ಮಡಿಕೇರಿ | ಕೊಡಗು ಅಭಿವೃದ್ಧಿ ಸಮಿತಿಯಿಂದ ಅನಧಿಕೃತ ಅಂಗಡಿಗಳ ತೆರವುಗೊಳಿಸುವಂತೆ ಮನವಿ

Date:

ಕೊಡಗು ಜಿಲ್ಲೆ, ಮಡಿಕೇರಿ ನಗರ ಬಸ್ ಡಿಪೋದಿಂದ ಕೆಲವೇ ಅಂತರದಲ್ಲಿರುವ, ಅಂದರೆ ಬ್ಲಾಕ್ ನಂಬರ್ 16, ಸರ್ವೆ ನಂಬರ್ 53/6 ರಲ್ಲಿ ಅನಧಿಕೃತವಾಗಿ ಯಾವುದೇ ಪರವಾನಿಗೆ ಪಡೆಯದಿರುವ ಅಂಗಡಿಗಳನ್ನು ತೆರವುಗೊಳಿಸುವಂತೆ ಕೊಡಗು ಅಭಿವೃದ್ಧಿ ಸಮಿತಿ ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರಿಗೆ ಮನವಿ ಸಲ್ಲಿಸಿದೆ.

- Advertisement -

ಸದರಿ ಜಾಗದಲ್ಲಿ ಅಂಗಡಿಗಳನ್ನು ತೆರವುಗೊಳಿಸಲು ಮಾಹಿತಿ ನೀಡಿದ್ದರೂ ಕೂಡ ಸುಮಾರು 10ಕ್ಕೂ ಹೆಚ್ಚು ಅಂಗಡಿಗಳನ್ನು ನಿರ್ಮಾಣ ಮಾಡಿಕೊಂಡು, ರಸ್ತೆಯನ್ನು ಒತ್ತುವರಿ ಮಾಡಿಕೊಂಡು, ಪರವಾನಗಿ ತೆಗೆದುಕೊಳ್ಳದೆ ವ್ಯಾಪಾರವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನಗರಸಭೆ ಸದಸ್ಯರಿಂದ ಹಿಡಿದು, ಸಮಾಜದಲ್ಲಿ ಗಣ್ಯ ವ್ಯಕ್ತಿಗಳು ಎನಿಸಿಕೊಂಡಿರುವವರ ಬೇನಾಮಿ ಹೆಸರಿನಲ್ಲಿ ಇರುವ ಆಸ್ತಿಯನ್ನು, ಈ ರೀತಿಯಾಗಿ ನಗರಸಭೆಗೆ ಮೋಸ ಮಾಡಿ, ನಗರಸಭೆಯಿಂದ ಪರವಾನಗಿ ಪಡೆಯದೆ, ವ್ಯವಹಾರಗಳನ್ನು ಮಾಡುತ್ತಿರುವುದು ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಜನ ಸಾಮಾನ್ಯರಿಗೆ ಒಂದು ನ್ಯಾಯ, ಬಡವನಿಗೆ ಒಂದು ನ್ಯಾಯ ಆಗಿದೆ. ಈ ನಗರಸಭೆ ಆಡಳಿತದಲ್ಲಿ ಬೇಲಿಯೇ ಎದ್ದು ಹೊಲವನ್ನು ಮೇಯುವಂತಿದೆ. ಆದುದರಿಂದ, ಕೊಡಗು ಅಭಿವೃದ್ದಿ ಸಮಿತಿಯಿಂದ ಮನವಿ ಸಲ್ಲಿಸುತ್ತಿದ್ದು ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಇಂತಹ ಅನಧಿಕೃತ ಶೆಡ್‌ಗಳಿಗೆ ಪರವಾನಗಿ ಇದಿಯಾ?, ಕಾನೂನಿನ ಪ್ರಕಾರ ಈ ಶೆಡ್‌ಗಳನ್ನು ನಿರ್ಮಾಣ ಮಾಡಿದ್ದಾರಾ? ಪರಿಶೀಲನೆ ಮಾಡಿ, ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕೊಳ್ಳೆಗಾಲ | ಆನ್ಲೈನ್ ಸಾಲದ ಆಪ್ ನಿಂದ ವಂಚನೆ; ಯುವಕನ ಅಸಹಜ ಸಾವು

ಮನವಿ ಸಲ್ಲಿಸುವಾಗ ಕಾವೇರಪ್ಪ,ಲೀಲಾ ಶೇಷಮ್ಮ, ಪ್ರಮೋದ್, ಸಂದೀಪ್ ಹಾಗೂ ಪ್ರಸನ್ನ ಭಟ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...