ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ಹೊರವಲಯದ ಕುಟ್ಟಂದಿ ಗ್ರಾಮದಲ್ಲಿ ಸಂಭವಿಸಿದೆ.
ವಿರಾಜಪೇಟೆ ಚೆಸ್ಕಾಂ ಸಿಬ್ಬಂದಿ ಬಸವರಾಜ್ ತೆಗ್ಗಿ(26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಮೂಲತಃ ಬಾಗಲಕೋಟೆ ಜಿಲ್ಲೆಯ ಮಾರ್ನಾಲು ನಿವಾಸಿ. ಕಳೆದ ಐದು ವರ್ಷಗಳಿಂದ ವಿರಾಜಪೇಟೆ ಚೆಸ್ಕಾಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಭಾನುವಾರ ಬೆಳಿಗ್ಗೆ ಒಂಬತ್ತು ಗಂಟೆಯ ಸುಮಾರಿಗೆ ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ರೈತ ಹೋರಾಟಗಾರನ ವಿರುದ್ಧ ಹಲ್ಲೆ ಮಾಡಿದ ಆರೋಪಿಗಳ ಬಂಧನಕ್ಕೆ ಸಂಘಟನೆಗಳ ಆಗ್ರಹ
“ವಿದ್ಯುತ್ ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡದಿರುವುದು ಈ ಘಟನೆಗೆ ಕಾರಣವಾಗಿದೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.