ಕೊಡಗು | ಗೋಣಿಕೊಪ್ಪಲಿನಲ್ಲಿ ದಿಢೀರ್ ಕುಸಿತಗೊಂಡ ಹೋಟೆಲ್ ಕಟ್ಟಡ; ಹಲವರಿಗೆ ಗಾಯ

Date:

Advertisements

ಕೊಡಗು ಜಿಲ್ಲೆಯ ಗೋಣಿಕೊಪ್ಪಲ್‌ನಲ್ಲಿ ಹೋಟೆಲ್‌ ಇದ್ದ ಕಟ್ಟಡವೊಂದು ದಿಢೀರನೆ ಕುಸಿತಗೊಂಡ ಘಟನೆ ಗುರುವಾರ(ಜೂನ್ 20) ಮಧ್ಯಾಹ್ನದ ವೇಳೆ ನಡೆದಿರುವುದಾಗಿ ವರದಿಯಾಗಿದೆ.

ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿರುವ ಅಂಬೂರ್ ಧಮ್ ಬಿರಿಯಾನಿ ಹೋಟೆಲ್ ಇದ್ದ ಕಟ್ಟಡ ಇಂದು ದಿಢೀರನೆ ಕುಸಿದು ಬಿದ್ದು ಹೋಟೆಲ್‌ನಲ್ಲಿದ್ದ ಕಾರ್ಮಿಕರು, ಊಟಕ್ಕೆ ತೆರಳಿದ್ದ ಗ್ರಾಹಕರು ಸಿಲುಕಿಕೊಂಡ ಘಟನೆ ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಸಲು ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೊಲೀಸರು ಧಾವಿಸಿದ್ದಾರೆ.

ತೀರಾ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದಲ್ಲಿ ಒಂದು ಭಾಗದಲ್ಲಿ ಅಂಬುರ್ ಬಿರಿಯಾನಿ ಹೋಟೆಲ್ ಮತ್ತೊಂದರಲ್ಲಿ ಮಟನ್ ಸ್ಟಾಲ್ ಅಂಗಡಿ ಇತ್ತು. ಇದೀಗ ಕಟ್ಟಡ ಸಂಪೂರ್ಣವಾಗಿ ನೆಲಸಮಗೊಂಡಿದೆ. ಕಟ್ಟಡ ಕುಸಿತಗೊಂಡ ಬೆನ್ನಲ್ಲೇ ಸ್ಥಳೀಯರು ಕಾರ್ಯ ಪ್ರವೃತ್ತರಾಗಿ ಸಿಲುಕಿದ್ದವರನ್ನು ರಕ್ಷಿಸಲು ಯತ್ನಿಸಿದ್ದಾರೆ.

Advertisements

ಘಟನೆಯ ವೇಳೆ ಹೋಟೆಲ್‌ನಲ್ಲಿ ಗ್ರಾಹಕರ ಸಹಿತ ಸುಮಾರು 7ರಿಂದ 10 ಮಂದಿ ಕಟ್ಟಡದ ಒಳಗಿದ್ದರು ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಗೋಣಿಕೊಪ್ಪಲು ಅಗ್ನಿಶಾಮಕ ದಳದ ಸಿಬ್ಬಂದಿಗಳು, ಕಾರ್ಯಾಚರಣೆ ಸಿಲುಕಿಕೊಂಡವರಲ್ಲಿ ಮೂವರನ್ನು ರಕ್ಷಿಸಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಗಾಯಾಳುಗಳ ವಿವರಗಳು ಇನ್ನೂ ಲಭ್ಯವಾಗಿಲ್ಲ.

ಇನ್ನೂ ಕೆಲವರು ಕಟ್ಟಡದ ಅಡಿ ಸಿಲುಕಿರುವ ಸಾಧ್ಯತೆ ಇದ್ದು, ಜೆಸಿಬಿ ಮೂಲಕ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವಲ್ಲಿ ನಿರತರಾಗಿದ್ದಾರೆ. ಕಾರ್ಯಾಚರಣೆ ಭರದಿಂದ ಸಾಗಿದೆ.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

ಕಟ್ಟಡ ಬೀಳುತ್ತಿರುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕುಸಿತಗೊಂಡ ಕಟ್ಟಡದ ಎದುರು ಬದಿಯಲ್ಲಿದ್ದ ಕಟ್ಟಡವೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಕಟ್ಟಡ ಬೀಳುತ್ತಿರುವ ದೃಶ್ಯವು ಸೆರೆಯಾಗಿದೆ.

ಕಟ್ಟಡ ಕುಸಿಯುತ್ತಿದ್ದಂತೆಯೇ ಸ್ಥಳದಲ್ಲಿದ್ದ ಕೆಲವರು ಪ್ರಾಣ ಉಳಿಸಿಕೊಳ್ಳಲು ಓಡುತ್ತಿದ್ದ ದೃಶ್ಯ ಸೆರೆಯಾಗಿದೆ. ಘಟನೆಯಿಂದಾಗಿ ಕಟ್ಟಡದ ಸಮೀಪ ನಿಲ್ಲಿಸಿದ್ದ ಕೆಲವು ವಾಹನಗಳು ಕೂಡ ಜಖಂ ಆಗಿದೆ.

ಗೋಣಿಕೊಪ್ಪಲು ನಗರ ಪ್ರವೇಶಿಸಲು ವಿರಾಜಪೇಟೆಯಿಂದ ಬರುವ ವಾಹನಗಳು ಹೆಚ್ ಟಿ ಪೆಟ್ರೋಲ್ ಬಂಕ್ ಮುಖಾಂತರ ಬೈಪಾಸ್ ರಸ್ತೆ ಸಂಚಾರ ಮಾಡಿ, ಮೈಸೂರು ಹಾಗೂ ಪಾಲಿಬೆಟ್ಟ ರಸ್ತೆಯಿಂದ ಬರುವ ವಾಹನಗಳು ಪೊನ್ನಂಪೇಟೆ ಜಂಕ್ಷನ್ ಗಾಗಿ ಬೈಪಾಸ್ ರಸ್ತೆ ಮುಖಾಂತರ ಸಂಚರಿಸುವಂತೆ ಪೊಲೀಸರು ಮಾಹಿತಿ ನೀಡಿದ್ದಾರೆ.

gani

Gonikoppla

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

Download Eedina App Android / iOS

X