ಕೊಡಗು | ಪರಿಸರ ಸಂರಕ್ಷಣೆಗೆ ಮುಂದಾಗಿ : ನ್ಯಾ. ಪರಮೇಶ್ವರ ಪ್ರಸನ್ನ

Date:

ಕೊಡಗು ಜಿಲ್ಲೆ, ಮಡಿಕೇರಿ ಗಾಂಧಿ ಭವನದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಸಂಘಟನೆ, ಇಕೋ ಕ್ಲಬ್‍ಗಳು, ಅರಣ್ಯ ಇಲಾಖೆ, ಕೊಡಗು ಜಿಲ್ಲೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಾಭಿವೃದ್ಧಿ ಕೋಶ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವರುಗಳ ಸಂಯುಕ್ತಾಶ್ರಯದಲ್ಲಿ ‘ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ ’ ಧ್ಯೇಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಪರಮೇಶ್ವರ ಪ್ರಸನ್ನ ಮಾತನಾಡಿ ಪರಿಸರ ಸಂರಕ್ಷಣೆಗೆ ಮುಂದಾಗುವಂತೆ ಕರೆ ಕೊಟ್ಟರು.

- Advertisement -

‘ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಭವಿಷ್ಯದ ದೃಷ್ಟಿಯಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಜನರಲ್ಲಿ ಪರಿಸರ ಪ್ರಜ್ಞೆ ಬೆಳೆಸುವ ನಿಟ್ಟಿನಲ್ಲಿ ಸಾರ್ವಜನಿಕ ಅರಿವು ಮೂಡಿಸಿ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು. ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಮಾರಕ. ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಶುಚಿತ್ವಕ್ಕೆ ಗಮನಹರಿಸಬೇಕು ‘ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ” ನಾವು ನಮ್ಮ ನೆಲ, ಜಲ, ಅರಣ್ಯ ಹಾಗೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಹಲವು ಶತಮಾನಗಳಿಂದ ಪೂರ್ವಿಕರು ಪರಿಸರ ಸಂರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಅದನ್ನು, ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು. ಪರಿಸರ ದಿನವು ಒಂದು ದಿನಕ್ಕೆ ಸೀಮಿತವಲ್ಲ. ನಿರಂತರವಾಗಿ ಇರಬೇಕು. ವಿದ್ಯಾರ್ಥಿಗಳು ಪರಿಸರ ರಾಯಭಾರಿಗಳಾಗಿ ಕೆಲಸ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.”

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಮಾತನಾಡಿ ‘ ಅಂಗಡಿ, ಮಾರುಕಟ್ಟೆಗೆ ತೆರಳುವಾಗ ಪ್ಲಾಸ್ಟಿಕ್ ಬದಲಿಗೆ ಪರಿಸರ ಸ್ನೇಹಿ ವಸ್ತುಗಳ ಬಟ್ಟೆ ಬ್ಯಾಗ್ ಬಳಸುವಂತಾಗಬೇಕು. ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಬೇರ್ಪಡಿಸುವ ಮೂಲಕ ಮಾಲಿನ್ಯವನ್ನು ತಡೆಯಬೇಕು ‘ ಎಂದರು.

ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಮಾತನಾಡಿ ಸುಸ್ಥಿರ ಪರಿಸರ ಸಂರಕ್ಷಣೆ ಮಾಡುವುದು, ಪ್ರಕೃತಿಯನ್ನು ಉಳಿಸುವುದು ಎಲ್ಲರ ಕರ್ತವ್ಯವಾಗಿದೆ. ಪ್ಲಾಸ್ಟಿಕ್‍ನಿಂದ ಉಂಟಾಗುವ ಮಾಲಿನ್ಯ ತಡೆಗಟ್ಟಿ ಕೊನೆಗೊಳಿಸುವುದು ಬಹಳ ಮುಖ್ಯ ಎಂದರು.

ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷ ಟಿ. ಜಿ. ಪ್ರೇಮ ಕುಮಾರ್ ಮಾತನಾಡಿ ನಾವು ನಾಳಿನ ಉತ್ತಮ ಭವಿಷ್ಯಕ್ಕಾಗಿ ಅರಣ್ಯ, ಪರಿಸರ, ಜೀವ- ವೈವಿಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡಲು ಸಂಕಲ್ಪ ತೊಡಬೇಕು ಎಂದು ಮನವಿ ಮಾಡಿದರು.

ಈ ವಿಶೇಷ ವರದಿ ಓದಿದ್ದೀರಾ?ಮೈಸೂರು | ಶವಾಗಾರದಲ್ಲಿ ಕೆಲಸ ಮಾಡುವ ಏಕಮೇವ ಮಹಿಳೆ ರಾಜಮ್ಮ

ಪರಿಸರ ಅಧಿಕಾರಿ ಎಂ.ಜಿ. ರಘುರಾಮ್, ನಗರಾಭಿವೃದ್ಧಿ ಯೋಜನಾ ಶಾಖೆ ಯೋಜನಾ ನಿರ್ದೇಶಕ ಬಿ. ಬಸಪ್ಪ, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ. ಎ. ನಿರಂಜನ, ಪೌರಾಯುಕ್ತ ಎಚ್. ಆರ್. ರಮೇಶ್, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಎಂ. ಜಿ. ಸವಿತಾ, ಜಿಲ್ಲಾ ಗೈಡ್ಸ್ ವಿಭಾಗದ ಆಯುಕ್ತೆ ರಾಣಿ ಮಾಚಯ್ಯ, ಜಿಲ್ಲಾ ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ, ತರಬೇತಿ ಆಯುಕ್ತ ಕೆ.ಯು.ರಂಜಿತ್, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಮಡಿಕೇರಿ ವಲಯದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಎಸಿಎಫ್ ಲತಾ ಭಟ್, ಡಿಆರ್‍ಎಫ್‍ಓ ಗಳಾದ ಸುನಿಲ್ ಗುನಗಾ, ಮಂಜೇಗೌಡ, ನವೀನ್, ಅರಣ್ಯ ರಕ್ಷಕ ಮಂಜುನಾಥ್, ಅರಣ್ಯ ವೀಕ್ಷಕ ವಾಸು, ಅರಣ್ಯ ಇಲಾಖೆಯ ತುರ್ತು ಸ್ಪಂದನ ತಂಡದ ಸದಸ್ಯರಾದ ಶರತ್, ತಿಮ್ಮಯ್ಯ, ಕಾರ್ತಿಕ್, ಕುಮಾರೇಶ್, ವಚನ್, ಮಹೇಶ್, ಪ್ರವೀಣ್, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಡಿ.ಎಸ್.ಜಯಪ್ಪ, ಜಿಲ್ಲಾ ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು.ರಂಜಿತ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...