ನ.15ರಂದು ತಿತಿಮತಿಯಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತಿ: ಜನ್‌ಜಾತಿಯ ಗೌರವ ದಿವಸ್ ಆಚರಣೆ

Date:

ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜಯಂತಿ ಅಂಗವಾಗಿ ನವೆಂಬರ್ 15ರಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯಲ್ಲಿ ‘ಜನ್‌ಜಾತಿಯ ಗೌರವ ದಿವಸ್’ ಕಾರ್ಯಕ್ರಮ ಆಯೋಜಿಸಲಾಗಿದೆ.

- Advertisement -

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ವಿವಿಧ ಆದಿವಾಸಿ ಬುಡಕಟ್ಟು ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಳ:...

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ 10,280ಕ್ಕೆ ಏರಿಕೆಯಾಗಿರುವುದು ಕೇವಲ ಒಂದು ಸರ್ಕಾರಿ ಯೋಜನೆಯ ಫಲಾಫಲದ ಅಂಕಿ-ಅಂಶವಲ್ಲ. ಜಿಲ್ಲೆಯಲ್ಲಿನ ಉದ್ಯೋಗಾವಕಾಶಗಳು, ಯುವಜನರ ಸದೃಢ ಭವಿಷ್ಯ, ಸ್ಥಳೀಯ ಆರ್ಥಿಕ...

ಅಡ್ವಾಣಿ – ಅಧಿಕಾರದ ಆಟದಲ್ಲಿ ಸಿದ್ಧಾಂತವೂ ಒಂದು ಮೆಟ್ಟಿಲಷ್ಟೇ!

1984ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು ಕೇವಲ ಎರಡು ಸ್ಥಾನಗಳು. ಅಲ್ಲಿಂದ ಪಕ್ಷವನ್ನು ರಾಷ್ಟ್ರೀಯ ಅಧಿಕಾರದ ಕೇಂದ್ರಕ್ಕೆ ತರುವಲ್ಲಿ ಅಡ್ವಾಣಿ ಅವರ ಪಾತ್ರ ದೊಡ್ಡದು. ರಥಯಾತ್ರೆ, ರಾಮಮಂದಿರ ಚಳವಳಿ ಮತ್ತು ಹಿಂದುತ್ವದ ರಾಜಕಾರಣದ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಅಂದು ಬೆಳಗ್ಗೆ 10 ಗಂಟೆಗೆ ತಿತಿಮತಿಯ ಮರೂರಿನ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಆವರಣದಿಂದ ಮೆರವಣಿಗೆ ಆರಂಭವಾಗಲಿದೆ. ಬಳಿಕ ಬೆಳಗ್ಗೆ 10.30ಕ್ಕೆ ತಿತಿಮತಿ ಸರ್ಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ ಹಾಗೂ ಡಾ.ಧನಂಜಯ ಸರ್ಜಿ ಭಾಗವಹಿಸಲಿದ್ದಾರೆ.

ಈ ವಿಶೇಷ ಲೇಖನ ಓದಿದ್ದೀರಾ? ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಕ್ರೀಡಾ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಟಿ.ಎಂ.ಧರ್ಮಜ ಉತ್ತಪ್ಪ, ವಿರಾಜಪೇಟೆ ತಾಲ್ಲೂಕು ಸಮಿತಿ ಅಧ್ಯಕ್ಷ ಪಿ.ವಿ.ಜಾನ್ಸನ್, ಪೊನ್ನಂಪೇಟೆ ತಾಲ್ಲೂಕು ಸಮಿತಿ ಅಧ್ಯಕ್ಷ ಕಾಳೇಮಾಡ ಪ್ರಶಾಂತ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಈ ವಿಶೇಷ ಲೇಖನ ಓದಿದ್ದೀರಾ? ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ ರಾಜಕಾರಣದ ಆತಂಕ

ಅಕ್ಕ ಐಎಎಸ್ ಅಕಾಡೆಮಿಯ ಸ್ಥಾಪಕ ನಿರ್ದೇಶಕ ಡಾ.ಶಿವಕುಮಾರ್ ಮುಖ್ಯ ಭಾಷಣ ಮಾಡಲಿದ್ದಾರೆ. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...