ಕೊಡಗು | ಕಾವೇರಿ ನದಿಯಲ್ಲಿ ಮುಳುಗಿ ಕಾರ್ಮಿಕ ಸಾವು

Date:

ಸಹೋದ್ಯೋಗಿಗಳೊಂದಿಗೆ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಆಲಕ್ಕೋಡು ನಿವಾಸಿ ಅಪ್ಪು ಶ್ರೀಜೇಶ್ (34) ಮೃತ ಕಾರ್ಮಿಕ ಎಂದು ತಿಳಿದುಬಂದಿದೆ.

- Advertisement -

ನಾಪೋಕ್ಲು ಸಮೀಪದ ಹಳೆ ತಾಲೂಕಿನಲ್ಲಿ ಕಳೆದ ಎರಡು ತಿಂಗಳಿಂದ ಸಹೋದ್ಯೋಗಿಗಳೊಂದಿಗೆ ಕಟ್ಟಡ ಕಾಮಗಾರಿ ಕೆಲಸಕ್ಕೆಂದು ಕೇರಳದ ಕಣ್ಣೂರಿನಿಂದ ಬಂದಿದ್ದ ಶ್ರೀಜೇಶ್, ಬುಧವಾರ ಮಧ್ಯಾಹ್ನ ಮೂರು ಮಂದಿ ಸಹೋದ್ಯೋಗಿಗಳೊಂದಿಗೆ ಚೆರಿಯಪರಂಬು ಗ್ರಾಮದಲ್ಲಿರುವ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಎಎಸ್‍ಐ ಗೋಪಾಲಕೃಷ್ಣ, ಸಿಬ್ಬಂದಿಗಳಾದ ರವಿಕುಮಾರ್, ಶರತ್, ಲವ ಕುಮಾರ್, ಶರೀಫ್, ಪ್ರಸನ್ನ ಮತ್ತು ಗಣೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರಮ ಕೈಗೊಂಡಿದ್ದಾರೆ. 

ಈ ಸುದ್ದಿ ಓದಿದ್ದೀರಾ? ಹಾವೇರಿ | ಟ್ರ್ಯಾಕ್ಟರ್‌ ಪಲ್ಟಿ; ಚಾಲಕ ಸಾವು

ಮೃತ ದೇಹವನ್ನು ನಾಪೋಕ್ಲು ವಾಹನ ಚಾಲಕರ ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್, ಸ್ಥಳೀಯ ಹನೀಫ್, ಕರೀಮ್, ರಝಾಕ್ ಒಗ್ಗೂಡಿ ಒಂದು ಗಂಟೆಯ ಕಾಲ ನೀರಿನಲ್ಲಿ ಹುಡುಕಾಡಿ ಮೃತ ದೇಹವನ್ನು ಮೇಲೆತ್ತುವಲ್ಲಿ ಸಹಕರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...