ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕು ಶನಿವಾರ ಸಂತೆಯಲ್ಲಿ ಪೊಲೀಸ್ ಪೇದೆಯೋರ್ವ ತನ್ನ ಪ್ರೇಯಸಿಯ ಪತಿಯನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.
ಕೊಲೆ ಯತ್ನ ನಡೆಸಿದ ಪೊಲೀಸ್ ಪೇದೆಯನ್ನು ಕೊಟ್ರೇಶ್ (30) ಹಾಗೂ ಕೊಲೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಪ್ರಿಯತಮೆ ಆಯಿಷಾ (29) ಎಂಬಾಕೆಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಪೇದೆ ಕೊಟ್ರೇಶ್ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು. ಪ್ರೇಯಸಿ ಆಯಿಷಾಳ ಮನೆ ಪಕ್ಕದಲ್ಲಿ ವಾಸವಾಗಿದ್ದ. ಆಯಿಷಾ ಪೊಲೀಸ್ ಪೇದೆ ಕೊಟ್ರೇೆಶ್ನನ್ನು ಮಂಗಳವಾರ ಮಧ್ಯರಾತ್ರಿ ಮನೆಗೆ ಕರೆಸಿದ್ದಾಳೆ. ಬಳಿಕ ಕೊಟ್ರೇಶ್ ತಲೆದಿಂಬಿನಿಂದ ಉಸಿರುಗಟ್ಟಿಸಿ ಆಯಿಷಾಳ ಪತಿ ಇಫ್ರಾಝ್ರನ್ನು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ಪಕ್ಕದ ಕೋಣೆಯಲ್ಲಿ ಮಲಗಿದ್ದ ಇಫ್ರಾಜ್ ಅಕ್ಕನ ಮಗ ನೆರವಿಗೆ ಧಾವಿಸಿ ಬದಿದ್ದು, ಇಫ್ರಾಝ್ ಜೀವ ಉಳಿಸಿದ್ದಾನೆ. ಈ ಘಟನೆಯಿಂದ ಆಯಿಷಾ ಹಾಗೂ ಪೇದೆ ಕೊಟ್ರೇಶ್ ನಡುವಿನ ವಿವಾಹೇತರ ಸಂಬಂಧ ಬಯಲಾಗಿದೆ.
ಪೊಲೀಸರು ಆರೋಪಿ ಕೊಟ್ರೇಶನ ವಿರುದ್ಧ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದರಿಂದ ಇಫ್ರಾಝ್ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.
ಇದನ್ನು ಓದಿದ್ದೀರಾ? ಮಂಗಳೂರು | ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋಗೆ ಪಿಕಪ್ ಡಿಕ್ಕಿ: ವಿದ್ಯಾರ್ಥಿನಿ ಮೃತ್ಯು; ಮೂವರಿಗೆ ಗಾಯ
ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಸೂಚನೆ ಮೇರೆಗೆ ಎಫ್ಐಆರ್ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ಮುಂದುವರಿಸಲಾಗಿದೆ.
