ಕೊಡಗು | ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

Date:

ಪರಿಸರದ ಸ್ವಚ್ಛತೆ ಕಾಪಾಡುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಪ್ರಮುಖವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ʼಸ್ವಚ್ಛತಾ ಹೀ ಸೇವಾ’ ಪಾಕ್ಷಿಕ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆಪ್ಟಂಬರ್ 17ರಿಂದ ಅಕ್ಟೋಬರ್ 2ರವರೆಗೂ ʼಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆʼ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ʼಸ್ವಚ್ಛತಾ ಹೀ ಸೇವಾʼ ಜಿಲ್ಲಾದ್ಯಂತ ನಡೆಯಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.

- Advertisement -

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಗಿಡ ನೆಡುವ ಮೂಲಕ ʼಸ್ಚಚ್ಛತಾ ಹೀ ಸೇವಾʼ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...
ಸ್ವಭಾವ ಸ್ವಚ್ಛತೆ ಸಂಸ್ಕಾರ ಸ್ವಚ್ಛತೆ

ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಮಾತನಾಡಿ, “ಈ ಅಭಿಯಾನವು ಸ್ವಚ್ಛತೆಗಾಗಿ ಬೃಹತ್ ಪ್ರಮಾಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಮತ್ತು ಸಮುದಾಯದ ಭಾಗವಹಿಸುವಿಕೆಗೆ ಅನುಕೂಲ ಮಾಡಿಕೊಡುತ್ತದೆ. ಎಲ್ಲೆಂದರಲ್ಲಿ ಅಕ್ರಮವಾಗಿ ತ್ಯಾಜ್ಯ ಸುರಿಯುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಸಮುದಾಯದ ಭಾಗವಹಿಸುವಿಕೆಯೊಂದಿಗೆ ಈ ಸ್ಥಳವನ್ನು ಸ್ವಚ್ಛಗೊಳಿಸಲಾಗುತ್ತದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ. ಜತೆಗೆ ಈ ರೀತಿಯಾಗಿ ಅಕ್ರಮವಾಗಿ ತ್ಯಾಜ್ಯ ಸುರಿಯುವವರಿಗೆ ದಂಡ ವಿಧಿಸಲಾಗುತ್ತದೆ” ಎಂದು ಹೇಳಿದರು.

ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಿ ಧನರಾಜು ದೀಪ ಬೆಳಗಿಸುವ ಮೂಲಕ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, “ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ಉದ್ದೇಶದಿಂದ, ಎಲ್ಲರ ಆರೋಗ್ಯದ ಹಿತದೃಷ್ಟಿಯಿಂದ, ಒಮ್ಮೆ ಉಪಯೋಗಿಸುವ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುತ್ತೇನೆ. ದಿನನಿತ್ಯ ಬಳಕೆಯಲ್ಲಿ ಪ್ಲಾಸ್ಟಿಕ್‍ ಬಳಸದೇ ಪರಿಸರ ಸ್ನೇಹಿ ಕೈಚೀಲ ವಸ್ತುಗಳನ್ನು ಉಪಯೋಗಿಸುತ್ತೇನೆ” ಎಂದರು.

“ಮನೆಯ ಕಸವನ್ನು ಹಸಿ ಮತ್ತು ಒಣ ಕಸವನ್ನಾಗಿ ವಿಂಗಡಿಸಿ, ವಿಲೇವಾರಿ ಮಾಡುತ್ತೇನೆ. ಎಲ್ಲೆಂದರಲ್ಲಿ ಕಸ ಬಿಸಾಡದಂತೆ ಜನರಲ್ಲಿ ಜಾಗೃತಿ ಮೂಡಿಸಿ ನಮ್ಮ ಗ್ರಾಮವನ್ನು ಸ್ವಚ್ಛ, ಸುಂದರವನ್ನಾಗಿಸಲು ಶ್ರಮಿಸುತ್ತೇನೆ” ಎಂದು ಪ್ರತಿಜ್ಞೆ ನುಡಿದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರು, “ಗ್ರಾಮವನ್ನು ಸ್ವಚ್ಛ-ಸುಂದರ ಹಾಗೂ ಆರೋಗ್ಯವಂತವಾಗಿರಿಸಿ, ಜವಾಬ್ದಾರಿಯುತ ನಾಗರಿಕನಾಗಿ ಸೇವೆ ಮಾಡುವುದಾಗಿ ದೃಢ ಪ್ರತಿಜ್ಞೆ ಮಾಡುತ್ತೇವೆ, ಸ್ವಚ್ಚ ಮೇವ ಜಯತೇ” ಎಂದು ʼತಾಯಿಯ ಹೆಸರಲ್ಲಿ ಒಂದು ವೃಕ್ಷʼ (ಏಕ್ ಪೇಡ್ ಮಾ ಕೇ ನಾಮ್) ಅಭಿಯಾನದ ಭಾಗವಾಗಿ ಸಸಿ ನೆಟ್ಟು ನೀರೆರೆದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಟಿಪ್ಪು ಕುರಿತು ಪ್ರಚೋದನಾಕಾರಿ ಭಾಷಣ; ಯತ್ನಾಳ್ ವಿರುದ್ಧ ಎಫ್‌ಐಆರ್

ಕಾರ್ಯಕ್ರಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ್ ನಾಯಕ್, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ಸ್ವಚ್ಛ ಭಾರತ್ ಮಿಷನ್ ಯೋಜನೆಯ ಜಿಲ್ಲಾ ಸಮಾಲೋಚಕ ಹರ್ಷಿತ, ಪೆಮ್ಮಯ್ಯ, ಸೂರಜ್, ವಾಸುದೇವ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...