“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸಕಾಂಗದ ಕರ್ತವ್ಯ” ಎಂದು ಶಾಸಕ ಡಾ ಮಂತರ್ ಗೌಡ ಹೇಳಿದರು.
ಕೊಡಗು ಜಿಲ್ಲೆ ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸಕಾಂಗದ ಕರ್ತವ್ಯ”ಎಂದು ಅಭಿಮತ ವ್ಯಕ್ತಪಡಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಮೂಲಭೂತ ಸಮಸ್ಯೆಗಳ ಕುರಿತಾಗಿ ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಲೋಕೋಪಯೋಗಿ, ಸೆಸ್ಕ್, ಆರೋಗ್ಯ, ಶಿಕ್ಷಣ, ಪೌರಾಡಳಿತ, ಗಣಿ ಸೇರಿದಂತೆ ಹಲವು ಇಲಾಖೆ ಕೆಲಸ ಕಾರ್ಯಗಳಿಗೆ ಸಾರ್ವಜನಿಕರಿಂದ ಪ್ರತಿನಿತ್ಯ ಕಚೇರಿಗಳಿಗೆ ಬರುತ್ತಾರೆ ಅಧಿಕಾರಿಗಳು ಕಾನೂನು ರೀತ್ಯಾ ಅವರ ಅರ್ಜಿಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದು ಹೈರಾಣಾಗದೆ ಜನ ಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಸ್ಥಳೀಯವಾಗಿ ನೂರಾರು ಸಮಸ್ಯೆಗಳಿವೆ. ಅದನ್ನು ಕಾನೂನಾತ್ಮಕವಾಗಿ,ಆಡಳಿತದ ಚೌಕಟ್ಟಿನಲ್ಲಿ ಪರಾಮರ್ಶಿಸಿ ಕೆಲಸ ಮಾಡಬೇಕು. ಸಾರ್ವಜನಿಕರ ಕೆಲಸವನ್ನು ಶ್ರದ್ಧೆಯಿಂದ, ಕರ್ತವ್ಯ ಬದ್ಧರಾಗಿ ಮಾಡಬೇಕು. ಕುಂದುಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಡಾ ಮಂತರ್ ಗೌಡ ಕರೆ ನೀಡಿದರು.
ಸಾರ್ವಜನಿಕರು ಸರ್ಕಾರಿ ಕಚೇರಿಗೆ ಬಂದಾಗ ಅಧಿಕಾರಿಗಳು ಇಲ್ಲ, ರಜೆ, ಸಭೆ ಅನ್ನುವ ಸಬೂಬು ಹೇಳದೆ ಕೆಲಸ ಮಾಡಬೇಕು. ತಕ್ಷಣವೆ ಹಿಂಬರಹ ನೀಡುವಂತ ಕೆಲಸ ಆಗಬೇಕು ಎಂದು ಸೂಚನೆ ನೀಡಿದರು.
ಇದನ್ನು ಓದಿದ್ದೀರಾ? ಚುನಾವಣಾ ಪ್ರಚಾರದ ವೇಳೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿಗೆ ಗಾಯ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ, ಜಿ ಪಂ ಸಿ ಇ ಒ ಆನಂದ್, ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಅಧ್ಯಕ್ಷ ವಿ ಪಿ ಶಶಿಧರ, ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಡಿಪಿ ಸಮಿತಿ ಸದಸ್ಯ ಸುನಿತಾ, ತಹಶೀಲ್ದಾರ್ ಕಿರಣ್ ಗೌರಯ್ಯ, ನವೀನ್ ಕುಮಾರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
