ಪ್ರತಾಪ್ ಸಿಂಹ ವಿರುದ್ಧ ಮಲಯಾಳಿ ಸಮಾಜದಿಂದ ಪೊಲೀಸ್ ಠಾಣೆಗೆ ದೂರು

Date:

ಮಲಯಾಳಿ ಸಮುದಾಯದ ಕುರಿತು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅವಹೇಳನಕಾರಿ ಹಾಗೂ ದ್ವೇಷ ಭಾವನೆ ಮೂಡಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೊಡಗು ಹಿಂದೂ ಮಲಯಾಳಿ ಸಮಾಜದ ಗೋಣಿಕೊಪ್ಪಲು ಘಟಕದ ವತಿಯಿಂದ ಗೋಣಿಕೊಪ್ಪಲು ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಹೇಳಿಕೆ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

- Advertisement -

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪ್ರತಾಪ್ ಸಿಂಹ ಅವರು ಭಾಷಣ ಮಾಡುವ ಸಂದರ್ಭದಲ್ಲಿ ಮಲಯಾಳಿ ಸಮುದಾಯದ ಕುರಿತು ಅವಹೇಳನಕಾರಿ, ನಿಂದನಾತ್ಮಕ ಹಾಗೂ ಸಮಾಜದಲ್ಲಿ ದ್ವೇಷ ಭಾವನೆ ಮೂಡಿಸುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂಬುದು ಸಂಘಟನೆಯ ಆರೋಪವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನಕ್ಕೆ 77 ವರ್ಷ | ಸಂವಿಧಾನ ಸೋತಿದೆಯೇ?, ಅನುಷ್ಠಾನದಲ್ಲಿ...

26 ನವೆಂಬರ್ 1949. ಭಾರತದ ಇತಿಹಾಸದಲ್ಲಿ ಇದೊಂದು ಮಹತ್ವದ ಐತಿಹಾಸಿಕ ದಿನ. ಶತಮಾನಗಳ ಸಾಮಾಜಿಕ ಅಸಮಾನತೆ, ಶೋಷಣೆ, ದಮನ ಮತ್ತು ಅನ್ಯಾಯದ ವಿರುದ್ಧ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಆಧಾರದಲ್ಲಿ ಹೊಸ...

ಪಂಜಾಬ್ ಚುನಾವಣೆ  | ‘ಎಎಪಿ’ಗೆ ಅಳಿವು-ಉಳಿವಿನ ಕದನ; ಹಳೆಯ...

ಮುಂದಿನ ವರ್ಷದ ಆರಂಭದಲ್ಲಿ, ಅಂದರೆ 2027ರ ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ ) ಪಾಲಿಗೆ ಅಕ್ಷರಶಃ 'ಸಾವು-ಬದುಕಿನ' ಪ್ರಶ್ನೆಯಾಗಿ ಪರಿಣಮಿಸಿದೆ. ರಾಷ್ಟ್ರ ರಾಜಕಾರಣದಲ್ಲಿ ತನ್ನ...

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಈ ಕುರಿತು ಮಾತನಾಡಿದ ಕೊಡಗು ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ಪ್ರಶಾಂತ್, ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕೊಡಗಿನಲ್ಲಿ ಕೇರಳ ಮೂಲದ ಮಲಯಾಳಿಗಳು ಅತಿಕ್ರಮಣ ಮಾಡುತ್ತಿದ್ದಾರೆ, ಕೊಡಗಿನ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ ಎಂಬ ಅರ್ಥ ಬರುವಂತೆ ಮಾತನಾಡಿದ್ದಾರೆ. ಇಂತಹ ಹೇಳಿಕೆಗಳು ಸಮುದಾಯದ ಜನರ ಆತ್ಮಗೌರವಕ್ಕೆ ಧಕ್ಕೆ ತರುವುದಲ್ಲದೆ, ಸಮಾಜದಲ್ಲಿ ಅನಗತ್ಯ ಗೊಂದಲ ಮತ್ತು ವೈಮನಸ್ಸಿಗೆ ಕಾರಣವಾಗುತ್ತವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೊಡಗು ಜಿಲ್ಲೆಯಲ್ಲಿ ಮಲಯಾಳಿ ಸಮುದಾಯದವರು ಹಲವು ದಶಕಗಳಿಂದ ಕನ್ನಡಿಗರು, ಕೊಡವರು ಸೇರಿದಂತೆ ಎಲ್ಲ ಸಮುದಾಯಗಳೊಂದಿಗೆ ಅನ್ಯೋನ್ಯವಾಗಿ ಸಹಬಾಳ್ವೆ ನಡೆಸುತ್ತಿದ್ದಾರೆ. ಕೃಷಿ, ವ್ಯಾಪಾರ, ಶಿಕ್ಷಣ, ಉದ್ಯಮ ಹಾಗೂ ಕಾರ್ಮಿಕ ವಲಯ ಸೇರಿದಂತೆ ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಜಿಲ್ಲೆಯ ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಸಮುದಾಯದ ಪಾತ್ರವನ್ನು ಅರಿಯದೆ, ಸಾರ್ವಜನಿಕ ವೇದಿಕೆಯಲ್ಲಿ ಆಧಾರರಹಿತವಾಗಿ ಮಾತನಾಡುವುದು ಸರಿಯಲ್ಲ. ಇಂತಹ ಹೇಳಿಕೆ ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸಮಾಜದ ಸ್ಥಾಪಕಾಧ್ಯಕ್ಷ ಹಾಗೂ ಗೌರವಾಧ್ಯಕ್ಷ ಶರತ್ ಕಾಂತ್ ಮಾತನಾಡಿ, ಸಾರ್ವಜನಿಕ ಜೀವನದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿದ್ದ ವ್ಯಕ್ತಿಗಳು ಮಾತನಾಡುವಾಗ ಸಾಮಾಜಿಕ ಸಾಮರಸ್ಯ ಮತ್ತು ಪರಸ್ಪರ ಗೌರವವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಮುದಾಯವೊಂದನ್ನು ಗುರಿಯಾಗಿಸಿಕೊಂಡು ಇಂತಹ ಹೇಳಿಕೆಗಳನ್ನು ನೀಡುವುದರಿಂದ ಸಮಾಜದಲ್ಲಿ ದ್ವೇಷ, ಅಸಹನೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವ ಅಪಾಯವಿದೆ. ಪ್ರತಾಪ್ ಸಿಂಹ ಅವರ ಹೇಳಿಕೆಯಿಂದ ಕೊಡಗಿನ ಮಲಯಾಳಿ ಸಮುದಾಯದ ಜನರ ಭಾವನೆಗಳಿಗೆ ನೋವುಂಟಾಗಿದ್ದು, ಸಮುದಾಯದ ಗೌರವ ಮತ್ತು ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ಹೇಳಿದರು.

“ನಾವು ಯಾವುದೇ ರಾಜಕೀಯ ಪಕ್ಷದ ಪರವಾಗಿಯೂ ಅಥವಾ ವಿರುದ್ಧವಾಗಿಯೂ ಈ ದೂರು ಸಲ್ಲಿಸುತ್ತಿಲ್ಲ. ನಮ್ಮ ಸಮುದಾಯದ ಗೌರವ, ಸ್ವಾಭಿಮಾನ ಹಾಗೂ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗಾಗಿ ದೂರು ನೀಡಿದ್ದೇವೆ. ಸಾರ್ವಜನಿಕವಾಗಿ ಸಮುದಾಯವೊಂದರ ಕುರಿತು ಅವಹೇಳನಕಾರಿ ಹೇಳಿಕೆ ನೀಡುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ಪೊಲೀಸ್ ಇಲಾಖೆ ದೂರನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ವಿಶೇಷ ಲೇಖನ ಓದಿದ್ದೀರಾ? ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ ಐಕ್ಯತೆ ಬಲವಾಗಲಿ

ಈ ಸಂದರ್ಭದಲ್ಲಿ ಕೊಡಗು ಹಿಂದೂ ಮಲಯಾಳಿ ಸಮಾಜದ ಉಪಾಧ್ಯಕ್ಷ ಸಿ.ಕೆ. ವೇಣುಗೋಪಾಲ್, ಕೆ.ಎನ್.ಎಸ್.ಎಸ್ ಅಧ್ಯಕ್ಷ ಸಂಜೀವ, ವಿಶ್ವಕರ್ಮ ಸಂಘದ ಅಧ್ಯಕ್ಷ ಮಣಿಕಂಠ, ಎಸ್.ಎನ್.ಡಿ.ಪಿ ಜಂಟಿ ಕಾರ್ಯದರ್ಶಿ ಸುದೀರ್, ಕೆ.ಎನ್.ಎಸ್.ಎಸ್ ಖಜಾಂಚಿ ಭಾಸ್ಕರ್, ವಿಶ್ವಕರ್ಮ ಸಂಘದ ಕಾರ್ಯದರ್ಶಿ ರಾಘವ ಹಾಗೂ ಎಸ್.ಎನ್.ಡಿ.ಪಿ ಸದಸ್ಯ ಸಪ್ತಾಶ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಸಾಲದ ಅರ್ಜಿದಾರರನ್ನು ಬ್ಯಾಂಕ್‌ಗಳಿಗೆ ಅಲೆದಾಡಿಸಬೇಡಿ: ಗಜಾನನ ಬಾಲೆ

ಸರ್ಕಾರಿ ಯೋಜನೆಗಳಡಿ ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳನ್ನು ಬ್ಯಾಂಕ್‌ಗಳಿಗೆ...

ಕಲಬುರಗಿ | ನಾಡು, ನುಡಿ ಮೇಲೆ ಅಭಿಮಾನವಿರಲಿ’: ನಾಲವಾರಕರ್

ಕನ್ನಡ ನಾಡು, ನುಡಿ ಮೇಲೆ ಸದಾ ಅಭಿಮಾನ ಇರಬೇಕು ಎಂದು ಕರವೇ...

ಬಾಗಲಕೋಟೆ | ಜಿಲ್ಲಾಡಳಿತದಿಂದ ಸಂವಿಧಾನ ದಿನ ಆಚರಣೆ : ಸಾಮೂಹಿಕ ಸಂವಿಧಾನ ಪೀಠಿಕೆ ಬೋಧನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತದ...

ಚುನಾವಣಾ ಆಯೋಗದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ

SIR ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿದ್ದು, ಇದರಿಂದ ಲಕ್ಷಾಂತರ ಮತದಾರರು ತಮ್ಮ ಮತದಾನದ...