ಕೊಡಗು | ನಾಪೋಕ್ಲು ಭಾಗದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ; ಗ್ರಾಮಸ್ಥರ ಆಕ್ರೋಶ

Date:

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಭಾಗದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ ಆಟದಂತಾಗಿದ್ದು, ಬಿರುಸಾದ ಮಳೆಯಿಂದ ಓಡಾಟ ಸಾಧ್ಯವಿರದ ಪರಿಸ್ಥಿತಿಯ ನಡುವೆ ವಿದ್ಯುತ್ ಇಲ್ಲದಿರುವುದು ತಲೆ ನೋವಿನ ವಿಚಾರವಾಗಿದೆ.

- Advertisement -

ವಿದ್ಯುತ್ ಸಮಸ್ಯೆ ತಲೆದೂರಲು ಅಭಿಯಂತರರೇ ಕಾರಣ. ಕೊಡಗಿನಲ್ಲಿ ಗಾಳಿ, ಮಳೆ ಇರುವಾಗ ಸಮರ್ಪಕ ನಿರ್ವಹಣೆಗೆ ಸಿಬ್ಬಂದಿಯನ್ನು ನಿಯೋಜನೆ ಮಾಡದೇ ಇರುವುದು ಇದಕ್ಕೆಲ್ಲ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ದಿನ.ಕಾಮ್ ಜೊತೆ ಮಾತನಾಡಿದ ಸ್ಥಳೀಯ ನಿವಾಸಿ ಮೊಹಮ್ಮದ್ ಕೊಟ್ಟಮುಡಿ, “ನಾಪೋಕ್ಲು ಭಾಗದಲ್ಲಿ ಮೂರ್ನಾಲ್ಕು ಸಿಬ್ಬಂದಿಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು ಕಕ್ಕಬೆ, ಎಮ್ಮೆಮಾಡು, ನೆಲಜಿ, ನಾಪೋಕ್ಲು, ಕೊಟ್ಟಮುಡಿ, ಪಾಲೂರು ಸೇರಿದಂತೆ ಹಲವು ಗ್ರಾಮಗಳನ್ನು ನೋಡಿಕೊಳ್ಳಬೇಕು. ಕೊಡಗಿನಂತ ಆಯಕಟ್ಟಿನ ಪ್ರದೇಶದಲ್ಲಿ ನಾಲ್ಕು ಜನರಿಂದ ಇದೆಲ್ಲ ಸಾಧ್ಯವೇ?” ಎಂದು ಕೇಳಿದ್ದಾರೆ.

ವಿದ್ಯುತ್‌ ರಿಪೇರಿ

“ಬೆರಳೆಣಿಕೆಯ ಸಿಬ್ಬಂದಿಗಳು ಸಾಕಾಗುವುದಿಲ್ಲ. ಆದರೂ ನಮ್ಮಗಳ ಫೋನ್ ಕರೆಗೆ ಸ್ಪಂದಿಸಿ ಸಾಧ್ಯವಾದಷ್ಟು ಕೆಲಸ ನಿರ್ವಹಿಸುತ್ತಿದ್ದಾರೆ. ಕಾಫಿ ತೋಟದೊಳಗೆ ಹಾದು ಹೋಗಿರುವ ವಿದ್ಯುತ್ ಲೈನ್‌ಗಳ ಮೇಲೆ ಮರಗಳ ಕೊಂಬೆಗಳು ಬೆಳೆದಿದ್ದು ತೋಟದ ಮಾಲೀಕರಾಗಲಿ, ಊರಿನವರಾಗಲಿ ಸಿಬ್ಬಂದಿಗಳಿಗೆ ಸ್ಪಂದಿಸಿ ತೆರವು ಮಾಡದೆ ಇರುವುದರಿಂದ ವಿದ್ಯುತ್ ತಂತಿ ಆಗಾಗ ತುಂಡಾಗಿ ಗ್ರಾಮಗಳು ಸಮಸ್ಯೆಗೆ ಸಿಲುಕುತ್ತಿವೆ” ಎಂದರು.

ಹಮೀದ್ ಕೊಟ್ಟಮುಡಿ ಮಾತನಾಡಿ, “ಮಳೆಗಾಳಿಯನ್ನು ಲೆಕ್ಕಿಸದೆ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಕೊಡಗಿನ ಮಳೆಯ ಹೊಡೆತಕ್ಕೆ ಸಿಬ್ಬಂದಿಗಳು ಹೈರಾಣು. ಉನ್ನತ ಅಧಿಕಾರಿಗಳು ಇದನ್ನೆಲ್ಲ ಸೂಕ್ಷ್ಮವಾಗಿ ಗಮನಿಸಿ ಅಗತ್ಯ ಇರುವ ಸಿಬ್ಬಂದಿಗಳ ನಿಯೋಜನೆ ಮಾಡಬೇಕು. ಸಿಬ್ಬಂದಿಗಳು ಸರಿಯಾಗಿಲ್ಲದೆ ಇರುವುದರಿಂದ ಸಾರ್ವಜನಿಕರು, ನಾವುಗಳು ಕತ್ತಲೆಯಲ್ಲಿ ದಿನ ದೂಡುವಂತಾಗಿದೆ” ಎಂದರು.

ವಿದ್ಯುತ್‌‌ ರಿಪೇರಿ

“ಮಳೆಯಿಂದಾಗಿ ಬೆಟಗೇರಿ, ಕೊಟ್ಟಮುಡಿ, ಹೊದ್ದೂರು ಭಾಗದಲ್ಲಿ ಗ್ರಾಮಗಳು ಜಲಾವೃತವಾಗಿದ್ದು, ಓಡಾಟ ನಿರ್ಬಂಧ. ಇನ್ನು ಸೇತುವೆಗಳು ಮುಳುಗಡೆ ಆಗಿದೆ. ಸ್ಥಳೀಯರಿಗೆ ಸರಿಯಾದ ಯಾವ ನೆರವು ಕೂಡ ಸಿಗುತ್ತಿಲ್ಲ. ಸಂಚಾರ ಇರದ ಕಾರಣ ನಾವುಗಳು ಕೂಡ ಹೊರಗೆ ತೆರಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕಾವೇರಿ ಪ್ರವಾಹದಿಂದ ಮುಳುಗಡೆ ಭೀತಿಯಲ್ಲಿ ಎಣ್ಣೆಹೊಳೆ ಗ್ರಾಮ

ಅಹ್ಮದ್ ಕೆ ಎಸ್ ಮಾತನಾಡಿ, “ಈಗಾಗಲೇ ಜೆಇ ಅವರ ಗಮನಕ್ಕೆ ತಂದು ಹೆಚ್ಚಿನ ಸಿಬ್ಬಂದಿಗಳನ್ನು ನಿಯುಕ್ತಿ ಮಾಡಿ ವಿದ್ಯುತ್ ಸಮಸ್ಯೆ ನಿವಾರಣೆ ಮಾಡಿ. ಇಲ್ಲವಾದಲ್ಲಿ ಪ್ರತಿಭಟನೆಗೆ ಮುಂದಾಗಬೇಕಾಗುತ್ತೆಂದು ಎಚ್ಚರಿಕೆ ನೀಡಿದ್ದೇವೆ. ಇನ್ನು ಮಳೆಯಿಂದ ಜಲಾವೃತವಾಗಿರುವ ಪ್ರದೇಶಗಳಿಗೆ ಅಗತ್ಯವಿರುವ ನೆರವಿನ ವ್ಯವಸ್ಥೆ ಕೈಗೊಳ್ಳಬೇಕು. ಮಳೆ ಕಡಿಮೆ ಆದರೂ ನೀರು ಇಳಿದಿಲ್ಲ.
ಡೆಂಘೀ ಸಮಸ್ಯೆ ಇರುವುದರಿಂದ ನೀರು ನಿಲ್ಲುವುದು ಒಳ್ಳೆಯದಲ್ಲ. ಸಮರ್ಪಕ ನಿರ್ವಹಣೆ, ಆರೋಗ್ಯದ ಕಾಳಜಿಯ ಕಡೆಗೆ ತಾಲ್ಲೋಕು, ಜಿಲ್ಲಾಡಳಿತ ಗಮನ ಹರಿಸಬೇಕು” ಎಂದು ಮನವಿ ಮಾಡಿದರು.

WhatsApp Image 2023 09 02 at 8.42.26 PM
ಮೋಹನ್ ಜಿ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...