ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕುಟುಂಬದ ವಿರುದ್ದ ಹೊಸದಾಗಿ ಮತ್ತೊಂದು ಪ್ರಕರಣ ದಾಖಲಾಗಿದೆ. ತನ್ನ ತಾಯಿಯನ್ನು ಪ್ರಜ್ವಲ್ ರೇವಣ್ಣ ಕುಟುಂಬ ಅಪಹರಿಸಿದೆ ಎಂದು ಆರೋಪಿಸಿ ಯುವಕನೋರ್ವ ದೂರು ದಾಖಲಿಸಿದ್ದಾನೆ.
ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಮೈಸೂರಿನ ಕೆಆರ್‌ನಗರದಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣವನ್ನು ಎಸ್‌ಐಟಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ರಾಜತಾಂತ್ರಿಕ ಪಾಸ್‌ಪೋರ್ಟ್ ಮೂಲಕ ಪ್ರಜ್ವಲ್ ಜರ್ಮನಿಗೆ ಪ್ರಯಾಣ: ವಿದೇಶಾಂಗ ಇಲಾಖೆ
“ಪ್ರಜ್ವಲ್ ರೇವಣ್ಣ ನನ್ನ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ. ಇದರ ಫೋಟೋಗಳು ಬಹಿರಂಗ ಆಗಿದ್ದವು. ಅದಾದ ಬಳಿಕ ನನ್ನ ತಾಯಿ ನಾಪತ್ತೆಯಾಗಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ ನನ್ನ ತಾಯಿಯನ್ನು ಅಪಹರಣ ಮಾಡಿದ್ದಾರೆ” ಎಂದು ಯುವಕ ದೂರಿನಲ್ಲಿ ತಿಳಿಸಿದ್ದಾನೆ.
ಈ ನಡುವೆ ತಮ್ಮ ಸಹೋದರ ಪ್ರಜ್ವಲ್ ರೇವಣ್ಣ ಮತ್ತು ತಂದೆ ಎಚ್.ಡಿ.ರೇವಣ್ಣ ವಿರುದ್ಧದ ಆರೋಪಗಳು ನಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಷಡ್ಯಂತ್ರ ಎಂದು ಎಂಎಲ್‌ಸಿ ಸೂರಜ್ ರೇವಣ್ಣ ಆರೋಪಿಸಿದ್ದಾರೆ.
ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಹಾಗೂ ಅವರ ಮಗ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು.
ಮೊದಲ ದೂರು ಆಧರಿಸಿ ಎಸ್ಐಟಿ ತನಿಖೆ ನಡೆಸುತ್ತಿದ್ದ ನಡುವೆಯೂ ಪ್ರಜ್ವಲ್ ವಿರುದ್ಧ ಮತ್ತೊಬ್ಬ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಅದನ್ನೂ ಎಸ್‌ಐಟಿಗೆ ಹಸ್ತಾಂತರಿಸಲಾಗಿತ್ತು. ಈಗ ಮೈಸೂರಿನಲ್ಲಿ ರೇವಣ್ಣ ಕುಟುಂಬದ ವಿರುದ್ಧವೇ ಪ್ರಕರಣ ದಾಖಲಾಗಿದೆ.