ಕೊಡಗು | ಬಸವಣ್ಣನವರ ಆದರ್ಶ ಈಡೇರಿದೆಯೇ ಎಂಬುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ : ಶಾಸಕ ಡಾ. ಮಂತರ್ ಗೌಡ

Date:

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ ‘ ಬಸವಣ್ಣನವರ ಆದರ್ಶ ಈಡೇರಿದೆಯೇ ಎಂಬುದನ್ನು ನಮ್ಮನ್ನೇ ನಾವು ಪ್ರಶ್ನಿಸಿಕೊಳ್ಳಬೇಕಾಗಿದೆ ‘ ಎಂದರು.

- Advertisement -

” ಬಸವೇಶ್ವರರು 12 ನೇ ಶತಮಾನದಲ್ಲಿಯೇ ನಾಡಿನಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಆದರೆ, ರಾಷ್ಟ್ರಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾದರೂ ಎಲ್ಲರೂ ಸಮಾನವಾಗಿ ಬದುಕು ಕಟ್ಟಿಕೊಂಡಿದ್ದಾರೆಯೇ ಎಂಬ ಬಗ್ಗೆ ಆತ್ಮ ವಿಮರ್ಶೆ ಆಗಬೇಕು. ಸಮಾಜದಲ್ಲಿ ಇಂದಿಗೂ ಸಹ ಬಡವರು ಮತ್ತಷ್ಟು ಕಡು ಬಡವರಾಗಿ, ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿ ಬದುಕು ನಡೆಸುತ್ತಿದ್ದಾರೆ. ಆದರೆ, ಬಸವಣ್ಣ ಅವರ ಆಶಯ ಈಡೇರಿದೆಯೇ ಎಂಬುದನ್ನು ಪ್ರತಿಯೊಬ್ಬರೂ ಚಿಂತಿಸಬೇಕು. ಜಾತಿ, ಮತ, ಧರ್ಮ, ಲಿಂಗ ತಾರತಮ್ಯ ಇಲ್ಲದೆ ಬಸವಣ್ಣ ಅವರ ಆಶಯದಂತೆ ಪ್ರತಿಯೊಬ್ಬರೂ ನಡೆದುಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಮಾತನಾಡಿ ” ಬಸವೇಶ್ವರರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಬಸವೇಶ್ವರ ವಚನ ಸಂದೇಶಗಳನ್ನು ತಿಳಿದುಕೊಂಡು, ಅದನ್ನು ಪಾಲಿಸುವಂತಾಗಬೇಕು. ಬಸವ ತತ್ವಗಳು ವಿಶಾಲತೆಯಿಂದ ಕೂಡಿದ್ದು, ಬಸವೇಶ್ವರರ ವಚನಗಳು ಎಲ್ಲರಿಗೂ ದಾರಿ ದೀಪವಾಗಿದೆ. ಪ್ರತಿಯೊಬ್ಬರಲ್ಲಿಯೂ ಅಂತರಂಗ ಮತ್ತು ಬಹಿರಂಗದಲ್ಲಿ ಬದಲಾವಣೆ ಕಾಣುತ್ತೇವೆ, ಅಂತರಂಗ ಶುದ್ದಿಯಾಗಿರಬೇಕು. ಆಚರಣೆ, ನುಡಿಯಲ್ಲಿ ಒಂದೇ ಇರಬೇಕು. ಎಲ್ಲರಲ್ಲಿಯೂ ಕಾಯಕ ಪ್ರಜ್ಞೆ ಇರಬೇಕೆಂದು ” ಆಶಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ” ಬಸವೇಶ್ವರರು 12 ನೇ ಶತಮಾನದಲ್ಲಿ ಅನುಭವ ಮಂಟಪ ಮೂಲಕ ಪ್ರತಿಯೊಬ್ಬರೂ ಸಮಾನರು ಎಂಬ ಸಂದೇಶ ಸಾರಿದರು. ಸ್ತ್ರೀಯರಿಗೆ ಸಮಾನ ಅವಕಾಶ ಕಲ್ಪಿಸಿದರು. ವಚನ ಕ್ರಾಂತಿಯ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದರು. ಶ್ರೇಣೀಕೃತ ವ್ಯವಸ್ಥೆ, ಮೂಡನಂಬಿಕೆ, ಕಂದಾಚಾರ ಹೋಗಲಾಡಿಸಲು ಶ್ರಮಿಸಿದ್ದಾರೆ. ಜಾತಿ, ಧರ್ಮ, ಲಿಂಗಬೇಧವಿಲ್ಲದೆ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದಾರೆ ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ : ಎಲ್. ಎನ್. ಮುಕುಂದರಾಜ್

ಸೋಮವಾರಪೇಟೆ ವಿರಕ್ತ ಮಠದ ನಿಶ್ಚಲಾನಂದ. ಸ್ವಾಮೀಜಿ, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಮೂರ್ತಿ, ಅಖಿಲ‌ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ ಶಿವಪ್ಪ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ವುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ವೀರಶೈವ ಲಿಂಗಾಯತ ಸಮಾಜದ ಪ್ರಧಾನ ಕಾರ್ಯದರ್ಶಿ ಶಂಭಾ ಶಿವಮೂರ್ತಿ, ತಾಲ್ಲೂಕು ಘಟಕದ ಅಧ್ಯಕ್ಷ ರುದ್ರಪ್ರಸನ್ನ, ಆದಿ, ಟಿ.ಜಿ.ಪ್ರೇಮಕುಮಾರ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಪಿ.ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ನಿವೃತ್ತ ಶಿಕ್ಷಕ ಬಿ.ಸಿ.ಶಂಕರಯ್ಯ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...