ಕೊಡಗು | ಸುಂಟಿಕೊಪ್ಪದಲ್ಲಿ ಪತ್ತೆಯಾಗಿದ್ದ ಮೃತದೇಹ ಪ್ರಕರಣಕ್ಕೆ ತಿರುವು; ಪತ್ನಿ ಸೇರಿ ಮೂವರ ಬಂಧನ

Date:

Advertisements

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ಪತ್ತೆಯಾಗಿದ್ದ ಮೃತದೇಹ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಪತ್ನಿ ಸೇರಿದಂತೆ ಮೂವರು ಆರೋಪಿಗಳ ಬಂಧನವಾಗಿದೆ.

ಮೃತ ರಮೇಶ್ ಕುಮಾರ್‌ನ ಎರಡನೇ ಪತ್ನಿ ನಿಹಾರಿಕ ಮತ್ತು ಆಕೆಯ ಬಾಯ್ ಫ್ರೆಂಡ್ಸ್ ಹರಿಯಾಣದ ಅಂಕುರ್ ರಾಣಾ ಮತ್ತು ನಿಖಿಲ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಇತ್ತೀಚಿಗೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಪನ್ಯ ತೋಟದ ಮಾರಿಗುಡಿ ಬಳಿ ಕಾಫಿ ಗಿಡಗಳ ಮಧ್ಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಪುರುಷನೋರ್ವನ ಮೃತದೇಹ ಪತ್ತೆಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಕೊಲೆ ಪ್ರಕರಣವನ್ನು ಚಾಣಕ್ಷತನದಿಂದ ಭೇದಿಸುವಲ್ಲಿ ಕೊಡಗು ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.

Advertisements

ಅತ್ಯಂತ ಕ್ಲಿಷ್ಟಕರವೆನಿಸಿದ್ದ ಅಂತರ್ ರಾಜ್ಯಗಳ ಲಿಂಕ್ ಹೊಂದಿರುವ ಈ ನಿಗೂಢ ಕೊಲೆ ಪ್ರಕರಣದ ಜಾಡನ್ನು ಸಿನಿಮೀಯ ರೀತಿಯಲ್ಲಿ ಆರೋಪಿಗಳೇ ದಂಗಾಗುವ ರೀತಿಯಲ್ಲಿ ಬಯಲಿಗೆಳೆದು ಅವರನ್ನು ಕಾರಾಗೃಹ ವಾಸಕ್ಕೆ ತುತ್ತಾಗುವಂತೆ ಮಾಡಿರುವ ಪೊಲೀಸರ ನಿರಂತರ ಕಾರ್ಯಾಚರಣೆ, ಶ್ರಮ ಹಾಗೂ ಸಫಲತೆ ಶ್ಲಾಘನೀಯವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಡನನ್ನು ಹತ್ಯೆಗೈದ ಪತ್ನಿ ಸೇರಿದಂತೆ ಒಟ್ಟು ಮೂವರು ಆರೋಪಿಗಳ ಹೆಡೆಮುರಿ ಕಟ್ಟಲಾಗಿದ್ದು, ಮರ್ಸಿಡಸ್ ಬೆಂಝ್ ಕಾರು, ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ತೆಲಂಗಾಣದ ರಮೇಶ್ ಕುಮಾರ್ ಎಂಬುವವರು ಬೆಂಗಳೂರಿನ ರಾಮಮೂರ್ತಿನಗರದಲ್ಲಿ ವಾಸವಾಗಿರುವ ಮೂಲತಃ ತೆಲಂಗಾಣದವಳಾದ ತನ್ನ ಪತ್ನಿ ಪಂತುಲ್ ನಿಹಾರಿಕ, ಹರ್ಯಾಣ ರಾಜ್ಯದ ಅಂಕುರು ರಾಣಾ ಹಾಗೂ ನಿಖಿಲ್ ಮೈರೆಡ್ಡಿ ಎಂಬುವವರಿಂದ ಕೊಲೆಗೀಡಾಗಿದ್ದರು.

ಅಕ್ಟೋಬರ್‌ 8ರಂದು ಸುಂಟಿಕೊಪ್ಪ ಪೊಲೀಸ್ ಠಾಣಾ ಸರಹದ್ದಿನ ಪನ್ಯ ಎಸ್ಟೇಟ್ ಬಳಿ ಸಂದೇಶ್ ಎಂಬುವವರ ಕಾಫಿ ತೋಟದಲ್ಲಿ ಅರ್ಧಂಬರ್ಧ ಬೆಂದಿರುವ ಗಂಡಸಿನ ಶವವನ್ನು ಕಾರ್ಮಿಕರು ನೋಡಿದ್ದು, ಮಾಲೀಕರು ನೀಡಿದ ದೂರಿನ ಮೇರೆಗೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಕಲಂ 103, 234 ಬಿಎನ್‌ಎಸ್‌ನಂತೆ ಪ್ರಕರಣ ದಾಖಲಾಗಿತ್ತು.

ಮೃತದೇಹ ಪತ್ತೆ ಸ್ಥಳ

ದೂರಿನನ್ವಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೊಡಗು ಜಿಲ್ಲಾ ಪೊಲೀಸ್ ಅಧಿಕ್ಷಕ ಕೆ ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಕೆ ಎಸ್ ಸುಂದರ್ ರಾಜ್, ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್ ವಿ ಗಂಗಾಧರಪ್ಪ ಇವರ ಮಾರ್ಗದರ್ಶನದಲ್ಲಿ ಮೃತನ ಹಾಗೂ ಆರೋಪಿಗಳ ಪತ್ತೆಗಾಗಿ ಸೋಮವಾರಪೇಟೆ ಪೊಲೀಸ್ ಠಾಣೆಯ ನಿರೀಕ್ಷಕ ಮುದ್ದು ಮಾದೇವ, ಸುಂಟಿಕೊಪ್ಪ ಠಾಣಾಧಿಕಾರಿ ಚಂದ್ರಶೇಖರ್, ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಇಲಾಖೆಯ ಇನ್ನಿತರ ಅಧಿಕಾರಿಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ 16 ಜನರ ಒಟ್ಟು 4 ವಿಶೇಷ ತಂಡಗಳನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಕುಮಾರಸ್ವಾಮಿ ಆರೋಪ ಮಾಡೋದು ಬಿಟ್ಟು ಚುನಾವಣೆ ಎದುರಿಸಲಿ: ಡಿ.ಕೆ ಸುರೇಶ್

ತನಿಖಾ ತಂಡಗಳು ವಿವಧೆಡೆ ಸುಮಾರು 500ಕ್ಕಿಂತಲೂ ಹೆಚ್ಚಿನ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ ಮೊಬೈಲ್ ಕರೆಗಳ ಜಾಡು ಹಿಡಿದು 10 ದಿನ ಕಾರ್ಯಾಚರಣೆ ನಡೆಸಿ ಕೃತ್ಯಕ್ಕೆ ಕಾರನ್ನು ಬಳಸಿರಬಹುದಾದ ಸಂಶಯಾಸ್ಪದ ಮೇರೆ ಆರೋಪಿಗಳನ್ನು ಖೆಡ್ದಾಕ್ಕೆ ಕೆಡವಿದ್ದಾರೆ.

ಘಟನೆಯ ಹಿನ್ನೆಲೆ

ಆರೋಪಿ ನಿಹಾರಿಕಳು ಮೃತ ರಮೇಶ್ ಕುಮಾರ್‌ನನ್ನು ಮದುವೆಯಾಗಿದ್ದು, ಆಸ್ತಿ ಮಾರಾಟದಿಂದ ₹8 ಕೋಟಿ ಹಣ ಪಡೆಯುವ ಉದ್ದೇಶದಿಂದ ಬಾಯ್ ಫ್ರೆಂಡ್ ಹರಿಯಾಣ ಮೂಲದ ಅಂಕುರ್ ರಾಣಾನನ್ನು ಅಕ್ಟೋಬರ್‌ 01ರಂದು ಮತ್ತು ಅಕ್ಟೋಬರ್‌ 03 ರಂದು ರಮೇಶ್ ಕುಮಾರ್‌ನನ್ನು ಹೈದರಾಬಾದ್‌ಗೆ ಬರಲು ತಿಳಿಸಿದ್ದಾಳೆ. ಡ್ರಾಪ್ ಮಾಡುವ ನೆಪದಲ್ಲಿ ಮರ್ಸಿಡಸ್ ಬೆಂಝ್‌ ಕಾರಿನಲ್ಲಿ ಹೊರಟು ತೆಲಂಗಾಣದ ಉಪ್ಪಲ್-ಭುವನಗಿರಿ ಹೆದ್ದಾರಿಯಲ್ಲಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ರಮೇಶ್ ಕುಮಾರ್‌ನನ್ನು ಕೊಲೆ ಮಾಡಿದ್ದಾರೆ. ನಂತರ ಅಲ್ಲಿಂದ ಇವರಿಬ್ಬರು ಕಾರಿನಲ್ಲಿ ಮೃತದೇಹವನ್ನು ಬೆಂಗಳೂರಿಗೆ ತಂದು ಹೊರಮಾವು ಎಂಬಲ್ಲಿದ್ದ ಇನ್ನೋರ್ವ ಬಾಯ್ ಫ್ರೆಂಡ್ ನಿಖಿಲ್‌ಗೆ ವಿಷಯ ತಿಳಿಸಿದ್ದಾಳೆ. ನಂತರ ಅದೇ ಕಾರಿನಲ್ಲಿ ಶವವನ್ನು ಸುಂಟಿಕೊಪ್ಪ ಪನ್ಯ ತೋಟಕ್ಕೆ ತಂದು ಬೆಂಕಿಹಚ್ಚಿ ಸುಟ್ಟು ಅಲ್ಲಿಂದ ಹಿಂತಿರುಗಿದ್ದರು.

ಇದೀಗ ಪ್ರಕರಣದ ವಿಶೇಷ ತನಿಖಾಧಿಕಾರಿಯಾಗಿರುವ ಸೋಮವಾರಪೇಟೆ ಪೊಲೀಸ್ ಠಾಣೆಯ ನಿರೀಕ್ಷಕ ಮುದ್ದು ಮಾದೇವ ಅವರು ತನಿಖೆಯನ್ನು ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X