ಕೊಡಗು | ಕನ್ನಡ ರಾಜ್ಯೋತ್ಸವದ ಸಕಲ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

Date:

ನವೆಂಬರ್ 01ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಅದಕ್ಕಾಗಿ, ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ ನೀಡಿದ್ದಾರೆ.

- Advertisement -

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ತಯಾರಿಗಾಗಿ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಪೂರ್ವಭಾವಿ ಸಭೆ ನಡೆಸಿದರು. “ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು. ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ದಸರಾ ಸಂದರ್ಭದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು. ವಾಹನಗಳ ಪಾರ್ಕಿಂಗ್ ಮತ್ತು ಹೆಚ್ಚಿನ ಮಳೆಯಿಂದಾಗಿ ಕ್ರೀಡಾಂಗಣದಲ್ಲಿ ಗುಂಡಿಗಳಾಗಿವೆ. ಅವುಗಳನ್ನು ಮುಚ್ಚಿ, ಮೈದಾನವನ್ನು ಸ್ವಚ್ಛಗೊಳಿಸಬೇಕು” ಎಂದು ಪೌರಾಯುಕ್ತರು ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಬೇರೆ ಬೇರೆ ಶಾಲೆಗಳಿಗೆ ಅವಕಾಶ ಮಾಡಬೇಕು. ಕನ್ನಡ ರಾಜ್ಯೋತ್ಸವ ಸಂಬಂಧ ಹಾಡುಗಳನ್ನು ಒಳಗೊಂಡಿರಬೇಕು. ಸಾಂಸ್ಕೃತಿಕ ಕಾಯಕ್ರಮ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರ್ವ ತಯಾರಿ ಮೇಲುಸ್ತುವಾರಿ ನಡೆಸಬೇಕು. ತಂಡಗಳನ್ನು ಆಯ್ಕೆ ಮಾಡಬೇಕು” ಎಂದರು.

“ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ಜಜಾರೋಹಣ ಮತ್ತು ವೇದಿಕೆ, ಪಥ ಸಂಚಲನ, ಉಪಾಹಾರ, ಬಹುಮಾನ, ಸ್ವಚ್ಚತೆ ಹಾಗೂ ಕುಡಿಯುವ ನೀರು ಹೀಗೆ ವಿವಿಧ ಉಪ ಸಮಿತಿಗಳು ತಮ್ಮ ತಮ್ಮ ಹಂತದಲ್ಲಿ ಸಮಾಲೋಚನೆ ನಡೆಸಿ ಅಕ್ಟೋಬರ್ 25 ರೊಳಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು” ಎಂದು ನಿರ್ದೇಶಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಸಿ ರಂಗಧಾಮಪ್ಪ, ಜಿಪಂ ಉಪ ಕಾರ್ಯದರ್ಶಿ ಧನರಾಜ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ ಆರ್ ಶೆಟ್ಟಿ, ಜಿಪಂ ಎಂಜಿನಿಯರ್ ಜಿ ಕೆ ನಾಯಕ್, ಡಿವೈಎಸ್‍ಪಿ ಮಹೇಶ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳ, ಡಾ ಮಧುಸೂದನ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ ಬಸಪ್ಪ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಅನಿತಾ ಭಾಸ್ಕರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ತಹಶೀಲ್ದಾರ್ ಪ್ರವೀಣ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಪೌರಾಯುಕ್ತ ಎಚ್ ಆರ್ ರಮೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಶಿವಶಂಕರ, ಸ್ಕೌಟ್ಸ್ ಮತ್ತು ಗೈಡ್ಸನ ಸಮನ್ವಯಾಧಿಕಾರಿ ದಮಯಂತಿ ಮೊದಲಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...