ಕೊಡಗು | ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಎರಡನೇ ಅವಧಿಗೆ ಜೂನ್ 12ರಿಂದ ಮೀಸಲಾತಿ ನಿಗದಿ ಸಭೆ: ಜಿಲ್ಲಾಧಿಕಾರಿ

Date:

ಕೊಡಗು ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗಧಿ ಮಾಡಬೇಕಿದ್ದು, ಆ ನಿಟ್ಟಿನಲ್ಲಿ ಇದೇ ಜೂನ್ 12 ರಿಂದ ಪ್ರಕ್ರಿಯೆಗಳು ಆರಂಭವಾಗಲಿವೆ. ಆದ್ದರಿಂದ ಆಯಾ ತಾಲೂಕಿಗೆ ಸಂಬಂಧಿಸಿದ ಗ್ರಾಮ ಪಂಚಾಯಿತಿ ಸದಸ್ಯರು ಮೀಸಲಾತಿ ನಿಗಧಿಪಡಿಸುವ ಸಭೆಗೆ ಆಗಮಿಸುವಂತೆ ಜಿಲ್ಲಾಧಿಕಾರಿ ಡಾ. ಬಿ ಸಿ ಸತೀಶ ಅವರು ಕೋರಿದ್ದಾರೆ.

ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, “ಕೊಡಗು ಜಿಲ್ಲೆಯ ಐದು ತಾಲೂಕುಗಳ ಎಲ್ಲ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರುಗಳ ಸಮ್ಮುಖದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ಸ್ಥಾನ ನಿಗಧಿಪಡಿಸಲಾಗುತ್ತದೆ” ಎಂದು ಜಿಲ್ಲಾಧಿಕಾರಿ ಹೇಳಿದರು.

“ಜೂನ್ 12 ರಂದು ಬೆಳಿಗ್ಗೆ 11ಕ್ಕೆ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು, ಮಧ್ಯಾಹ್ನ 3 ಗಂಟೆಗೆ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ಪರಿಮಳ ಮಂಗಳ ವಿಹಾರದಲ್ಲಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ನಿಗಧಿ ಮಾಡುವ ಸಭೆ ನಡೆಯಲಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜೂನ್ 13 ರಂದು ಬೆಳಿಗ್ಗೆ 11ಕ್ಕೆ ಕುಶಾಲನಗರ ಎಪಿಸಿಎಂಸಿ ಸಭಾಂಗಣ, ಮಧ್ಯಾಹ್ನ 3 ಗಂಟೆಗೆ ಸೋಮವಾರಪೇಟೆಯ ಜಾನಕಿ ಕನ್ವೆನ್ಷನ್ ಹಾಲ್‍ನಲ್ಲಿ ಸಭೆ ನಡೆಯಲಿದೆ. ಜೂನ್, 14 ರಂದು ಬೆಳಿಗ್ಗೆ 11ಕ್ಕೆ ಮಡಿಕೇರಿ ನಗರದ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನ ನಿಗಧಿ ಮಾಡುವ ಸಭೆ ನಡೆಯಲಿದೆ” ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.

“ರಾಜ್ಯ ಚುನಾವಣಾ ಆಯೋಗವು ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಕುಶಾಲನಗರ ಮತ್ತು ಪೊನ್ನಂಪೇಟೆ ತಾಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನದ ವರ್ಗವಾರು ಸಂಖ್ಯೆಯನ್ನು ನಿಗಧಿ ಮಾಡಿದೆ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಮಡಿಕೇರಿ ತಾಲೂಕಿನಲ್ಲಿ 26 ಗ್ರಾಮ ಪಂಚಾಯಿತಿಗಳಿದ್ದು, ಅದರಲ್ಲಿ 13 ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿ 2 ಸ್ಥಾನ(ಒಬ್ಬ ಮಹಿಳೆ), ಅನುಸೂಚಿತ ಪಂಗಡ 1 ಸ್ಥಾನ (ಮಹಿಳೆ), ಹಿಂದುಳಿದ ವರ್ಗ(ಅ) 7 ಸ್ಥಾನ (4 ಮಹಿಳೆ), ಹಿಂದುಳಿದ ವರ್ಗ(ಬ) 2 ಸ್ಥಾನ (1 ಮಹಿಳೆ), ಸಾಮಾನ್ಯ 14 ಸ್ಥಾನ (6 ಮಹಿಳೆ) ಗಳನ್ನು ನಿಗದಿ ಮಾಡಲಾಗಿದೆ” ಎಂದು ಜಿಲ್ಲಾಧಿಕಾರಿ ಹೇಳಿದರು.

ವಿರಾಜಪೇಟೆ ತಾಲೂಕಿನಲ್ಲಿ 17 ಗ್ರಾಮ ಪಂಚಾಯಿತಿಗಳಿದ್ದು, 9 ಸ್ಥಾನ ಮಹಿಳೆಯರಿಗೆ ನಿಗಯಾಗಿದೆ. ಅನುಸೂಚಿತ ಜಾತಿ 2 (1 ಮಹಿಳೆ), ಅನುಸೂಚಿತ ಪಂಗಡ 2(1 ಮಹಿಳೆ), ಹಿಂದುಳಿದ ವರ್ಗ 3(2 ಮಹಿಳೆ), ಹಿಂದುಳಿದ ವರ್ಗ(ಬ) 1, ಸಾಮಾನ್ಯ 9(5 ಮಹಿಳೆ) ಮೀಸಲಾಗಿದೆ” ಎಂದರು.

ಸೋಮವಾರಪೇಟೆ ತಾಲೂಕಿನಲ್ಲಿ 23 ಗ್ರಾಮ ಪಂಚಾಯಿತಿಗಳಿದ್ದು, ಇದರಲ್ಲಿ 12 ಗ್ರಾಮ ಪಂಚಾಯಿತಿಗಳು ಮಹಿಳೆಯರಿಗೆ ಮೀಸಲಾಗಿವೆ. ಅನುಸೂಚಿತ ಜಾತಿಯಲ್ಲಿ 3(2 ಮಹಿಳೆ), ಅನುಸೂಚಿತ ಪಂಗಡ 1 ಮಹಿಳೆ, ಹಿಂದುಳಿದ(ಅ) 6(3 ಮಹಿಳೆ), ಹಿಂದುಳಿದ(ಬ) 1 ಮಹಿಳೆಯರಿಗೆ, ಸಾಮಾನ್ಯ 12 ರಲ್ಲಿ 5 ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ.

ಕುಶಾಲನಗರ ತಾಲೂಕಿನಲ್ಲಿ 16 ಗ್ರಾಮ ಪಂಚಾಯಿತಿಗಳಿದ್ದು, 8 ಮಹಿಳೆಯರಿಗೆ ಮೀಸಲಾಗಿದೆ. ಅನುಸೂಚಿತ ಜಾತಿ 2(1 ಮಹಿಳೆ), ಅನುಸೂಚಿತ ಪಂಡಗ 1 (1 ಮಹಿಳೆ), ಹಿಂದುಳಿದ ವರ್ಗ (ಅ) 4 (2 ಮಹಿಳೆಗೆ), ಹಿಂದುಳಿದ ವರ್ಗ (ಬ) 1 (1 ಮಹಿಳೆಗೆ) ಸಾಮಾನ್ಯ 8 ಸ್ಥಾನ(3 ಮಹಿಳೆ) ಮೀಸಲಾಗಿದೆ” ಎಂದರು.

ಪೊನ್ನಂಪೇಟೆ ತಾಲೂಕಿನಲ್ಲಿ 21 ಗ್ರಾಮ ಪಂಚಾಯಿತಿಗಳಿದ್ದು, 11 ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ. ಅನುಸೂಚಿತ ಜಾತಿ 1 (1 ಮಹಿಳೆ), ಅನುಸೂಚಿತ ಪಂಗಡ 5 (3 ಮಹಿಳೆಯರಿಗೆ), ಹಿಂದುಳಿದ ವರ್ಗ (ಅ) 3 (2 ಮಹಿಳೆಯರಿಗೆ), ಹಿಂದುಳಿದ ವರ್ಗ (ಬ) 1, ಸಾಮಾನ್ಯ 11 ರಲ್ಲಿ 5 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ” ಎಂದು ಜಿಲ್ಲಾಧಿಕಾರಿ ಡಾ. ಬಿ ಸಿ ಸತೀಶ ಅವರು ಮಾಹಿತಿ ನೀಡಿದರು.

“ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯನ್ನು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ 25 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿದ್ದು, 50 ತಾಲೂಕು ಪಂಚಾಯಿತಿ ಕ್ಷೇತ್ರಗಳಿವೆ” ಎಂದು ಮಾಹಿತಿ ನೀಡಿದರು.

“ಮಡಿಕೇರಿ ತಾಲೂಕಿನಲ್ಲಿ 6 ಜಿಲ್ಲಾ ಪಂಚಾಯತ್‌ ಕ್ಷೇತ್ರಗಳು, 12 ತಾಲೂಕ್‌ ಪಂಚಾಯತ್‌ ಕ್ಷೇತ್ರಗಳು, ಸೋಮವಾರಪೇಟೆ ತಾಲೂಕಿನಲ್ಲಿ 5 ಜಿಲ್ಲಾ ಪಂಚಾಯತ್‌ 9 ತಾಲೂಕ್‌ ಪಂಚಾಯತ್ ಕ್ಷೇತ್ರಗಳು, ವಿರಾಜಪೇಟೆ ತಾಲೂಕಿನಲ್ಲಿ 4 ಜಿಲ್ಲಾ ಪಂಚಾಯತ್ ಕ್ಷೇತ್ರಗಳಿದ್ದು, 9 ತಾಲೂಕ್‌ ಪಂಚಾಯತ್ ಕ್ಷೇತ್ರಗಳಿವೆ. ಕುಶಾಲನಗರ ತಾಲೂಕಿನಲ್ಲಿ 5 ಜಿಲ್ಲಾ ಪಂಚಾಯತ್‌ ಕ್ಷೇತ್ರಗಳಿದ್ದು, 9 ತಾಲೂಕ್‌ ಪಂಚಾಯತ್‌ ಕ್ಷೇತ್ರಗಳಿವೆ. ಪೊನ್ನಂಪೇಟೆ ತಾಲೂಕಿನಲ್ಲಿ 5 ಜಿಲ್ಲಾ ಪಂಚಾಯತ್‌ ಮತ್ತು 11 ತಾಲೂಕ್ ಪಂಚಾಯತ್ ಕ್ಷೇತ್ರಗಳಿವೆ” ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ವಿಧಾನ ಪರಿಷತ್ | ಜೂನ್‌ 30ರಂದು ಉಪಚುನಾವಣೆ; ಅಂದೇ ಫಲಿತಾಂಶ

“ರಾಜ್ಯ ಚುನಾವಣಾ ಆಯೋಗವು ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕ್ಷೇತ್ರವಾರು ಮತದಾರರ ಪಟ್ಟಿಯನ್ನು ತಯಾರಿಸಲು ಸೂಚನೆ ನೀಡಿದೆ. ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯು ಏಕಕಾಲದಲ್ಲಿ ನಡೆಯುವುದರಿಂದ ಹಾಗೂ ಒಂದೇ ಮತದಾರರ ಪಟ್ಟಿ ಉಪಯೋಗಿಸುವುದರಿಂದ, ಮತದಾರರ ಪಟ್ಟಿಯು ಸಂಬಂಧಪಟ್ಟ ಉಪ ವಿಭಾಗಾಧಿಕಾರಿಗಳ ಹಾಗೂ ತಾಲೂಕು ತಹಶೀಲ್ದಾರರ ಸಹಿ ಪದನಾಮ ಒಳಗೊಂಡಿದೆ” ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಚುನಾವಣಾ ತಹಶೀಲ್ದಾರ್ ಸಿ.ಜಿ. ರವಿಶಂಕರ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...

ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ...

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನು ಹೊರತುಪಡಿಸಿ,...

ಪೊಲೀಸ್ ಸಿಬ್ಬಂದಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯಕ್ಕಾಗಿ ಕ್ರಮ; ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶೇ.87 ರಷ್ಟು ಪೊಲೀಸರು ಸ್ಥೂಲಕಾಯ, ಬೊಜ್ಜು ಅಥವಾ ಕಡಿಮೆ...