ಕೊಡಗು | ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಪ್ರವಾಹ ಸಂತ್ರಸ್ತೆ

Date:

2019ರ ಪ್ರವಾಹದಲ್ಲಿ ಮನೆ ಕಳೆದುಕೊಂಡು ನಿರ್ಗತಿಕಳಾಗಿರುವ ಕೊಡಗು ಜಿಲ್ಲೆಯ ವೃದ್ಧೆಯೊಬ್ಬರು ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ಜಿಲ್ಲೆಯ ನೆಲ್ಲಿಹುದಿಕೇರಿಯ ನಿವಾಸಿ ಶಾಂತಾ (66) ದಯಾಮರಣಕ್ಕಾಗಿ ಪತ್ರ ಬರೆದಿದ್ದಾರೆ. ಕೊಡುಗು ಜಿಲ್ಲೆಯಲ್ಲಿ 2019ರಲ್ಲಿ ಸುರಿದ ಭಾರೀ ಮಳೆಯಿಂದಾಗಿ ಶಾಂತಾ ಅವರ ಮನೆ ಕುಸಿದು ಬಿದ್ದಿತ್ತು. ಪುನರ್ವಸತಿಗಾಗಿ ಅವರು ಹಲವಾರು ಅರ್ಜಿಗಳನ್ನು ಸಲ್ಲಿಸಿ, ಕಚೇರಿಗಳಿಗೆ ಅಲೆದಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮನೆ ಕಳೆದುಕೊಂಡು ನಾಲ್ಕು ವರ್ಷಗಳಾದರು ಪುನರ್ವಸತಿ ಪಡೆಯಲಾಗದೆ ಶಾಂತಾ ಬೇಸತ್ತಿದ್ದಾರೆ. ಹೀಗಾಗಿ, ತಮಗೆ ಮನೆ ಕಟ್ಟಿಸಿಕೊಡಿ, ಇಲ್ಲವೇ, ದಯಾಮರಣಕ್ಕೆ ಅನುಮತಿ ಕೊಡಿ ಎಂದು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

“ತನಗೆ ಮನೆ ನೀಡುವಲ್ಲಿ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ. ಒಂದೋ ನನಗೆ ಮನೆ ನಿರ್ಮಿಸಲು ಸರ್ಕಾರ ಸಹಾಯ ಮಾಡಬೇಕು ಅಥವಾ ಸಾಯಲು ನನಗೆ ಅನುಮತಿ ನೀಡಬೇಕು: ಎಂದು ಪತ್ರದಲ್ಲಿ ಬರೆದಿದ್ದಾರೆ.

”ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಇತರೆ ಸಚಿವರು ಹೊಸ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಮನೆಗಳು ಸಿದ್ಧವಾಗುವವರೆಗೆ ನಮ್ಮ ಬಾಡಿಗೆಯನ್ನು ಪಾವತಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಆದರೆ, ಇದ್ಯಾವುದೂ ಆಗಲಿಲ್ಲ” ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ಸದ್ಯ ವಿಧವೆಯಾಗಿರುವ ಶಾಂತಾ ತನ್ನ ಮಗನೊಂದಿಗೆ ಬಾಡಿಗೆ ಮನೆಯಲ್ಲಿದ್ದಾರೆ. ಮನೆಗೆಲಸ ಮಾಡಿಕೊಂಡು ಜೀವನ ದೂಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...