ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಕಳೆದ ಒಂದು ವರ್ಷ ಎಂಟು ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಡಾ. ಬಿ ಸಿ ಸತೀಶ ಅವರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿ ಡಾ. ವೆಂಕಟ್ ರಾಜಾ, ಹಿಂದೆ ಕೋಲಾರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ, ಕೊಪ್ಪಳ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ, ಬೀದರ್‌ನಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ” ಎಂದು ತಿಳಿಸಿದರು.
“ಬೆಂಗಳೂರಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಜೊತೆಗೆ ಕೋವಿಡ್ ಸಂದರ್ಭದಲ್ಲಿ ನೋಡಲ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ” ಎಂದು ಮಾಹಿತಿ ನೀಡಿದರು.
“ಪಾರದರ್ಶಕ ಮತ್ತು ಜನಸ್ನೇಹಿಯಾಗಿ ಆಡಳಿತ ನೀಡಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಪಣ ತೊಡಲಾಗುವುದು” ಎಂದರು.
ಈ ಸುದ್ದಿ ಓದಿದ್ದೀರಾ? ಎರಡು ಲಕ್ಷ ಟನ್ ಅಕ್ಕಿಗೆ ಪ್ರಧಾನಿ ಬಳಿ ಯಾರೂ ಬೇಡಿಕೆ ಇಟ್ಟಿಲ್ಲ: ನಳಿನ್ ಕುಮಾರ್ ಕಟೀಲ್