ಉಪ ಸಭಾಧ್ಯಕ್ಷ ಬದಲಿಗೆ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್. ಪೊನ್ನಣ್ಣ ನೇಮಕ

Date:

ಕೊಡಗು ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಉಪ ಸಭಾಧ್ಯಕ್ಷ ಸ್ಥಾನಕ್ಕೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಹೆಸರು ಮುನ್ನೆಲೆಗೆ ಬಂದಿತ್ತು. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಪೊನ್ನಣ್ಣ ಅವರನ್ನು ಉಪ ಸಭಾಧ್ಯಕ್ಷರನ್ನಾಗಿ ನೇಮಕ ಮಾಡುವ ಬದಲು, ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಎ.ಎಸ್. ಪೊನ್ನಣ್ಣ ಅವರು ಸರ್ಕಾರದಲ್ಲಿ ಪ್ರಮುಖ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಕೊಡಗು ಜಿಲ್ಲೆಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಜಿಲ್ಲೆಯ ರಾಜಕೀಯ ಪ್ರಾತಿನಿಧ್ಯದ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಈ ನೇಮಕಾತಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಉಪ ಸಭಾಧ್ಯಕ್ಷ ಸ್ಥಾನಕ್ಕೆ ಪೊನ್ನಣ್ಣ ಅವರ ಹೆಸರು ಪರಿಗಣನೆಯಲ್ಲಿತ್ತು. ಆದರೆ ಇದೀಗ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ, ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವುದು ಅವರ ರಾಜಕೀಯ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ.

ಕೊಡಗು ಜಿಲ್ಲೆಯ ಅಭಿವೃದ್ಧಿ, ಜಿಲ್ಲೆಯ ಪ್ರಮುಖ ಸಮಸ್ಯೆಗಳು ಹಾಗೂ ಸರ್ಕಾರದ ಮಟ್ಟದಲ್ಲಿ ಜಿಲ್ಲೆಗೆ ಅಗತ್ಯವಿರುವ ಅನುದಾನ ಮತ್ತು ಯೋಜನೆಗಳನ್ನು ಸಮನ್ವಯಗೊಳಿಸುವಲ್ಲಿ ಈ ಸ್ಥಾನ ಪೊನ್ನಣ್ಣ ಅವರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ?ಹಳೇ ಮೈಸೂರು: ದಲಿತ ಅಸ್ಮಿತೆಯ ತವರು; ಮತದಲ್ಲಿ ಶಕ್ತಿ, ಅಧಿಕಾರದಲ್ಲಿ ಹಿನ್ನಡೆ ಏಕೆ?

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಉಂಟಾಗಿದ್ದ ರಾಜಕೀಯ ಅಸಮಾಧಾನಕ್ಕೆ ಈ ನೇಮಕಾತಿ ಒಂದು ರೀತಿಯಲ್ಲಿ ಸಮಾಧಾನಕರ ಬೆಳವಣಿಗೆಯಾಗಿದೆ ಎಂದು ಕಾಂಗ್ರೆಸ್ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ಅವರ ಮುಂದಿನ ಕಾರ್ಯವೈಖರಿ ಇದೀಗ ಜಿಲ್ಲೆಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...