ಕೊಡಗು : ಜಿಲ್ಲೆಯಲ್ಲಿ ಭಾರೀ ಮಳೆ: ಹಲವು ಕಡೆಗಳಲ್ಲಿ ಕುಸಿದ ಮನೆಗಳು

Date:

Advertisements

ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಕೆಲವು ಭಾಗಗಳಲ್ಲಿ ಮನೆಗಳು ಕುಸಿದು ಬಿದ್ದಿರುವ ಬಗ್ಗೆ ವರದಿಯಾಗಿದೆ.

ಮಡಿಕೇರಿ ತಾಲೂಕು ಸಂಪಾಜೆ ಹೋಬಳಿ ಮೇಕೇರಿ ಗ್ರಾಮದ ಆಯಿಷಾ ಎಂಬುವವರ ಮನೆಯ ಗೋಡೆಯ ಮಳೆಯಿಂದಾಗಿ ಕುಸಿದು ಬಿದ್ದಿದೆ. ಉಳಿದ ಭಾಗಗಳು ಬಿರುಕು ಬಿಟ್ಟಿದ್ದು, ಸದ್ಯದ ಮಟ್ಟಿಗೆ ಕುಟುಂಬದವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

‌ಶನಿವಾರಸಂತೆ ಹೋಬಳಿಯ ಗೌಡಳ್ಳಿ ಗ್ರಾಮ ಪಂಚಾಯತಿಗೆ ಸೇರಿದ ಚನ್ನಾಪುರ ಗ್ರಾಮದ ಲಕ್ಷ್ಮೀ ಎಂಬುವವರ ವಾಸದ ಮನೆ, ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಭಾಗಶಃ ಹಾನಿಯಾಗಿದೆ.

Advertisements

ಕೊಡಗು ಮಳೆ 2

ಶನಿವಾರ ಸಂಜೆ ಸುರಿದ ಮಳೆಯಿಂದಾಗಿ ಅತ್ತೂರು ಗ್ರಾಮದ ನಿವಾಸಿ ಜನಾರ್ದನ ಬಿನ್. ಅಚ್ಚಯ್ಯ ಎಂಬವರ ವಾಸದ ಮನೆಯ ಮೇಲ್ಛಾವಣಿ ಹಾಗೂ ಗೋಡೆಗೆ ಹಾನಿಯಾಗಿರುವುದಾಗಿ ವರದಿಯಾಗಿದೆ. ಮನೆ ಬಿದ್ದಿರುವ ಗ್ರಮಗಳಿಗೆ ತಹಶೀಲ್ದಾರ್ ಭೇಟಿ ನೀಡಿ, ಪರಿಶೀಲನೆ ಮಾಡಿದರು.

ಕೊಡಗು ಮಳೆ 1

ಭಾರೀ ಗಾಳಿ ಮಳೆಯಿಂದಾಗಿ ಬೃಹತ್ ಗಾತ್ರದ ಮರ ಮತ್ತು ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕೂಡ ರಸ್ತೆಗೆ ಬಿದ್ದಿದೆ. ಮಡಿಕೇರಿಯ ಕ್ಲಬ್ ಮಹೀಂದ್ರ ಸಮೀಪ ಭಾರೀ ಗಾಳಿ-ಮಳೆಯಿಂದಾಗಿ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಟ್ರಾನ್ಸ್‌ಫಾರ್ಮರ್ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಇದರಿಂದಾಗಿ ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಮಾಡಲಾಗಿತ್ತು. ಆ ಬಳಿಕ ಅರಣ್ಯ ಇಲಾಖೆ ಮತ್ತು ಚೆಸ್ಕಾಂ ಸಿಬ್ಬಂದಿಗಳು ತೆರವು ಕಾರ್ಯ ನಡೆಸಿದರು.

ಶಾಲಾ ಕಾಲೇಜುಗಳಿಗೆ ರಜೆ ನೀಡಲು ಪೋಷಕರ ಆಗ್ರಹ

ಮಡಿಕೇರಿ ಸುತ್ತಮುತ್ತ ಮಳೆಯ ತೀವ್ರತೆ ಹೆಚ್ಚಾಗಿದೆ. ಕುಂಭದ್ರೋಣ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲಾಡಳಿತವು ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ ಮಾಡುವಂತೆ ಪೋಷಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X