ಮುಂಗಾರು ಮಳೆ ಆರಂಭವಾಗಿರುವುದರಿಂದ, ರಸ್ತೆ ಕುಸಿತ ತಡೆಯಲು ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಜುಲೈ 1ರಿಂದ 30ರವರೆಗೆ ನಿಷೇಧಿಸಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಎಲ್ಲ ಬಗೆಯ ಮರಳು ಮತ್ತು ಮರದ ದಿಮ್ಮಿಗಳನ್ನು ಸಾಗಿಸುವ, 18,500 ಕೆ.ಜಿಗಿಂತ ಹೆಚ್ಚಿನ ಸರಕು ಸಾಗಿಸುವ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೇನರ್, ಆರ್ಟ್‌ಕ್ಯುಲೇಟೆಡ್ ವಾಹನಗಳ ಸಂಚಾರವನ್ನು ಮಳೆ ಮುಗಿಯುವವರೆಗೆ ಜಿಲ್ಲಾದ್ಯಂತ ನಿಷೇಧಿಸಲಾಗಿದೆ.
ಅಡುಗೆ ಅನಿಲ, ಇಂಧನ, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣದ ವಾಹನಗಳಷ್ಟೇ ಸಂಚರಿಸಬಹುದು.
ನಿರ್ಬಂಧ ವಿನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು(ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ಸಂಚರಿಸಬಹುದು. ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 116 ರಂದು ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರ ಅನುಮತಿ ಇದೆ.
ಈ ಸುದ್ದಿ ಓದಿದ್ದೀರಾ? ವಿಜಯನಗರ | ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ
“ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಿದೆ” ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
