ಕೆಜಿಎಫ್ | ಗಂದೋಡಹಳ್ಳಿಯಲ್ಲಿ ನೀರಿನ ಅದಾಲತ್: ಮೂಲಭೂತ ಸೌಕರ್ಯಗಳಿಗೂ ಆದ್ಯತೆ

Date:

ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳುವುದರ ಜೊತೆಗೆ, ಗ್ರಾಮಗಳ ಮೂಲಭೂತ ಸೌಕರ್ಯಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಆಡಳಿತ ಅಧಿಕಾರಿ ಎನ್. ವೆಂಕಟೇಶಪ್ಪ ತಿಳಿಸಿದರು.

- Advertisement -

​ಎನ್.ಜಿ. ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂದೋಡಹಳ್ಳಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ನೀರಿನ ಅದಾಲತ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

​ಬೇಸಿಗೆಯ ದಿನಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ತಡೆಯಲು ಈಗಾಗಲೇ ಗ್ರಾಮಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಪಡಿಸಲಾಗಿದೆ. ಸಮರ್ಪಕ ನೀರಿನ ಸರಬರಾಜುಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎನ್. ವೆಂಕಟೇಶಪ್ಪ ಅವರು ಭರವಸೆ ನೀಡಿದರು.

​ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು ಎಂದು ಅವರು ಇದೇ ವೇಳೆ ತಿಳಿಸಿದರು.

​ಗ್ರಾಮಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸಭೆಯಲ್ಲಿ ಪಿಡಿಒ ಮತ್ತು ಪಂಚಾಯಿತಿ ಸಿಬ್ಬಂದಿಗೆ ಗ್ರಾಮಗಳಲ್ಲಿ ರಾತ್ರಿ ವೇಳೆ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ತಕ್ಷಣವೇ ಬೀದಿ ದೀಪಗಳನ್ನು ಅಳವಡಿಸಲು ಸೂಚನೆ ನೀಡಿದರು.

​ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಗ್ರಾಮದ ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು.
​
​ಗ್ರಾಮದಲ್ಲಿ ಆರೋಗ್ಯಕರ ವಾತಾವರಣ ನಿರ್ಮಾಣವಾಗಲು ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ. ಸಾರ್ವಜನಿಕರು ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಯಾವುದೇ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗೃತಿ ವಹಿಸಬೇಕು ಎಂದು ಅಧಿಕಾರಿಗಳು ಸಭೆಯಲ್ಲಿ ಮನವಿ ಮಾಡಿದರು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮದಲ್ಲಿ ಪೈಪ್‌ಲೈನ್ ಅಳವಡಿಸಲು ಎಲ್ಲ ರಸ್ತೆಗಳನ್ನು ಕತ್ತರಿಸಲಾಗಿದ್ದು, ಇದರಿಂದ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿರುವುದರಿಂದ ಸಂಬಂಧಪಟ್ಟ ಗುತ್ತಿಗೆದಾರರಿಂದ ತಕ್ಷಣವೇ ರಸ್ತೆಗಳನ್ನು ದುರಸ್ತಿಗೊಳಿಸಬೇಕೆಂದು ಒತ್ತಾಯಿಸಿ ಗಂದೋಡಹಳ್ಳಿ ಗ್ರಾಮಸ್ಥರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶಪ್ಪ ಅವರಿಗೆ ಮನವಿ ಸಲ್ಲಿಸಿದರು.

​ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸುವ ಕಾಮಗಾರಿಗಾಗಿ ಮುಖ್ಯ ರಸ್ತೆ ಹಾಗೂ ಒಳರಸ್ತೆಗಳನ್ನು ಜೆಸಿಬಿ ಯಂತ್ರಗಳ ಮೂಲಕ ಅಗೆಯಲಾಗಿದೆ. ಆದರೆ, ಪೈಪ್‌ಲೈನ್ ಅಳವಡಿಸಿದ ನಂತರ ಗುತ್ತಿಗೆದಾರರು ರಸ್ತೆಯನ್ನು ಮೊದಲಿನ ಸ್ಥಿತಿಗೆ ತರದೆ ಹಾಗೆಯೇ ಬಿಟ್ಟಿದ್ದಾರೆ. ಇದರಿಂದಾಗಿ ರಸ್ತೆಯುದ್ದಕ್ಕೂ ಕಲ್ಲು-ಮಣ್ಣು ಹರಡಿಕೊಂಡಿದ್ದು, ಗುಂಡಿಗಳು ನಿರ್ಮಾಣವಾಗಿವೆ.

ರಸ್ತೆಗಳು ಹಾಳಾಗಿರುವುದರಿಂದ ಪಾದಚಾರಿಗಳು, ಶಾಲಾ ಮಕ್ಕಳು ಮತ್ತು ವಾಹನ ಸವಾರರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ಮಳೆ ಬಂದರೆ ಈ ರಸ್ತೆಗಳು ಕೆಸರುಗದ್ದೆಯಂತಾಗಲಿದ್ದು, ಅಪಘಾತಗಳು ಸಂಭವಿಸುವ ಭೀತಿ ಎದುರಾಗಿದೆ. ಕಾಮಗಾರಿ ಮುಗಿದ ತಕ್ಷಣ ರಸ್ತೆ ಸರಿಪಡಿಸುವುದು ಗುತ್ತಿಗೆದಾರರ ಜವಾಬ್ದಾರಿಯಾಗಿದ್ದರೂ, ಅವರು ಬೇಜವಾಬ್ದಾರಿತನ ಪ್ರದರ್ಶಿಸುತ್ತಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

​ಮನವಿ ಸ್ವೀಕರಿಸಿ ಮಾತನಾಡಿದ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶಪ್ಪ ಅವರು, ಈ ಕುರಿತು ತಕ್ಷಣವೇ ಸಂಬಂಧಪಟ್ಟ ಎಂಜಿನಿಯರ್‌ ಹಾಗೂ ಗುತ್ತಿಗೆದಾರರೊಂದಿಗೆ ಮಾತನಾಡಿ, ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆಗಳನ್ನು ಶೀಘ್ರವಾಗಿ ದುರಸ್ತಿಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ರೈತರ ಜಮೀನು ರೈತರಿಗೆ ಬಿಡಿ: ಅನಿರ್ದಿಷ್ಟ ಹೋರಾಟ 66ನೇ ದಿನಕ್ಕೆ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಎಸ್ ಡಿ ಎ ಸುನಿಲ್ ರೆಡ್ಡಿ, ಕರ ವಸುಲಿಗಾರ ವೆಂಕಟರಾಮಪ್ಪ ಸೇರಿದಂತೆ ಇತರರು ಹಾಗೂ ಗ್ರಾಮಸ್ಥರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...