ಕಿತ್ತೂರು | ಕಾಂಗ್ರೆಸ್ ಶಾಸಕ ಬಾಬಾ ಸಾಹೇಬ್ ಪಾಟೀಲ್‌ರಿಗೆ ಬಿಜೆಪಿಯಿಂದ ₹100 ಕೋಟಿ ಆಫರ್?

Date:

ಬೆಳಗಾವಿ ಜಿಲ್ಲೆಯ ಕಿತ್ತೂರು ಕಾಂಗ್ರೆಸ್‌ ಶಾಸಕ ಬಾಬಾಸಾಹೇಬ್ ಪಾಟೀಲ್ ಹಾಗೂ ಚಿಕ್ಕಮಗಳೂರು ಶಾಸಕ ಎಚ್.ಡಿ ತಮ್ಮಯ್ಯ ಅವರಿಗೆ ಬಿಜೆಪಿಯಿಂದ ₹ 100 ಕೋಟಿ ಆಫರ್ ಮಾಡಲಾಗಿದೆ ಎಂಬ ಸ್ಪೋಟಕ ಹೇಳಿಕೆಯನ್ನು ಶಾಸಕ ರವಿ ಗಣಿಗ ನೀಡಿದ್ದಾರೆ.

- Advertisement -

ಕಿತ್ತೂರು ಶಾಸಕ ಮತ್ತು ಚಿಕ್ಕಮಗಳೂರಿನ ಶಾಸಕರ ಭೇಟಿಯ ಆಡಿಯೋ, ವಿಡಿಯೋ ರೆಕಾರ್ಡ್ ಇದೆ. ಸಮಯ ನೋಡಿ ಬಿಡುಗಡೆ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಹೇಳಿದ ಮಾತು ಸತ್ಯವಾಗಿದೆ. ಕಾಂಗ್ರೆಸ್‌ ಶಾಸಕರನ್ನು ವಿರೋಧ ಪಕ್ಷದವರು ಯಾವಾಗ ಯಾವ ಗೆಸ್ಟ್‌ಹೌಸ್‌ಗೆ ಬಂದಿದ್ದರು, ಯಾವ ಏರ್‌ಪೋರ್ಟ್‌ನಲ್ಲಿ ಸಿಕ್ಕಿದ್ದರು ಎನ್ನುವುದರ ಆಡಿಯೋ, ವಿಡಿಯೋ ಎಲ್ಲ ದಾಖಲೆಗಳಿವೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ಗಮನಕ್ಕೆ ತರಲಾಗಿದೆ. ಸದ್ಯದಲ್ಲಿ ಬಿಡುಗಡೆ ಮಾಡಲಾಗುವದು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶಾಸಕ ರವಿಕುಮಾರ ಗಣಿಗ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕಿತ್ತೂರು ಕಾಂಗ್ರೆಸ್ ಶಾಸಕ ಬಾಬಾಸಾಹೇಬ್ ಪಾಟೀಲ್‌, “ಬಿಜೆಪಿಯ ಯಾವ ನಾಯಕರು ನನ್ನ ಸಂಪರ್ಕ ಮಾಡಿಲ್ಲ. ಸರ್ಕಾರದ ಪ್ರಾರಂಭದ ಅವದಿಯಲ್ಲಿ ಬಿಜೆಪಿ ಪಕ್ಷದಿಂದ ಆಫರ್ ಬಂದಿದ್ದು ನಿಜ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಮಂಡ್ಯ | ಒಂದು ಟ್ವೀಟ್‌ನಿಂದ ಏನಾಗುತ್ತದೆ ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ!

“ಸ್ನೇಹ, ವಿಶ್ವಾಸದ ಮೇಲೆ ಬಿಜೆಪಿ ಪಕ್ಷದಲ್ಲಿನ ಸ್ನೇಹಿತರು ಆಹ್ವಾನ ನೀಡಿದ್ದರು. ಸದ್ಯ ನನಗೆ ಯಾವುದೇ ದುಡ್ಡಿನ ಆಫರ್ ಬಂದಿಲ್ಲ. ರವಿಕುಮಾರ್ ಗಣಿಗ ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು. ಅವರು ಯಾಕೆ ಹೀಗೆ ಹೇಳಿದ್ದಾರೆ ಎಂದು ಅವರಿಗೆ ಕೇಲುವೆ. ಅವರ ಬಳಿ ಆಡಿಯೋ, ವಿಡಿಯೋ ದಾಖಲೆ ಇದ್ದರೆ ಬಿಡುಗಡೆ ಮಾಡಲಿ” ಎಂದು ಶಾಸಕ ಬಾಬಾಸಾಹೇಬ್ ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...