ಕೊಡಗು | ಕೆಎಂಎ ಪ್ರತಿಭಾ ಪುರಸ್ಕಾರ; ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಗೌರವ

Date:

ಕೊಡವ ಮುಸ್ಲಿಂ ಅಸೋಸಿಯೇಷನ್(ಕೆಎಂಎ) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಪ್ರಸ್ತುತ ಸಾಲಿನ ಕೆಎಂಎ ಪ್ರತಿಭಾ ಪುರಸ್ಕಾರವನ್ನು 21 ವಿದ್ಯಾರ್ಥಿಗಳು ಪಡೆದುಕೊಂಡರು.

ವಿರಾಜಪೇಟೆಯ ಸೇಂಟ್ ಆನ್ಸ್ ಪ್ಯಾರಿಸ್ ಸಭಾಂಗಣದಲ್ಲಿ ನಡೆದ ಕೆಎಂಎ ಪ್ರತಿಭಾ ಪುರಸ್ಕಾರ-2023 ವಿತರಣಾ ಸಮಾರಂಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಸಂಶನಾ ಪತ್ರ ನೀಡಿ ಗೌರವಿಸಿದರು.

ಮುಂಬೈನ ಎನ್‌ಸಿಟಿ ಗ್ರೂಪ್ ಮಾಲೀಕ ಅಕ್ಕಳತಂಡ ಎಸ್ ಮೊಯ್ದು ಅವರ ಪ್ರಾಯೋಜಕತ್ವದಲ್ಲಿ ದಿ ಅಕ್ಕಳತಂಡ ಎಸ್ ಹಂಸ ಅವರ ಸ್ಮರಣಾರ್ಥವಾಗಿ ಆಕರ್ಷಕ ನಗದು ಬಹುಮಾನವನ್ನು ಒಳಗೊಂಡ ಕೆಎಂಎ ವಿಶೇಷ ಪ್ರತಿಭಾ ಪುರಸ್ಕಾರ-2023ನ್ನು ಈ ಸಮಾರಂಭದಲ್ಲಿ 2022-23ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿರಾಜಪೇಟೆಯ ಸೇಂಟ್ ಆನ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಟಿ ವಿ ವೈಷ್ಣವಿ ಮತ್ತು ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೋಲೆನ್ಸಿಯಾ ಬಿಯಾನ್ ರಾಯ್ ಅವರಿಗೆ ಕ್ರಮವಾಗಿ ನೀಡಿ ಗೌರವಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೆಎಂಎ ಅಧ್ಯಕ್ಷ ದುದ್ದಿಯಂಡ ಹೆಚ್ ಸೂಫಿ ಹಾಜಿ ಮಾತನಾಡಿ, “ಪ್ರಸ್ತುತ ಸಾಲಿನಲ್ಲಿ ಕೆಎಂಎ ಪ್ರತಿಭಾ ಪುರಸ್ಕಾರಕ್ಕಾಗಿ ಸಾಕಷ್ಟು ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದನ್ನು ಪರಿಶೀಲಿಸಿದ ಕೆಎಂಎ ಕಾರ್ಯಕಾರಿ ಸಮಿತಿಯು ಮೆರಿಟ್ ಆಧಾರದಲ್ಲಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆಗೊಳಿಸಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಉತ್ತೇಜಿಸಲು ಕೆಎಂಎ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಸರ್ಕಾರದ ಮೀಸಲಾತಿ ಪಡೆಯಲು ಧರ್ಮ ಮುಖ್ಯವಲ್ಲ: ಜಯಪ್ರಕಾಶ್ ಹೆಗ್ಡೆ

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಹಿರಿಯ ಪ್ರಾಧ್ಯಾಪಕ ತಂಬಂಡ ವಿಜಯ್ ಪೂಣಚ್ಚ, ಕೆಎಂಎ ಸ್ಥಾಪಕಾಧ್ಯಕ್ಷ ಕುವೆಂಡ ವೈ.ಹಂಝತುಲ್ಲಾ, ಮೂರ್ನಾಡಿನ ಹಿರಿಯ ವೈದ್ಯ ಡಾ. ಜೋಯಿಪೆರ ಎ. ಕುಂಞಬ್ದುಲ್ಲಾ, ಎನ್.ಸಿ.ಟಿ. ಗ್ರೂಪ್ ಮಾಲೀಕ ಅಕ್ಕಳತಂಡ ಎಸ್. ಮೊಯ್ದು, ದುಬೈನ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಪ್ರಮುಖ ಹರಿಶ್ಚಂದ್ರ ಎ. ಅಬೂಬಕ್ಕರ್ ಹಾಜಿ,‌ ಗೋಣಿಕೊಪ್ಪಲಿನ ಉದ್ಯಮಿ ಚಿಮ್ಮಿಚಿರ ಕೆ. ಇಬ್ರಾಹಿಂ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...

ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು...