ಕೊಡಗು | ಜನರ ಸಮಸ್ಯೆಗಳನ್ನು ಕಾರ್ಯಾಂಗದ ಮೂಲಕ‌ ಪರಿಹರಿಸುವುದು ಶಾಸಕಾಂಗದ ಕರ್ತವ್ಯ: ಶಾಸಕ ಡಾ ಮಂತರ್ ಗೌಡ

Date:

Advertisements

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸಕಾಂಗದ ಕರ್ತವ್ಯ”  ಎಂದು ಶಾಸಕ ಡಾ ಮಂತರ್ ಗೌಡ ಹೇಳಿದರು.

ಕೊಡಗು ಜಿಲ್ಲೆ ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ‌ ಪರಿಹರಿಸುವುದು ಶಾಸಕಾಂಗದ ಕರ್ತವ್ಯ”ಎಂದು ಅಭಿಮತ ವ್ಯಕ್ತಪಡಿಸಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಮೂಲಭೂತ ಸಮಸ್ಯೆಗಳ ಕುರಿತಾಗಿ ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಲೋಕೋಪಯೋಗಿ, ಸೆಸ್ಕ್, ಆರೋಗ್ಯ, ಶಿಕ್ಷಣ, ಪೌರಾಡಳಿತ, ಗಣಿ ಸೇರಿದಂತೆ ಹಲವು ಇಲಾಖೆ ಕೆಲಸ ಕಾರ್ಯಗಳಿಗೆ ಸಾರ್ವಜನಿಕರಿಂದ ಪ್ರತಿನಿತ್ಯ ಕಚೇರಿಗಳಿಗೆ ಬರುತ್ತಾರೆ ಅಧಿಕಾರಿಗಳು ಕಾನೂನು ರೀತ್ಯಾ ಅವರ ಅರ್ಜಿಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದು ಹೈರಾಣಾಗದೆ ಜನ ಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

Advertisements

ಸ್ಥಳೀಯವಾಗಿ ನೂರಾರು ಸಮಸ್ಯೆಗಳಿವೆ. ಅದನ್ನು ಕಾನೂನಾತ್ಮಕವಾಗಿ,ಆಡಳಿತದ ಚೌಕಟ್ಟಿನಲ್ಲಿ ಪರಾಮರ್ಶಿಸಿ ಕೆಲಸ ಮಾಡಬೇಕು. ಸಾರ್ವಜನಿಕರ ಕೆಲಸವನ್ನು ಶ್ರದ್ಧೆಯಿಂದ, ಕರ್ತವ್ಯ ಬದ್ಧರಾಗಿ ಮಾಡಬೇಕು. ಕುಂದುಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಡಾ ಮಂತರ್ ಗೌಡ ಕರೆ ನೀಡಿದರು.

ಸಾರ್ವಜನಿಕರು ಸರ್ಕಾರಿ ಕಚೇರಿಗೆ ಬಂದಾಗ ಅಧಿಕಾರಿಗಳು ಇಲ್ಲ, ರಜೆ, ಸಭೆ ಅನ್ನುವ ಸಬೂಬು ಹೇಳದೆ ಕೆಲಸ ಮಾಡಬೇಕು. ತಕ್ಷಣವೆ ಹಿಂಬರಹ ನೀಡುವಂತ ಕೆಲಸ ಆಗಬೇಕು ಎಂದು ಸೂಚನೆ ನೀಡಿದರು.

ಇದನ್ನು ಓದಿದ್ದೀರಾ? ಚುನಾವಣಾ ಪ್ರಚಾರದ ವೇಳೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿಗೆ ಗಾಯ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ, ಜಿ ಪಂ ಸಿ ಇ ಒ ಆನಂದ್, ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಅಧ್ಯಕ್ಷ ವಿ ಪಿ ಶಶಿಧರ, ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಡಿಪಿ ಸಮಿತಿ ಸದಸ್ಯ ಸುನಿತಾ, ತಹಶೀಲ್ದಾರ್ ಕಿರಣ್ ಗೌರಯ್ಯ, ನವೀನ್ ಕುಮಾರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X