ಮಡಿಕೇರಿಯಲ್ಲಿ ಗೌಡ ಜನಾಂಗದ ಬಗ್ಗೆ ಅವಹೇಳನ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಒಕ್ಕಲಿಗ ಸಮಾಜದಿಂದ ಬೃಹತ್ ಪ್ರತಿಭಟನೆ ನಡೆಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮಡಿಕೇರಿಯ ಗುಡ್ಡೆಮನೆ ಅಪ್ಪಯ್ಯ ಗೌಡ ಪ್ರತಿಮೆ ಬಳಿಯಿಂದ ಆರಂಭವಾದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಪ್ರತಿಭಟನೆಗೆ ಮೈಸೂರು, ಬೆಂಗಳೂರು ಗೌಡ ಸಮಾಜಗಳು ಸಾಥ್ ನೀಡಿದವು. ಶಾಂತಿಯುತವಾಗಿ ನಡೆದ ಪ್ರತಿಭಟನೆಗೆ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಬೀದರ್ | ಸಮ ಸಮಾಜ ನಿರ್ಮಾಣಕ್ಕೆ ಪರ್ಯಾಯ ರಾಜಕಾರಣ ಅಗತ್ಯ : ನಟ ಚೇತನ್
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಯವರು ಮಾಧ್ಯಮದವರೊಂದಿಗೆ ಮಾತನಾಡಿ, “ಶಾಂತಿಯುತವಾಗಿ ಪ್ರತಿಭಟನೆಯನ್ನು ಮಾಡಿ ಮನವಿಯನ್ನು ಸಲ್ಲಿಸಿದ್ದಾರೆ. ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಾವು ಹಾಗೂ ಪೊಲೀಸ್ ಇಲಾಖೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುತ್ತೇವೆ. ಕೊಡಗು ಜಿಲ್ಲೆಯನ್ನು ಎಲ್ಲ ಜನಾಂಗಗಳ ಶಾಂತಿಯ ತೋಟವನ್ನಾಗಿ ಕಾಪಾಡಿಕೊಳ್ಳಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದರು.