಕೊಪ್ಪ ಗ್ರಾಮಸ್ಥರು ಹಾಗೂ ದಲಿತ ಮುಖಂಡರು ಜಿಲ್ಲಾಧಿಕಾರಿ ರವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

​91 ಎಕರೆ ಗೋಮಾಳ ಭೂಮಿ ಒತ್ತುವರಿ:
ತೊಂಗಲಕೊಪ್ಪ ಗ್ರಾಮದ ಸರ್ವೆ ನಂಬರ್ 119 ರಲ್ಲಿ ಒಟ್ಟು 91 ಎಕರೆ ಸರ್ಕಾರಿ ಗೋಮಾಳ ಜಮೀನಿದ್ದು, ಇದನ್ನು ಕೆಲವರು ಕಾನೂನು ಬಾಹಿರವಾಗಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಈ ಕೂಡಲೇ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ ಸರ್ಕಾರಿ ಭೂಮಿಯನ್ನು ರಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

​ಅಕ್ರಮ ಒತ್ತುವರಿ ಆರೋಪ:
ಸದರಿ ಸರ್ವೆ ನಂಬರ್ 119 ರ ಗೋಮಾಳ ಭೂಮಿಯನ್ನು ಗ್ರಾಮದ ಅನೇಕ ರೈತರಿಗೆ ಶೇಕಡಾ 50% ರಷ್ಟು ಮಂಜೂರು ಮಾಡಲಾಗಿದೆ. ಇದರಲ್ಲಿ ಗ್ರಾಮದ ಸುಬ್ರಮಣಿ ಎಂಬುವವರ ಕುಟುಂಬಕ್ಕೆ ಕೇವಲ 20 ಗುಂಟೆ ಜಮೀನು ಮಾತ್ರ ಮಂಜೂರಾಗಿದ್ದರೂ, ಅವರು ನಿಯಮ ಮೀರಿ 4 ಎಕರೆಗಿಂತಲೂ ಹೆಚ್ಚು ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ.

​ಮೂಲಸೌಕರ್ಯಕ್ಕೆ ಭೂಮಿ ಮಂಜೂರಾತಿ ಆಗ್ರಹ:
ಗ್ರಾಮದಲ್ಲಿ ಸ್ಮಶಾನ, ಕ್ರೀಡಾಂಗಣ ಸೇರಿದಂತೆ ಇತರೆ ಅತ್ಯಗತ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಇದೇ ಭೂಮಿಯನ್ನು ಮಂಜೂರು ಮಾಡಬೇಕೆಂದು ಈಗಾಗಲೇ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಲಾಗಿದೆ.

​₹10 ಲಕ್ಷ ವೆಚ್ಚದ ಚೆಕ್ ಡ್ಯಾಂ ಧ್ವಂಸ: ಇದೇ ಸರ್ವೆ ನಂಬರ್‌ನಲ್ಲಿ ಗ್ರಾಮದ ಮೂಕ ಪ್ರಾಣಿಗಳ ಕುಡಿಯುವ ನೀರಿನ ಆಸರೆಗಾಗಿ ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆ ಅಡಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸಲಾಗಿತ್ತು. ಆದರೆ, ಜಮೀನು ಒತ್ತುವರಿ ಮಾಡಿಕೊಂಡಿರುವ ಸುಬ್ರಮಣಿ ಹಾಗೂ ಅವರ ಕುಟುಂಬಸ್ಥರು ಈ ಚೆಕ್ ಡ್ಯಾಂ ಅನ್ನು ಸಂಪೂರ್ಣವಾಗಿ ನಾಶಪಡಿಸಿ, ನೆಲಸಮಗೊಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ..?ಶ್ರೀನಿವಾಸಪುರ | ಗಾಳಿ-ಮಳೆಗೆ ಮಾವು ಬೆಳೆ ನಾಶ: ರೈತರಿಗೆ ತ್ವರಿತ ಪರಿಹಾರ ನೀಡಲು ಕೆಆರ್‌ಎಸ್ ಪಕ್ಷ ಆಗ್ರಹ

ಸಾರ್ವಜನಿಕ ಆಸ್ತಿ ಹಾಗೂ ಪ್ರಾಣಿಗಳ ಕುಡಿಯುವ ನೀರಿನ ಆಸರೆಯಾಗಿದ್ದ ಚೆಕ್ ಡ್ಯಾಂ ಧ್ವಂಸಗೊಳಿಸಿರುವ ಕೃತ್ಯ ಎಸಗಿದವರ ವಿರುದ್ಧ ತಕ್ಷಣವೇ ಕ್ರಿಮಿನಲ್ ಮೊಕದ್ದಮೆ ಹೂಡಿ ಕಾನೂನು ಕ್ರಮ ಜರುಗಿಸಬೇಕು ಮತ್ತು ಒತ್ತುವರಿಯಾಗಿರುವ ಸರ್ಕಾರಿ ಜಮೀನನ್ನು ಮುಕ್ತಗೊಳಿಸಿ ಗ್ರಾಮದ ಸಾರ್ವಜನಿಕ ಉದ್ದೇಶಗಳಿಗೆ ಬಳಸಿಕೊಳ್ಳಬೇಕು ಎಂದು ತೊಂಗಲಕೊಪ್ಪ ಗ್ರಾಮಸ್ಥರು ಮತ್ತು ದಲಿತ ಮುಖಂಡರು ಜಿಲ್ಲಾಧಿಕಾರಿಗಳಿಗೆ ಜಂಟಿಯಾಗಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...