ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಸೋಮವಾರ ಬೆಳಿಗ್ಗೆ 10ರ ಸುಮಾರಿಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ ನಿವಾಸದ ಕಡೆಗೆ ತೆರಳುವ ರಸ್ತೆಯಲ್ಲಿ ಹುಲಿ ಸಾಗುತ್ತಿರುವ ದೃಶ್ಯ ಕಂಡುಬಂದಿದೆ.
ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯಭೀತರಾಗಿದ್ದು, ಆದಷ್ಟು ಬೇಗ ಹುಲಿಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಮುಂದಿನ 3 ವರ್ಷದಲ್ಲಿ ಕಾಲುಸಂಕ ನಿರ್ಮಾಣ ಕಾಮಗಾರಿ ಪೂರ್ಣ – ಸಚಿವ ಸತೀಶ್ ಜಾರಕಿಹೊಳೆ
“ಇಂದು ಬೆಳಿಗ್ಗೆ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿದೆ. ಈವರೆಗೂ ಯಾವುದೇ ಅಪಾಯ ಎದುರಾಗಿಲ್ಲ. ಮುಂದೆ ಹೆಚ್ಚಿನ ಅನಾಹುತ ಸಂಭವಿಸುವ ಮೊದಲು ಹುಲಿಯನ್ನು ಸೆರೆಹಿಡಿಯಬೇಕು” ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.