ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

Date:

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ. ನರೇಂದ್ರಸ್ವಾಮಿ ಎಚ್ಚರಿಸಿದರು.

- Advertisement -

ವಿರಾಜಪೇಟೆ ತಾಲ್ಲೂಕು ಆಡಳಿತ ವತಿಯಿಂದ ಶನಿವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಎಲ್-ನಿನೋ ಪರಿಣಾಮದಿಂದ ಜಾಗತಿಕವಾಗಿ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಇದರಿಂದ ಆಹಾರ ಉತ್ಪಾದನೆ, ಜಾನುವಾರುಗಳಿಗೆ ಮೇವಿನ ಕೊರತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ತಾಪಮಾನ 3ರಿಂದ 6 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಾಗುವ ಸಾಧ್ಯತೆ ಇದ್ದು, ಹಿಂದಿನಂತೆಯೇ ಪರಿಸ್ಥಿತಿ ಇರುತ್ತದೆ ಎಂಬ ನಿರ್ಲಕ್ಷ್ಯ ಬೇಡ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಳೆಯ ಪ್ರಮಾಣವೂ ಕಡಿಮೆಯಾಗುವ ಸಾಧ್ಯತೆ ಇದೆ. ಸೈಕ್ಲೋನ್‌ಗಳ ಪರಿಣಾಮದಿಂದ ಕೆಲವೆಡೆ ಅಲ್ಪ ಪ್ರಮಾಣದ ಮಳೆಯಾಗಬಹುದು. ಕೊಡಗು ಜಿಲ್ಲೆಯ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನವನ್ನು ತಾಲ್ಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಆಯೋಜಿಸಲಾಗುತ್ತಿದೆ. ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಪಾರದರ್ಶಕ ಆಡಳಿತಕ್ಕೆ ಒತ್ತು ನೀಡುತ್ತಿದೆ. ಕೃಷಿ ಇಲಾಖೆಯ ಮೂಲಕ ಕೃಷಿ ಯಂತ್ರೋಪಕರಣಗಳ ನೆರವಿನ ಬದಲಾಗಿ, ಮೂರು ಎಕರೆ ಒಳಗಿನ ಜಮೀನುಗಳನ್ನು ಸರ್ಕಾರವೇ ಉಳುಮೆ ಮಾಡಿಕೊಡುವ ಯೋಜನೆ ಜಾರಿಗೆ ತರಲಾಗುವುದು ಎಂದರು.

ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಮಾತನಾಡಿ, ಪ್ರಜಾಸೇವಾ ಆಂದೋಲನದ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅಧಿಕಾರಿಗಳು ಬದ್ಧತೆ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ಜನರು ಮುಖ್ಯವಾಹಿನಿಗೆ ಬರಬೇಕು ಎಂದರು.

ಈ ವಿಶೇಷ ವರದಿ ಓದಿದ್ದೀರಾ? SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್, ಅರುಣ್ ಮಾಚಯ್ಯ, ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...