ಕೊಡಗು | ಅ.25ರಿಂದ ಅನೈರ್ಮಲ್ಯ ಶೌಚಾಲಯ, ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ ಸಮೀಕ್ಷೆ: ವೆಂಕಟ್ ರಾಜಾ

Date:

ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್ 25ರಿಂದ ನವೆಂಬರ್ 03ರವರೆಗೆ ‘ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ಗಳ’ ಸಮೀಕ್ಷೆ ನಡೆಯಲಿದ್ದು, ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ಹಾಗೂ ಸರ್ಕಾರದ ಮಾರ್ಗಸೂಚಿಯಂತೆ ವ್ಯವಸ್ಥಿತವಾಗಿ ಸಮೀಕ್ಷೆ ಕಾರ್ಯ ನಡೆಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

- Advertisement -

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್’ ಸಮೀಕ್ಷೆ ಕುರಿತ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಸಮೀಕ್ಷೆ ನಡೆಸಿ ಕಾಲಮಿತಿಯಲ್ಲಿ ನಿಖರ ಮಾಹಿತಿ ಒದಗಿಸಬೇಕು” ಎಂದು ಜಿಲ್ಲಾಧಿಕಾರಿ ಸೂಚಿಸಿದರು.

“ನಗರಾಭಿವೃದ್ಧಿ ಕೋಶ ಜತೆಗೆ ಪಂಚಾಯತ್ ರಾಜ್ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಸರಿಯಾಗಿ ಮಾಹಿತಿ ಸಂಗ್ರಹಿಸಬೇಕು” ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಮಾಹಿತಿ ನೀಡಿ, “ಸರ್ವೋಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 324/2020 ತೀರ್ಪಿನ ಅನ್ವಯ ರಾಜ್ಯದಲ್ಲಿ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆ ಕೈಗೊಂಡು ಕೇಂದ್ರ ಸರ್ಕಾರದ ‘ನಮಸ್ತೆ ಪೋರ್ಟಲ್’ನ ಎಂ ಎಸ್ ಸರ್ವೇ ಆ್ಯಪ್‌ನಲ್ಲಿ ಅಪ್‍ಲೋಡ್ ಮಾಡಬೇಕಿದೆ” ಎಂದು ಮಾಹಿತಿ ನೀಡಿದರು.

“ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆ ಸಂಬಂಧ ಅಕ್ಟೋಬರ್ 25ರಿಂದ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಈ ಸಂಬಂಧ ನಗರಾಭಿವೃದ್ಧಿ, ಪೌರಾಡಳಿತ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಅಧಿಕಾರಿಗಳು ಸಹಕರಿಸಬೇಕು” ಎಂದು ಕೋರಿದರು.

“ಸಮೀಕ್ಷೆಗೆ ಸಂಬಂಧಿಸಿದಂತೆ ಅರ್ಜಿಯ ಮಾನ್ಯತೆಯನ್ನು ಪರಿಶೀಲಿಸಿ ವ್ಯಾಲಿಡೇಟರ್ ಲಾಗ್‍ಇನ್‍ಗೆ ಕಳುಹಿಸಲು ಕ್ರಮವಹಿಸಬೇಕು. ಹಾಗೆಯೇ ಸಮೀಕ್ಷಾ ಲಾಗಿನ್‍ನಿಂದ ಬಂದ ಅರ್ಜಿಯನ್ನು ಕೂಲಂಕಷವಾಗಿ ಪರಿಶೀಲಿಸಿ ಅರ್ಜಿಯ ನೈಜತೆ ಬಗ್ಗೆ ಖಾತರಿಪಡಿಸಿಕೊಂಡು ಪರಿಶೀಲಿಸಿ ಜಿಲ್ಲಾ ವ್ಯಾಲಿಡೇಟರ್ ಲಾಗಿನ್‍ಗೆ ಅರ್ಜಿಯನ್ನು ಕಳುಹಿಸಬೇಕು. ಸಮೀಕ್ಷೆ ಕಾರ್ಯದ ಅರ್ಜಿಯು ತಪ್ಪಾಗಿದ್ದಲ್ಲಿ ತಿರಸ್ಕರಿಸಬೇಕು” ಎಂದು ಹೇಳಿದರು.

ಜಿಲ್ಲಾ ವ್ಯಾಲಿಡೇಟರ್‍ಗೆ ಬಂದ ಅರ್ಜಿಯ ಮಾನ್ಯತೆ ಪರಿಶೀಲಿಸಿ ಸರಿ ಕಂಡುಬಂದಲ್ಲಿ ರಾಜ್ಯ ವ್ಯಾಲಿಡೇಟರ್ ಲಾಗಿನ್‍ಗೆ ಅರ್ಜಿಯನ್ನು ಕಳುಹಿಸಲು ಕ್ರಮವಹಿಸಬೇಕಿದೆ. ನಂತರ ಸ್ವೀಕೃತಗೊಂಡ ಅರ್ಜಿಯನ್ನು ಜಿಲ್ಲಾ ಮಟ್ಟದ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಸಮೀಕ್ಷೆ ಸಮಿತಿ ಸಭೆಯಲ್ಲಿ ಅನುಮೋದಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಕ್ರಮವಹಿಸಬೇಕಿದೆ.

“ನಗರ ಪ್ರದೇಶದ ವ್ಯಾಪ್ತಿಯಲ್ಲಿ ಸಮೀಕ್ಷೆಗಾರರಾಗಿ ನಗರ ಸ್ಥಳೀಯ ಸಂಸ್ಥೆಯ ಆರೋಗ್ಯಾಧಿಕಾರಿಗಳು, ಪರಿಶೀಲನಾ ಅಧಿಕಾರಿಗಳಾಗಿ ನಗರ ಸ್ಥಳೀಯ ಸಂಸ್ಥೆಯ ಸಹಾಯಕ ಅಭಿಯಂತರರು, ವ್ಯಾಲಿಡೇಟರ್‌ಗಳಾಗಿ ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಯ ಮುಖ್ಯಾಧಿಕಾರಿಗಳು, ಜಿಲ್ಲಾ ವ್ಯಾಲಿಡೇಟರ್ ಆಗಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಕಾರ್ಯನಿರ್ವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಹೋಬಳಿ ಘಟಕಗಳು ಕನ್ನಡ ಸಾಹಿತ್ಯ ಪರಿಷತ್‌ನ ಬೇರುಗಳು: ಕೇಶವ ಕಾಮತ್

“ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆಗಾರರಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪರಿಶೀಲನಾ ಅಧಿಕಾರಿಗಳಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರು, ವ್ಯಾಲಿಡೇಟರ್ ಆಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ವ್ಯಾಲಿಡೇಟರ್ ಆಗಿ ಜಿಪಂ ಉಪ ಕಾರ್ಯದರ್ಶಿ ಕಾರ್ಯನಿರ್ವಹಿಸಲಿದ್ದಾರೆ” ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು.

ಸಮಿತಿ ಸದಸ್ಯರಾದ ರಂಗಸ್ವಾಮಿ, ಆರ್ಮೂಗಂ, ಓಬಳಿ, ಜಿಪಂ ಉಪ ಕಾರ್ಯದರ್ಶಿ ಧನರಾಜ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರ ಬಿ ಬಸಪ್ಪ, ಡಿವೈಎಸ್‍ಪಿ ರವಿ, ತಾಪಂ ಇಒ ಅಪ್ಪಣ್ಣ, ಪರಮೇಶ್ ಕುಮಾರ್, ಜಿಪಂ ಸಹಾಯಕ ನಿರ್ದೇಶಕ ಶ್ರೀನಿವಾಸ್, ಪೌರಾಯುಕ್ತ ಎಚ್ ಆರ್ ರಮೇಶ್, ಪುರಸಭೆ ಮುಖ್ಯಾಧಿಕಾರಿ ಕೃಷ್ಷಪ್ರಸಾದ್, ಪಿ ಕೆ ನಾಚಪ್ಪ, ರೀತು ಸಿಂಗ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...