ಕೊಡಗು | ಕಾಡಾನೆ ದಾಳಿಗೆ ಕಾರ್ಮಿಕ ಬಲಿ: ಜನವರಿಯಿಂದ ಈವರೆಗೆ 8 ಮಂದಿ ಸಾವು

Date:

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್‌ನಲ್ಲಿ ನಡೆದಿದೆ.

- Advertisement -

ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಗೋಪಾಲನ್ ಪಾವರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಕಾರ್ಮಿಕ ಜಾದವ್ ಪಾವರಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿದ್ದಾರೆ. ಅಲ್ಲದೇ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕಾಡಾನೆ ದಾಳಿಯಿಂದ ಎಸ್ಟೇಟ್ ಕಾರ್ಮಿಕರಲ್ಲಿ ಆತಂಕ ಮನೆಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇನ್ನು ಕಾಡಾನೆ ದಾಳಿಗೆ ಕಾರ್ಮಿಕ ಬಲಿಯಾದ ಹಿನ್ನೆಲೆ ಮಲ್ದಾರೆ ಗ್ರಾಮದಲ್ಲಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ನಿರಂತರ ಕಾಡಾನೆ ದಾಳಿಯಿಂದ ಮನೆಯಿಂದ ಹೊರಗೆ ಹೋಗದ ಪರಿಸ್ಥಿತಿ ಎದುರಾಗಿದೆ ಎಂದು ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಅಲ್ಲದೇ ಕೊಡಗು ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಹಾಕಿದೆ. ಏಕಾಏಕಿ ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತಳ್ಳಾಟ-ನೂಕಾಟ ನಡೆದಿದೆ. ಅರಣ್ಯ ಭವನದ ಬಾಗಿಲಿಗೆ ಬ್ಯಾರಿಕೇಡ್ ಹಾಕಿ ನಿರ್ಬಂಧ ಹೇರಲಾಗಿದೆ. ಕಾಂಗ್ರೆಸ್ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನವರಿಯಿಂದ ಈವರೆಗೆ 8 ಮಂದಿ ಬಲಿ

ಈ ವರ್ಷದ ಜನವರಿಯಿಂದ ಈಯವರೆಗೆ ಕೊಡಗು ಜಿಲ್ಲೆಯಲ್ಲಿ ಆನೆ ದಾಳಿಗೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದು, ಬಲಿಯಾದವರಲ್ಲಿ ನಾಲ್ವರು ಮಹಿಳೆಯರೂ ಸೇರಿದ್ದಾರೆ.

ಮಾರ್ಚ್‌ನಲ್ಲಿ, ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದ ಪಿಯು ವಿದ್ಯಾರ್ಥಿನಿ ಪೂಜಾ(17) ಮತ್ತು ಕುಶಾಲನಗರ ತಾಲೂಕಿನ ವಲ್ನೂರು ಗ್ರಾಮದ ನಂಜರಾಯಪಟ್ಟಣ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯೆ ಜಲಜಾಕ್ಷಿ(55) ಪ್ರತ್ಯೇಕ ಕಾಡಾನೆ ದಾಳಿಯಲ್ಲಿ ಸಾವನ್ನಪ್ಪಿದ್ದರು. ಮೇ 18ರಂದು ದುಬಾರೆ ಆನೆ ಶಿಬಿರದಲ್ಲಿ ಎರಡು ಸೆರೆಯಾಳು ಆನೆಗಳ ನಡುವಿನ ಘರ್ಷಣೆಯಲ್ಲಿ ಸಿಕ್ಕಿಬಿದ್ದ ಮಹಿಳಾ ಪ್ರವಾಸಿಗರು ಸಾವನ್ನಪ್ಪಿದ್ದರು.  

ಈ ವರ್ಷದ ಮೊದಲ ಸಾವು ಜನವರಿ 1ರಂದು ಸಂಭವಿಸಿತು, ಶಾಂತಳ್ಳಿ ಬಳಿಯ ಗಣಗೂರು ಗ್ರಾಮ ಪಂಚಾಯತ್‌ನ ಸಂಗಯ್ಯನಪುರದಲ್ಲಿ ಕಾಡಾನೆ ದಾಳಿಯಲ್ಲಿ ಪೊನ್ನಪ್ಪ(61) ಸಾವನ್ನಪ್ಪಿದರು. ಅಂದಿನಿಂದ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಆದರೂ ಯಾವುಏ ರೀತಿಯ ಶಾಶ್ವತ ಕ್ರಮಗಳಿಲ್ಲ.

“ಇಲ್ಲಿಯವರೆಗೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಡಜ಼ನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ. ಸಾವು ಸಂಭವಿಸಿದಾಗ ಆನೆಗಳನ್ನು ಓಡಿಸುವ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತದೆ. ಆನೆಗಳ ಕಾಟವನ್ನು ತಡೆಯಲು ಯಾವುದೇ ಶಾಶ್ವತ ಕ್ರಮಗಳನ್ನು ತೆಗೆದುಕೊಂಡಿಲ್ಲ” ಎಂದು ನಿವಾಸಿಗಳು ತಿಳಿಸಿದ್ದಾರೆ. 

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಹಿರೇಹಳ್ಳದಲ್ಲಿ ಮರಳು ಅಕ್ರಮ ಗಣಿಗಾರಿಕೆ ತಡೆಗೆ ರೈತ ಸಂಘ ಆಗ್ರಹ

” ಹಲವಾರು ತೋಟಗಳಲ್ಲಿ ಆನೆಗಳು ಬೀಡುಬಿಟ್ಟಿವೆ. ತೋಟಗಳ ಒಳಗೆ ಬೀಡುಬಿಟ್ಟಿರುವ ಆನೆಗಳನ್ನು ಸೆರೆಹಿಡಿದು ಗೊತ್ತುಪಡಿಸಿದ ಪ್ರದೇಶಗಳಿಗೆ ಸ್ಥಳಾಂತರಿಸುವ ಯೋಜನೆಯನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಮಾತನಾಡಿದೆ. ಆದಾಗ್ಯೂ, ಈ ಪ್ರಸ್ತಾವನೆಯನ್ನು ಕಾರ್ಯರೂಪಕ್ಕೆ ತಂದಿಲ್ಲ. ಇತ್ತೀಚಿನ ದಾಳಿಯಲ್ಲಿ ಭಾಗಿಯಾದ ಆನೆಯನ್ನು ಪತ್ತೆಹಚ್ಚಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಇತ್ತೀಚೆಗೆ ನಾಗರಹೊಳೆ ಪ್ರದೇಶದ ಅರಣ್ಯದಿಂದ ಹಲವಾರು ಆನೆಗಳು ದಾರಿ ತಪ್ಪಿವೆ. ಈ ಪ್ರದೇಶದಲ್ಲಿ ಒಂಟಿ ಸಲಗವೊಂದು ಓಡಾಡುತ್ತಿದ್ದು, ದಾಳಿಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಆ ಆನೆಯನ್ನು ಪತ್ತೆಹಚ್ಚಲು ಮತ್ತು ಮೇಲ್ವಿಚಾರಣೆ ಮಾಡಲು ಅರಣ್ಯ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...