ಕೊಡಗು | ಕನ್ನಡ ಸಾಹಿತ್ಯ ಪರಿಷತ್ತನ್ನು ಗಟ್ಟಿಗೊಳಿಸಬೇಕು: ಕಸಾಪ ಅಧ್ಯಕ್ಷ ಎಂ ಪಿ ಕೇಶವ ಕಾಮತ್

Date:

ಸದಸ್ಯತ್ವ ಹೆಚ್ಚುಗೊಳಿಸುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ ಎಂದು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ಇತ್ತೀಚಿಗೆ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನುಡಿದರು.

“ಈಗಾಗಲೇ ಎಲ್ಲಾ ಕಾರ್ಯಕಾರಿ ಮಂಡಳಿಯ ಸದಸ್ಯರು, ತಾಲೂಕು ಅಧ್ಯಕ್ಷರು, ಹೋಬಳಿ ಅಧ್ಯಕ್ಷರು ಶ್ರಮ ಪಡುತ್ತಿದ್ದು ಒಂದು ಸಾವಿರಕ್ಕೂ ಹೆಚ್ಚು ಸದಸ್ಯತ್ವ ನೋಂದಾಯಿಸಲಾಗಿದೆ. ಈ ವರ್ಷದ ಕೊನೆಯೊಳಗಾಗಿ 10,000 ಸದಸ್ಯರನ್ನು ಹೊಂದುವ ಗುರಿ ಹೊಂದಿದ್ದು ಎಲ್ಲರೂ ಸಹಕರಿಸಬೇಕು” ಎಂದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ ಪಿ ರಮೇಶ್ ಮಾತನಾಡಿ, “ಪರಿಷತ್ತಿನ ಕಾರ್ಯಕಾರಿ ಮಂಡಳಿಯ ಎಲ್ಲ ಸದಸ್ಯರುಗಳು ಒಂದಾಗಿ ಎಲ್ಲ ಶಾಲೆ ಕಾಲೇಜುಗಳಿಗೂ ಭೇಟಿಯಾಗಿ ಸದಸ್ಯತ್ವವನ್ನು ಅಭಿಯಾನದ ರೀತಿಯಲ್ಲಿ ತೊಡಗಿಸಿಕೊಂಡು ಕಾರ್ಯನಿರ್ವಹಿಸಬೇಕು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪರಿಷತ್ತಿನಲ್ಲಿ ಈ ವರ್ಷ 35 ದತ್ತಿನಿಧಿ ಕಾರ್ಯಕ್ರಮಗಳಿದ್ದು, ಅವುಗಳನ್ನು ಶಾಲೆ-ಕಾಲೇಜುಗಳಲ್ಲಿ ನಡೆಸುವ ಮೂಲಕ ಕನ್ನಡ ನಾಡು ನುಡಿ ವಿದ್ಯಾರ್ಥಿಗಳಿಗೆ ತಿಳಿಯಪಡಿಸುವ ಕಾರ್ಯ ಆಗಬೇಕಾಗಿದೆ” ಎಂದರು.

ಕಾರ್ಯಕಾರಿ ಸಮಿತಿಯ ಲೆಕ್ಕ ಪರಿಶೋಧನಾ ಸಲಹಾಕಾರ ಸಂಜೀವ್ ಜೋಶಿ ಮಾತನಾಡಿ, ಪರಿಷತ್ತಿನ ಲೆಕ್ಕಪತ್ರ ವ್ಯವಸ್ಥಿತವಾಗಿ ನಿರ್ವಹಿಸುವ ಕುರಿತು ತಾಲೂಕು, ಹೋಬಳಿಗಳ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿಯವರಿಗೆ ಮಾಹಿತಿ ನೀಡಿದರು.

“ಮೃತಪಟ್ಟಿರುವ ಸದಸ್ಯರುಗಳ ಹೆಸರುಗಳನ್ನು ಈಗಾಗಲೇ ಗುರುತಿಸಿ ಕೇಂದ್ರಕ್ಕೆ ಕಳುಹಿಸಿದ್ದು, ಮುಂದಿನ ಚುನಾವಣೆ ಸಂದರ್ಭದಲ್ಲಿ ಆ ಸದಸ್ಯರ ಹೆಸರನ್ನು ಚುನಾವಣಾ ಪಟ್ಟಿಯಿಂದ ತೆಗೆಯುವ ಕೆಲಸವನ್ನು ಮಾಡಲಾಗುತ್ತಿದೆ” ಎಂದು ಅಧ್ಯಕ್ಷರು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಈ ಬಾರಿ ಡೆಂಘೀ ಜ್ವರ ಹೆಚ್ಚಳ; ಮುಚ್ಚಿರುವ ಆರೋಗ್ಯ ಕೇಂದ್ರಗಳನ್ನು ತೆರೆಯುವಂತೆ ಮನವಿ

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಎಸ್ ಐ ಮುನಿರ್ ಅಹಮದ್, ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್ ಎಸ್ ಸಂಪತ್ ಕುಮಾರ್, ಸಂಘಟನಾ ಕಾರ್ಯದರ್ಶಿ ಆರ್‌ ಪಿ ಚಂದ್ರಶೇಖರ್, ಜಲಜ ಶೇಖರ್, ಸಹ ಕಾರ್ಯದರ್ಶಿ ಎ ವಿ ಮಂಜುನಾಥ್, ಸೋಮವಾರಪೇಟೆ ತಾಲೂಕು ಕಸಾಪ ಅಧ್ಯಕ್ಷ ಎಸ್ ಡಿ ವಿಜೇತ್, ಮಡಿಕೇರಿ ತಾಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಡಿ ರಾಜೇಶ್ ಪದ್ಮನಾಭ, ಶ್ರೀಮಂಗಲ ಹೋಬಳಿ ಅಧ್ಯಕ್ಷ ಉಳುವಂಗಡ ಕಾವೇರಿ ಉದಯ, ಮೂರ್ನಾಡು ಹೋಬಳಿ ಅಧ್ಯಕ್ಷೆ ಈರಮಂಡ ಹರಿಣಿ, ಸಿದ್ದಾಪುರ ಹೋಬಳಿ ಅಧ್ಯಕ್ಷ ಟಿ ಎಚ್ ಮಂಜುನಾಥ್, ಐಗೂರು ಹೋಬಳಿ ಅಧ್ಯಕ್ಷ ನಂಗಾರು ಕೀರ್ತಿ ಪ್ರಸಾದ್, ಶಾಂತಳ್ಳಿ ಹೋಬಳಿ ಅಧ್ಯಕ್ಷ ಸಿ.ಎಸ್ ನಾಗರಾಜ್, ಪೊನ್ನಂಪೇಟೆ ಹೋಬಳಿ ಖಜಾಂಜಿ ಚಂದನ್ ಕಾಮತ್, ಕಚೇರಿ ಸಿಬ್ಬಂದಿ ರೇಣುಕಾ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ರೈತ ಮುಖಂಡ ಚಾಮರಸ ಮಾಲೀ ಪಾಟೀಲ್

"ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳ...

ಚಿಕ್ಕನಾಯಕನಹಳ್ಳಿ | ವೆಲ್ಡಿಂಗ್ ಮಾಲೀಕರ-ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ

ಚಿಕ್ಕನಾಯಕನಹಳ್ಳಿ ಪಟ್ಟಣದ ಮತಿಘಟ್ಟ ಗೇಟ್ ಬಳಿಯಿರುವ ವೀರಭದ್ರೇಶ್ವರ ಇಂಜಿನಿಯರಿಂಗ್ ವರ್ಕ್ಸ್ ಆವರಣದಲ್ಲಿ...

ಶಿವಮೊಗ್ಗ | ವ್ಯಾಪಕ ಮಳೆ ಹಿನ್ನೆಲೆ: ಜು.16ರಂದು ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ...

ಕಲಬುರಗಿ | ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ವೈದ್ಯರು ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆಂದು...