ಕೊಡಗು | ದರೋಡೆ ನಡೆಸಿದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

Date:

ಮನೆಗೆ ನುಗ್ಗಿ ಚಾಕು ತೋರಿಸಿ, ಬೆದರಿಸಿ ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಹಾಗೂ ಮನೆಯ ಗಾಡ್ರೇಜ್‌ನಲ್ಲಿದ್ದ ಚಿನಾಭರಣಗಳನ್ನು ದರೋಡೆ ಮಾಡಿದ ಆರೋಪಿಯನ್ನು ಕೊಡಗು ಜಿಲ್ಲಾ ಪೊಲೀಸರು ಪ್ರಕರಣ ದಾಖಲಾದ ಆರು ಗಂಟೆಯಲ್ಲೇ ಬಂಧಿಸಿದ್ದಾರೆ.

- Advertisement -

ಸಣ್ಣ ಪೂಲಿಕೋಟು ಬಸ್ ನಿಲ್ದಾಣದ ಬಳಿ ಚೇರಂಬಾಣೆ ನಿವಾನಿ ಸುದರ್ಶನ್ (24) ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಜೊತೆಗೆ ಕಳವು ಮಾಡಿದ್ದ 60 ಗ್ರಾಂ 530 ಮಿಲಿ ಚಿನ್ನಾಭರಣಗಳನ್ನು ಮತ್ತು ರೂ. 620 ನಗದು ಹಾಗೂ ಕೃತ್ಯಕ್ಕೆ ಬಳಸಿದ ಡ್ರಾಗರ್(ಚಾಕು)ವನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಬಗ್ಗೆ ಮಾಹಿತಿ ನೀಡಿದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎ ರಾಮರಾಜನ್, ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಚೇರಂಬಾಣೆ ಗ್ರಾಮದ ನಿವಾಸಿಯಾದ ಗೋಪಾಲಕೃಷ್ಣ.ಕೆ.ಕೆ ಎಂಬುವವರ ಮನೆಗೆ ಆ.22ರಂದು ಬೆಳಗ್ಗೆ ಸುಮಾರು 11.30 ಗಂಟೆ ಸಮಯದಲ್ಲಿ ಮನೆಯಲ್ಲಿ ಗೋಪಾಲಕೃಷ್ಣ.ಕೆ.ಕೆ ರವರ ತಾಯಿ ಒಬ್ಬರೆ ಇರುವ ಸಂದರ್ಭ ಮನೆಗೆ ನುಗ್ಗಿ ಚಾಕು ತೋರಿಸಿ ಬೆದರಿಸಿ ಹಲ್ಲೆ ಮಾಡಿದ್ದ. ಬಳಿಕ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಹಾಗೂ ಮನೆಯ ಗಾಡ್ರೇಜ್‌ನಲ್ಲಿದ್ದ ಚಿನಾಭರಣಗಳನ್ನು ದರೋಡೆ ಮಾಡಿರುವ ಕುರಿತು ದೂರು ಸ್ವೀಕರಿಸಲಾಗಿತ್ತು. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ದಾಖಲಾದ ಆರು ಗಂಟೆಯಲ್ಲೇ ಬಂಧಿಸಿದ್ದಾರೆ ಎಂದು ತಿಳಿಸಿದರು.

ಪ್ರಕರಣ ಪತ್ತೆ ಹಚ್ಚುವ ಸಲುವಾಗಿ ಮಡಿಕೇರಿ ಉಪವಿಭಾಗ ಡಿ.ಎಸ್.ಪಿ ಮಹೇಶ್ ಕುಮಾರ್, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಪಿ.ಐ ಅನೂಪ್ ಮಾದಪ್ಪ, ಭಾಗಮಂಡಲ ಪಿಎಸ್‌ಐ ಶೋಭಾ ಲಮಾಣಿ ಸೇರಿದಂತೆ ವಿಶೇಷ ತಂಡವನ್ನು ರಚಿಸಿ ತನಿಖೆಯನ್ನು ಕೈಗೊಳ್ಳಲಾಗಿತ್ತು.

ಇದನ್ನು ಓದಿದ್ದೀರಾ? ಜೈಲಿನಲ್ಲಿ ದರ್ಶನ್‌ಗೆ ಐಷಾರಾಮಿ ಸೌಲಭ್ಯ: ಫೋಟೊ ವೈರಲ್

ಪ್ರಕರಣದ ಘಟನೆ ಸ್ಥಳಕ್ಕೆ ಹಿರಿಯ ಅಧಿಕಾರಿ/ಸಿಬ್ಬಂದಿಯವರುಗಳು ಭೇಟಿ ನೀಡಿ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ, ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ ಎಂದು ಮಾಹಿತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...