ಆಟವಾಡುವಾಗ ಉಂಗುರ ನುಂಗಿದ್ದ 8 ತಿಂಗಳ ಮಗು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕರಡಿಗೋಡಿನಲ್ಲಿ ನಡೆದಿದೆ.
ರಿಜ್ವಾನ್ ಎಂಬುವವರ ಮಗು ಮುನೀರ್ ಮೃತ ಹಸುಳೆ. ಆಟವಾಡುವ ಸಮಯದಲ್ಲಿ ಮಗು ಆಕಸ್ಮಿಕವಾಗಿ ಉಂಗುರವನ್ನು ನುಂಗಿದೆ. ಅದನ್ನು ಗಮನಿಸಿದ ಪೋಷಕರು ಕೂಡಲೇ ಮಗುವನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.
ಮಗುವಿಗೆ ತೀವ್ರ ಉಸಿರಾಟದ ತೊಂದರೆಯಿದ್ದಿದ್ದರಿಂದ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮಗುವಿನ ಆರೋಗ್ಯ ತಪಾಸಣೆ ನಡೆಸಿದ ವೈದ್ಯರ ತಂಡ ಮೂರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಉಂಗುರವನ್ನು ಹೊರತೆಗೆದಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಮಗು ಗುರುವಾರ ಬೆಳಿಗಿನ ಜಾವ ಮೃತಪಟ್ಟಿದೆ ಎಂದು ತಿಳಿದುಬಂದಿದೆ.