ಕೆಜಿಎಫ್ |ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಲಿ: ಸಿ.ಎಂ.ಆರ್. ಶ್ರೀನಾಥ್ ಆಶಯ

Date:

ಬೇತಮಂಗಲ: ಕೋಲಾರ ಜಿಲ್ಲೆಯ ವಿದ್ಯಾರ್ಥಿಗಳು ಕೇವಲ ಪದವಿಗಷ್ಟೇ ಸೀಮಿತವಾಗದೆ, ದೇಶದ ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಸಮಾಜ ಸೇವಕ ಸಿ.ಎಂ.ಆರ್. ಶ್ರೀನಾಥ್ ಅವರು ಹೇಳಿದರು.

- Advertisement -

ಹೋಬಳಿಯ ಕೊತ್ತೂರು ಗ್ರಾಮದ ಶ್ರೀ ಸಾಯಿ ಪಿಯು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿ ಮದನ್, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 596 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ , ರಾಜ್ಯಕ್ಕೆ 4 ರ್ಳಿಯಾಂಕಿಂಗ್ ಗಳಿಸಿದ ಹಿನ್ನೆಲೆಯಲ್ಲಿ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಯನ್ನು ಸನ್ಮಾನಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮುಖ್ಯವಾಗಿ ಕೃಷಿಯನ್ನು ಅವಲಂಬಿಸಿರುವ ಕೋಲಾರ ಜಿಲ್ಲೆಯ ಮಕ್ಕಳು ಪ್ರತಿ ವರ್ಷವೂ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಸಾಧನೆ ಮಾಡುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.

ಕಳೆದ ಸಾಲಿನಲ್ಲಿ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಯಲ್ಲಿ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆಯಾಗಿ ಜಿಲ್ಲೆಯ ಹಿರಿಮೆಯನ್ನು ರಾಷ್ಟ್ರಮಟ್ಟದಲ್ಲಿ ಸಾರಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರದಲ್ಲಿ ಪ್ರತಿನಿತ್ಯ ನಡೆಯುವ ನೈಜ ವಿಚಾರಗಳ ಬಗ್ಗೆ ಅರಿವು ಹೊಂದಿರಬೇಕು. ಇದಕ್ಕಾಗಿ ಪ್ರಜಾವಾಣಿ ಅಂತಹಾ ದಿನ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳುವುದು ಅತ್ಯಗತ್ಯ. ವಿದ್ಯಾಭ್ಯಾಸದ ದಿನಗಳಿಂದಲೇ ಕೇವಲ ಪಠ್ಯಕ್ಕೆ ಸೀಮಿತವಾಗದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದ ಪೂರ್ವ ತಯಾರಿಯನ್ನು ಮಾಡಿಕೊಳ್ಳಬೇಕು ಎಂದರು.

ಶಿಕ್ಷಣವನ್ನು ಕೇವಲ ಉದ್ಯೋಗ ಪಡೆಯಲು ಮಾತ್ರ ಸೀಮಿತಗೊಳಿಸದೆ, ಇತರೆ ವ್ಯಾಪಾರ ವಹಿವಾಟುಗಳಲ್ಲೂ ಜ್ಞಾನವನ್ನು ಹೆಚ್ಚಿಸಿಕೊಂಡು ಅನೇಕರಿಗೆ ಉದ್ಯೋಗ ನೀಡುವಂತಹ ಶಕ್ತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ಯಾವುದೇ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಸಹಾಯದ ಅಗತ್ಯವಿದ್ದರೆ, ಅಂತಹವರಿಗೆ ಕೈಲಾದ ನೆರವು ನೀಡಲು ತಾವು ಸದಾ ಸಿದ್ಧರಿರುವುದಾಗಿ ಭರವಸೆ ನೀಡಿದರು.

ಗಡಿ ಭಾಗದ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಸವಾಲಿನ ಕೆಲಸವಾಗಿದ್ದರೂ, ಶ್ರೀ ಸಾಯಿ ಕಾಲೇಜು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ರಾಜ್ಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಈ ಯಶಸ್ಸಿನ ಹಿಂದೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರ ಪರಿಶ್ರಮ ಅಪಾರವಾಗಿದೆ ಎಂದು ಅವರು ಶ್ಲಾಘಿಸಿದರು.

ಇದನ್ನು ಓದಿದ್ದೀರಾ..? ನಸೀರ್ ಅಹ್ಮದ್ ರಾಜೀನಾಮೆ ಪಡೆದರೆ ಉಗ್ರ ಹೋರಾಟದ ಎಚ್ಚರಿಕೆ

ಈ ಸಂದರ್ಭದಲ್ಲಿ ಯಲ್ದೂರಿನ ಶ್ರೀನಿವಾಸ್ ಪಬ್ಲಿಕ್ ಶಾಲೆಯ ಅದ್ಯಕ್ಷ ರವೀಂದ್ರ, ಶ್ರೀ ಸಾಯಿ ಪಿಯು ಹಾಗೂ ಪದವಿ ಕಾಲೇಜಿನ ಅಧ್ಯಕ್ಷ ಸತೀಶ್ ರೆಡ್ಡಿ, ಪ್ರಾಂಶುಪಾಲರಾದ ತೇಜಸ್ವಿನಿ, ಸಹ ಕಾರ್ಯದರ್ಶಿ ಮಂಜುನಾಥ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...