ಕೊಡಗು | ಯುವಜನರಲ್ಲಿ ಎಚ್‌ಐವಿ ತಡೆಗೆ ಜಾಗೃತಿ: ಆರೋಗ್ಯ ತಪಾಸಣೆ ಹಾಗೂ ಅರಿವು ಕಾರ್ಯಕ್ರಮ

Date:

ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಯುವಜನರಲ್ಲಿ ಎಚ್‌ಐವಿ ಸೋಂಕಿನ ತಡೆಗಟ್ಟುವಿಕೆ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ವಿಶೇಷ ಆರೋಗ್ಯ ಕಾರ್ಯಕ್ರಮ ಗುರುವಾರ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆಯಿತು.

- Advertisement -

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಸನತ್ ಕುಮಾರ್, ಯುವಜನರಲ್ಲಿ ಎಚ್‌ಐವಿ ಸೋಂಕಿನ ತಡೆಗಟ್ಟುವಿಕೆ ಮತ್ತು ನಿಯಂತ್ರಣದ ಮಹತ್ವದ ಕುರಿತು ಮಾಹಿತಿ ನೀಡಿದರು. ಏಡ್ಸ್ ಸುರಕ್ಷಾ ಕಾರ್ಯಕ್ರಮದಡಿ ಕೈಗೊಳ್ಳಲಾಗುತ್ತಿರುವ ಮೊಬಿಲೈಸೇಷನ್ ಚಟುವಟಿಕೆಗಳು ಹಾಗೂ ಜಿಲ್ಲೆಯಲ್ಲಿ 95:95:99 ಗುರಿ ಸಾಧಿಸುವ ಅಗತ್ಯತೆಯನ್ನು ವಿವರಿಸಿದರು. ಎಚ್‌ಐವಿ ಮತ್ತು ಸಿಫಿಲಿಸ್ ಕುರಿತು ಸ್ವಯಂ ಮೌಲ್ಯಮಾಪನ ನಡೆಸಲು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಲಭ್ಯವಿರುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಡಾ. ಹರ್ಷವರ್ಧನ್ ಅವರು ಯುವಜನರಲ್ಲಿ ಎಚ್‌ಐವಿ ಸೋಂಕಿನ ತಡೆಗಟ್ಟುವಿಕೆ ಕುರಿತು ಮಾಹಿತಿ ನೀಡುವುದರ ಜೊತೆಗೆ, ಎಚ್‌ಐವಿ/ಏಡ್ಸ್‌ಗೆ ಸಂಬಂಧಿಸಿದ ಪರೀಕ್ಷೆ, ಸಮಾಲೋಚನೆ ಹಾಗೂ ಚಿಕಿತ್ಸಾ ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು. ಮಾಹಿತಿ ಮತ್ತು ಸಹಾಯಕ್ಕಾಗಿ ಟೋಲ್‌ಫ್ರೀ ಸಹಾಯವಾಣಿ 1097 ಅನ್ನು ಬಳಸುವಂತೆ ಮನವಿ ಮಾಡಿದರು.

ಡಾ. ಪುರುಷೋತ್ತಮ್ ಅವರು ಎಚ್‌ಐವಿ ಸೋಂಕು ಹರಡುವ ವಿಧಾನಗಳು, ಸೋಂಕಿನ ತಡೆಗಟ್ಟುವಿಕೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ವಿವರಿಸಿದರು. ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಎಚ್‌ಐವಿ, ಸಿಫಿಲಿಸ್, ಎನ್‌ಸಿಡಿ, ಟಿಬಿ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳ ತಪಾಸಣೆ ಹಾಗೂ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಅಗತ್ಯವಿರುವವರಿಗೆ ಸಂಬಂಧಪಟ್ಟ ಆರೋಗ್ಯ ಸೇವೆಗಳ ಕುರಿತು ಮಾರ್ಗದರ್ಶನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಡಿಎಪಿಸಿಯು, ಸಿಪಿಒ, ಐಸಿಟಿಸಿ, ಡಿಎಸ್‌ಆರ್‌ಸಿ, ಎಆರ್‌ಟಿ, ಎನ್‌ಟಿಇಪಿ ಹಾಗೂ ಸಿಎಸ್‌ಸಿ ಸೇರಿದಂತೆ ವಿವಿಧ ಘಟಕಗಳ ಸಿಬ್ಬಂದಿ ಭಾಗವಹಿಸಿ ಆರೋಗ್ಯ ತಪಾಸಣೆ, ಸಮಾಲೋಚನೆ, ಜಾಗೃತಿ ಹಾಗೂ ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?SIR: 1.08 ಕೋಟಿ ಮತದಾರರಿಗೆ QR ಕೋಡ್ ನೋಟಿಸ್; ಹೆಸರು ಉಳಿಸಿಕೊಳ್ಳಲು ದಾಖಲೆ ಪರಿಶೀಲನೆ ನಿರ್ಣಾಯಕ

ಐಸಿಟಿಸಿ ಮತ್ತು ಡಿಎಸ್‌ಆರ್‌ಸಿ ವೈದ್ಯಾಧಿಕಾರಿ ಡಾ. ಹರ್ಷವರ್ಧನ್, ಮಕ್ಕಳ ವಿಭಾಗದ ಮುಖ್ಯಸ್ಥರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...