ಕೊಡಗು | ಹೊಸ ನೀತಿಯ ಮೂಲಕ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಚಿವ ಹೆಚ್​ ಕೆ ಪಾಟೀಲ್

Date:

Advertisements

ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದಾಗಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ ಸಿಗಲಿವೆ ಎಂದು, ಪ್ರವಾಸೋದ್ಯಮ ಸಚಿವ ಹೆಚ್​ ಕೆ ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಪ್ರವಾಸೋದ್ಯಮ ಕ್ಷೇತ್ರದಲ್ಲಿ 1,500 ಕೋಟಿ ರೂಪಾಯಿಗಳ ಹೂಡಿಕೆ ಆಕರ್ಷಿಸಲು ಸರ್ಕಾರ ಉದ್ದೇಶಿಸಿದೆ. ಕರ್ನಾಟಕವು ವರ್ಷಕ್ಕೆ 20 ಲಕ್ಷ ವಿದೇಶಿ ಪ್ರವಾಸಿಗರನ್ನು ಸೆಳೆಯಲು ಉದ್ದೇಶಿಸಿದ್ದು. ಆ ಮೂಲಕ ಹೆಚ್ಚು ವಿದೇಶಿ ಪ್ರವಾಸಿಗರು ಭೇಟಿ ನೀಡುವ ಐದು ರಾಜ್ಯಗಳಲ್ಲಿ ಒಂದಾಗಿ ಕರ್ನಾಟಕದ ಕೊಡಗನ್ನು ಗುರುತಿಸಿಕೊಳ್ಳಲು ಮುಂದಾಗಿದೆ ಎಂದು ತಿಳಿಸಿದ್ದಾರೆ.

ಪ್ರವಾಸೋದ್ಯಮ ವಿಚಾರದಲ್ಲಿ ದೇಶೀಯ ಪ್ರವಾಸಿಗರನ್ನು ಸೆಳೆಯುವುದು ಕೂಡ ನಮ್ಮ ಗುರಿಯಾಗಿದೆ. 48 ಕೋಟಿ ಸ್ಥಳೀಯ ಪ್ರವಾಸಿಗರನ್ನು ಸೆಳೆಯುವ ಗುರಿಯೊಂದಿಗೆ ಅಗ್ರ ಮೂರು ರಾಜ್ಯಗಳಲ್ಲಿ ಸ್ಥಾನ ಪಡೆಯಲು ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದು
ಮಾಹಿತಿ ನೀಡಿದ್ದಾರೆ.

Advertisements

ವಿಸ್ತೃತ ಚರ್ಚೆಯ ನಂತರ ಸಚಿವ ಸಂಪುಟವು ‘ಕರ್ನಾಟಕ ಪ್ರವಾಸೋದ್ಯಮ ನೀತಿ 2024-29’ ಅನ್ನು ಅನುಮೋದಿಸಿದೆ. ಈ ನೀತಿಯಡಿಯಲ್ಲಿ ಸಹಾಯಧನ ಮತ್ತು ಅನುದಾನವನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. ಹೊಸ ಪ್ರವಾಸೋದ್ಯಮ ನೀತಿಯು ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಯಸುತ್ತದೆ ಎಂದರು.

ಅಡ್ವೆಂಚರ್ ಟೂರಿಸಂ, ಕೃಷಿ, ಕಾರವಾನ್, ಕರಾವಳಿ, ಕಡಲತೀರ, ಪಾಕಪದ್ಧತಿ, ಸಾಂಸ್ಕೃತಿಕ, ಸಾಂಪ್ರದಾಯಿಕ, ಪರಿಸರ, ಶಿಕ್ಷಣ, ಚಲನಚಿತ್ರ, ಗಾಲ್ಫ್, ಕ್ರೀಡೆ, ಬುಡಕಟ್ಟು, ಮದುವೆಯ ತಾಣಗಳ ಅಭಿವೃದ್ಧಿ, ಆರೋಗ್ಯ ವಿಚಾರಗಳಿಗೆ ಉತ್ತೇಜನ ನೀಡುವ ಬಗ್ಗೆ ಹೊಸ ನೀತಿಯಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಕೊಡಗಿನಲ್ಲಿ ಕೂಡ ಎಲ್ಲಾ ಚಟುವಟಿಕೆಗಳಿಗೆ ಸರಕಾರದಿಂದ ಉತ್ತೇಜನ ದೊರಕುವ ನಿರೀಕ್ಷೆ ಇದೆ ಎಂದರು.

ಅಪಾರ್ಟ್‌ಮೆಂಟ್, ಹೋಟೆಲ್, ಸರ್ವೀಸ್ ಅಪಾರ್ಟ್‌ಮೆಂಟ್‌ಗಳು, ಅಕ್ವೇರಿಯಂ, ಬೀಚ್ ಶಾಕ್‌ಗಳು, ಅಮ್ಯೂಸ್‌ಮೆಂಟ್ ಪಾರ್ಕ್‌ಗಳ ಸಹಿತ ಪ್ರವಾಸೋದ್ಯಮ ಉತ್ತೇಜನಕ್ಕೆ 46 ಯೋಜನೆಗಳನ್ನು ಗುರುತಿಸಲಾಗಿದೆ. ಈ ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ವಿಶೇಷ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರದ ಹೊಸ ನೀತಿಯಿಂದ ಕೊಡಗು ಜಿಲ್ಲೆಯಲ್ಲಿ ವಿದೇಶಿ ಪ್ರವಾಸಿಗಳನ್ನು ಆಕರ್ಷಿಸಲು ಇನ್ನು ಮುಂದೆ ಸರ್ಕಾರದ ಉತ್ತೇಜನ ದೊರಕಲಿದೆ. ಸದ್ಯದಲ್ಲೇ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಲ್ಲಿ ಇವೆಲ್ಲದರ ಬಗ್ಗೆ ಮಾಹಿತಿಗಳು ದೊರಕಲಿದ್ದು ಅಸಕ್ತರು ಈ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.

ಇದನ್ನು ಓದಿದ್ದೀರಾ? ಚಾಮರಾಜ ನಗರ | ಹೊಗೇನಕಲ್ ಫಾಲ್ಸ್: ಪೊಲೀಸರ ಜಂಟಿ ಸಭೆ ಯಶಸ್ವಿ; ತೆಪ್ಪ ಸಂಚಾರ ಪುನರಾರಂಭ

ಅತಿ ಹೆಚ್ಚು ವಿದೇಶಿ ಪ್ರವಾಸಿಗರು ಭೇಟಿ ನೀಡುವ ಮೊದಲ ಐದು ರಾಜ್ಯಗಳಲ್ಲಿ ಒಂದಾಗಲು, ನಾವು ವರ್ಷಕ್ಕೆ 20 ಲಕ್ಷ ವಿದೇಶಿ ಪ್ರವಾಸಿಗರನ್ನು ಆಕರ್ಷಿಸಬೇಕು. ಇದನ್ನು ತಲುಪುವುದು ನಮ್ಮ ಗುರಿಯಾಗಿದೆ. ಈಗ ಸುಮಾರು 12 ರಿಂದ 14 ಲಕ್ಷ ವಿದೇಶಿ ಪ್ರವಾಸಿಗರು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಪಾಟೀಲ್ ಹೇಳಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X