“ರೇಬಿಸ್ ಗಡಿಯನ್ನು ಮುರಿಯುವುದು” ಎಂಬ ಧ್ಯೇಯದೊಂದಿಗೆ ನಡೆದ ವಿಶ್ವ ರೇಬಿಸ್ ದಿನಾಚರಣೆಯು ಪರಿಸರಗಳ, ಮನುಷ್ಯ ಮತ್ತು ಪ್ರಾಣಿಗಳ ಆರೋಗ್ಯ ಪರಸ್ಪರ ಸಂಬಂಧವನ್ನು ಒತ್ತಿ ಹೇಳುತ್ತದೆ ಎಂದು ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸತೀಶ್ ಕುಮಾರ್ ಉಚ್ಚರಿಸಿದರು.
ವಿಶ್ವ ರೇಬಿಸ್ ದಿನದ ಪ್ರಯುಕ್ತ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಹಾಗೂ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಮಂಗಳವಾರ ರೇಬಿಸ್ ತಡೆ ಹಾಗೂ ಲಸಿಕೆಗಳ ಮಹತ್ವದ ಬಗ್ಗೆ ಹಮ್ಮಿಕೊಂಡಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯತಿ ನೌಕರರಿಂದ ಪ್ರತಿಭಟನೆ
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ನಂಜುಂಡಯ್ಯ, ಸಮುದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ರಾಮಚಂದ್ರ ಕಾಮತ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ ಶ್ರೀನಿವಾಸ್, ಅಧಿಕಾರಿ ಡಾ ಕೃತಿಕಾ, ವೈದ್ಯಶಾಸ್ತ್ರ ವಿಭಾಗದ ಮುಮಚಂದ್ರ ಕಾಮತ್,
ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ದೀಪಿಕಾ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಇದ್ದರು.