ಕೊಡಗು | ಗೌರಮ್ಮ ಸಾಹಿತ್ಯ ವಲಯದಲ್ಲಿ ಮೂಡಿಸಿದ ಸಂಚಲನ ಅನನ್ಯವಾದದ್ದು : ಉಪನ್ಯಾಸಕಿ ಎಚ್ ನಿವೇದಿತಾ

Date:

Advertisements

ಕೊಡಗು ಕಸಾಪ , ಮಡಿಕೇರಿ ಕಸಾಪ , ಮುರ್ನಾಡು ಹೋಬಳಿ ಕಸಾಪ ಹಾಗೂ ಪಿಎಂಶ್ರೀ ಮಾದರಿ ಪ್ರಾಥಮಿಕ ಶಾಲೆ ಮುರ್ನಾಡು ಸಂಯುಕ್ತಾಶ್ರಯದಲ್ಲಿ ‘ ಕೊಡಗಿನ ಗೌರಮ್ಮ ದತ್ತಿ ‘ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೈಸೂರು ಯುವರಾಜ ಕಾಲೇಜಿನ ಉಪನ್ಯಾಸಕಿ ಎಚ್ ನಿವೇದಿತಾ ‘ ಕೊಡಗಿನ ಗೌರಮ್ಮ ಸಾಹಿತ್ಯ ವಲಯದಲ್ಲಿ ಮೂಡಿಸಿದ ಸಂಚಲನ ಅನನ್ಯವಾದದ್ದು ‘ ಎಂದರು.

” ಕೇವಲ 27 ವರ್ಷ ಜೀವಿಸಿದ ಕೊಡಗಿನ ಗೌರಮ್ಮ ಜೀವಿತಾವಧಿಯಲ್ಲಿ 21 ಅತಿ ಸಣ್ಣ ಕಥೆಗಳನ್ನು ಬರೆದರು. ಅದರಲ್ಲಿ ಮಹಿಳಾ ಸ್ವಾತಂತ್ರ್ಯ, ವಿಧವಾ ವಿವಾಹ, ಬಾಲ್ಯ ವಿವಾಹ, ವಿಧವಾ ಸಮಸ್ಯೆಗಳ ಬಗ್ಗೆ ಬರೆದಿದ್ದಾರೆ. ಅವರು ನೇರವಾಗಿ ಸ್ವಾತಂತ್ರ ಹೋರಾಟಕ್ಕೆ ಇಳಿಯದಿದ್ದರೂ ಗಾಂಧೀಜಿಯವರು 1934 ರಲ್ಲಿ ಹರಿಜನೋದ್ಧಾರಕ್ಕಾಗಿ ನಿಧಿ ಸಂಗ್ರಹಿಸಲು ಕರ್ನಾಟಕದಲ್ಲಿ 12 ದಿನಗಳ ಪ್ರವಾಸವನ್ನು ಕೈಗೊಂಡರು. ಫೆಬ್ರವರಿ 22-23, 1934 ರಂದು ಗಾಂಧಿಯವರು ಕೊಡಗು ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಗೌರಮ್ಮ ವಾಸಿಸುತ್ತಿದ್ದ ಗುಂಡುಕಟ್ಟೆ ಮಂಜುನಾಥಯ್ಯರವರ ಎಸ್ಟೇಟ್‌ ನಲ್ಲಿ ತಂಗಿದ್ದರು”.

” ನಿಧಿ ಸಂಗ್ರಹಿಸಲು ಬಂದ ಗಾಂಧೀಜಿಯವರನ್ನು ಭೇಟಿ ಮಾಡುವ ಉದ್ದೇಶದಿಂದ ಗೌರಮ್ಮ ಸಹಾಯಕರಲ್ಲಿ ತಮ್ಮ ಎಸ್ಟೇಟ್‌ಗೆ ಬಂದು ದೇಣಿಗೆಯನ್ನು ಸ್ವೀಕರಿಸುವಂತೆ ಕೇಳಿಕೊಂಡರು. ಗಾಂಧೀಜಿಯವರು ಬಾರದಿದ್ದಾಗ.ತಮ್ಮಿಂದ ಕಾಣಿಕೆ ಸ್ವೀಕರಿಸಬೇಕು ಮತ್ತು ತಮ್ಮ ಮನೆಗೆ ಆಗಮಿಸಬೇಕೆಂದು ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು”.

Advertisements

ಈ ಸುದ್ದಿ ಗಾಂಧೀಜಿಯವರ ಕಿವಿಗೆ ತಲುಪಿತು. ಗೌರಮ್ಮ ಅವರನ್ನು ತಾವು ತಂಗಿದ್ದ ಸ್ಥಳಕ್ಕೆ ಕರೆದು, ಮನೆಗೆ ಬರುವುದಾಗಿ ಭರವಸೆ ನೀಡಿದರು. ಅದರ ಪ್ರಕಾರ, ಮನೆಗೆ ಭೇಟಿ ನೀಡಿದರು. ಗೌರಮ್ಮ ತಾವು ಧರಿಸಿದ್ದ ಅನೇಕ ಆಭರಣಗಳನ್ನು ತೆಗೆದು ಸ್ವಾತಂತ್ರ್ಯ ಹೋರಾಟದ ನಿಧಿಗೆ ನೀಡಿದರು.ಗಾಂಧೀಜಿಯವರು ಚಿನ್ನದ ಆಭರಣಗಳಿಗಾಗಿ ನೀವು ಮತ್ತೆ ನಿಮ್ಮ ಗಂಡನನ್ನು ಹಿಂಸಿಸುತ್ತೀರಾ ಎಂದು ಕೇಳಿದಾಗ, ನಾನು ಭರವಸೆ ನೀಡಿದಂತೆ ಖಾದಿ ಹೊರತುಪಡಿಸಿ ಯಾವುದೇ ದುಬಾರಿ ವಸ್ತ್ರ ಚಿನ್ನಾಭರಣ ಧರಿಸುವುದಿಲ್ಲ ಎಂದು ಭರವಸೆ ನೀಡಿದರು. ಮಾರ್ಚ್ 2, 1934 ರಂದು ‘ಹರಿಜನ’ ಪತ್ರಿಕೆಯಲ್ಲಿ ಈ ಘಟನೆಯನ್ನು ಉಲ್ಲೇಖಿಸಿದ್ದಾರೆ ” ಎಂದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಈ ಬಾರಿ ಸಾಹಿತಿ ಕುಡಕಂಡಿ ಓಂ ಶ್ರೀ ದಯಾನಂದ ಅವರ ‘ ಪುಟಾಣಿ ರೈಲು ಅಂದದ ಕಥೆಗಳ ಲೋಕದಲ್ಲಿ ಒಂದು ಸುಂದರ ಪಯಣ ‘ ಮಕ್ಕಳ ಕಥೆ ಪುಸ್ತಕಕ್ಕೆ ನೀಡಿ ಗೌರವಿಸಿದರು.

ಪ್ರಶಸ್ತಿ ಸ್ವೀಕರಿ ಮಾತನಾಡಿದ ಕುಡಕಂಡಿಯವರು ” ಕೊಡಗಿನ ಗೌರಮ್ಮ ಪ್ರಶಸ್ತಿ ನನ್ನ ಮೊದಲ ಪುಸ್ತಕಕ್ಕೆ ಬಂದದ್ದು ಖುಷಿ ಕೊಟ್ಟಿದೆ. ಇಂದು ಇಂಟರ್ನೆಟ್ ಯುಗದಲ್ಲಿ ಮಕ್ಕಳಿಗೆ ನಾವು ಕಥೆಗಳನ್ನು ಹೇಳಿಕೊಡುತ್ತಿಲ್ಲ, ಮಕ್ಕಳಿಗೆ ಅದರ ಅವಶ್ಯಕತೆ ಇದೆ. ಆದರೆ ನಮಗೆ ಪುರುಸೊತ್ತಿಲ್ಲ. ಹಿಂದಿನ ಕಾಲದಲ್ಲಿ ಮನೆಯ ಹಿರಿಯರು ಮಕ್ಕಳಿಗೆ ಕಥೆಗಳನ್ನು ಹೇಳುವ ಮೂಲಕ ನೀತಿ ಪಾಠ ಹೇಳಿಕೊಡುತ್ತಿದ್ದರು. ಪಂಚತಂತ್ರ, ರಾಮಾಯಣ, ಮಹಾಭಾರತದ ಕಥೆಗಳನ್ನು ಮಕ್ಕಳಿಗೆ ಹೇಳುವ ಮೂಲಕ ಅವರಲ್ಲಿ ಸಾಮಾಜಿಕ ಬದ್ಧತೆ, ಸೃಜನಶೀಲತೆ, ಸಾಮಾಜಿಕ ಕಳಕಳಿ ಬೆಳೆಸುತಿದ್ದರು. ಆ ಕಾರಣಕ್ಕಾಗಿ ತಾವು ಮಕ್ಕಳ ಕಥೆಗಳನ್ನು ರಚಿಸಿರುವುದಾಗಿ ” ಹೇಳಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ಮಾತನಾಡಿ ” ಕೊಡಗಿನ ಗೌರಮ್ಮ ಬಹುಮುಖ ಪ್ರತಿಭೆಯ ವ್ಯಕ್ತಿತ್ವ, ಕೇವಲ ಕತೆ ಬರೆಯುವುದು ಮಾತ್ರವಲ್ಲದೆ ಅಂದಿನ ಸಮಾಜ ಸುಧಾರಕರಲ್ಲಿ ಒಬ್ಬರು ಕೂಡ. ಬಾಲ್ಯ ವಿವಾಹ, ವಿಧವಾ ವಿವಾಹ, ಮಹಿಳೆಯರ ಸಮಸ್ಯೆಗಳ ಕುರಿತು ಶತಮಾನದ ಹಿಂದೆಯೇ ಪ್ರಸ್ತಾಪ ಮಾಡಿದ್ದೂ ಅಲ್ಲದೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ತಮ್ಮ ಮೈ ಮೇಲಿನ ಚಿನ್ನ ನೀಡುವ ಮೂಲಕ ಅಂದಿನ ಜನರಿಗೆ ಮಾದರಿಯಾಗಿದ್ದರು. ಅವರ ಹೆಸರಿನಲ್ಲಿ ಅವರ ಪುತ್ರ ವಸಂತ್ ರವರು ಅಂದಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಟಿ ಪಿ ರಮೇಶ್ ರವರ ನೇತೃತ್ವದಲ್ಲಿ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದರು. ಇಂದು 22 ಮಹಿಳಾ ಲೇಖಕರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅರಣ್ಯ ಪಾಲಾದ ಲಕ್ಷ್ಮಣಪುರ ಗ್ರಾಮ : ಪರಿಹಾರವೂ ಇಲ್ಲ, ಪುನರ್ವಸತಿಯು ಇಲ್ಲ

ಕೊಡಗು ಕಸಾಪ ಮಾಜಿ ಅಧ್ಯಕ್ಷ ಟಿ ಪಿ ರಮೇಶ್, ಕೊಡಗು ಕಸಾಪ ನಿಕಟ ಪೂರ್ವ ಅಧ್ಯಕ್ಷ ಬಿ ಎಸ್ ಲೋಕೇಶ್ ಸಾಗರ್, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ ಎಸ್ ಕುಶನ್ ರೈ, ಪಿಎಂಶ್ರೀ ಮಾದರಿ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ ಬಿ ಸಿ ವೆಂಕಪ್ಪ, ಮುಖ್ಯೋಪಾಧ್ಯಾಯಿನಿ ಬಿ ಎನ್ ಪುಷ್ಪಾವತಿ, ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಮೂರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಈರಮಂಡ ಹರಿಣಿ ವಿಜಯ್, ಸಮಾಜ ಸೇವಕ ವಿ ಬಿ ಎಂ ಧನಂಜಯ, ಸಿ ಬಿ ಎಸ್ ಸೂರಜ್ ತಮ್ಮಯ್ಯ, ಮತ್ತು ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ, ಪ್ರೊ ಕುಡಕಂಡಿ ದಯಾನಂದ,ಡಾ ಬಿ ಕೋರನ ಸರಸ್ವತಿ, ಸಹನಾ ಕಾಂತಬೈಲು, ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ ಜಿ ಅನಂತಶಯನ, ಸರ್ವೋದಯ ಸಮಿತಿಯ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ,ಕಸಾಪ ಸದಸ್ಯರು ಹಾಗೂ ಸಾಹಿತಿ ಕಿಗ್ಗಾಲು ಗಿರೀಶ್, ಸದಸ್ಯರುಗಳಾದ ದಂಬೆಕೋಡಿ ಸುಶೀಲ, ಈರಮಂಡ ಸೋಮಣ್ಣ, ಎಂ ಯು ಮಹಮದ್, ಕೊಂಪುಳಿರ ಮಮತಾ, ಅಪ್ಪಚಂಡ ಸುಚಿತಾ ಡೈಜಿ, ಗ್ರೇಸಿ , ಮುಂಡಂಡ ವಿಜು, ಮೀನಾಕ್ಷಿ ಕೇಶವ, ಪ್ರಿಯಾ, ಕಲ್ಪನಾ ಸಾಮ್ರಾಟ್, ತಿರಚಿಕ್ರ ಸುಮಿತ್ರಾ, ಭವಾನಿ, ಅಮ್ಮಟಂಡ ವಿಂಧ್ಯ, ರಾಜೇಶ್,ಗಂಗಮ್ಮ,ಪಿಎಂಶ್ರೀ ಶಾಲಾ ಆಧ್ಯಾಪಕರು ಮತ್ತು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X