ವರ್ಷದ ಮೊದಲ ಮಳೆ ಕಂಡ ಕೊಡಗು; ಕಾಫಿ ಬೆಳೆಗಾರರಲ್ಲಿ ಆತಂಕ!

Date:

ಕೊಡಗು ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ ಸುರಿದಿದೆ. ಕೊಡಗಿನ ನಾಪೋಕ್ಲು ಪ್ರದೇಶದ ನೆಲಜಿ, ಬಲ್ಲಮಾವಟಿ, ಎಮ್ಮೆಮಾಡು ಹಾಗೂ ಬೇತು ಗ್ರಾಮಗಳಲ್ಲಿ ಮಂಗಳವಾರ ಸಂಜೆ ಮಳೆಯಾಗಿದೆ. ಆದರೆ, ಮಳೆಗಾಲಕ್ಕೂ ಮುನ್ನವೇ ಸುರಿದಿರುವ ಮಳೆ ಕಾಫಿ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ.

- Advertisement -

ಕೊಡಗು ಭಾಗದ ರೈತರು ಕಾಫಿ ಕೊಯ್ಲು ಮಾಡುತ್ತಿದ್ದಾರೆ. ಕಾಫಿ ಬೀಜಗಳನ್ನು ಬಿಸಿಲಿನಲ್ಲಿ ಒಣಗಿಸಬೇಕಾಗಿದೆ. ಆದರೆ, ಕಾಫಿ ಕೊಯ್ಲು ನಡೆಯುತ್ತಿರುವ ಸಮಯದಲ್ಲೇ ಮಳೆ ಸುರಿದಿದ್ದು, ಕಾಫಿ ಬೀಜಗಳು ನೀರಿನಲ್ಲಿ ತೋಯ್ದುಹೋಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ರೈತರು ಟಾರ್ಪಲಿನ್‌ಗಳನ್ನು ಮುಚ್ಚಿ, ಕಾಫಿ ಬೀಜಗಳನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಟ್ಟಿದ್ದಾರೆ. ಒಂದು ವೇಳೆ, ಮಳೆ ಮುಂದುವರೆದರೆ, ಕಾಫಿ ಬೀಜಗಳು ಒಣಗಲು, ಕೊಯ್ಲು ಕೆಲಸ ಮುಂದುವರೆಸಲು ತೊಂದರೆಯಾಗುತ್ತದೆ. ಮಾತ್ರವಲ್ಲದೆ, ಜಮೀನಿನಲ್ಲಿಯೇ ಕಾಫಿ ಬೀಜಗಳು ಉದುರಿ ಹೋಗುವ ಆಂತಕವೂ ಇದೆ.

ಫೆಬ್ರವರಿ ತಿಂಗಳಿನಲ್ಲಿ ಕಾಫಿ ಕೊಯ್ಲು ನಡೆಯುತ್ತದೆ. ಇಂತಹ ಸಮಯದಲ್ಲಿ ಮಳೆಯಾಗುವುದು ಹಾನಿಗೆ ಕಾರಣವಾಗುತ್ತದೆ. ಮಾರ್ಚ್‌ ಆರಂಭದಲ್ಲಿ ಮಳೆಯಾದರೆ ಕಾಫಿ ಬೆಳೆ ಸೇರಿದಂತೆ ಕೃಷಿ ಅನುಕೂಲವಾಗುತ್ತದೆ ಎಂದು ಕಾಫಿ ಬೆಳೆಗಾರರು ಹೇಳುತ್ತಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...