ಕೊಡಗು | ಮುಂಗಾರಿಗೂ ಮುನ್ನ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಬೋಸರಾಜು

Date:

ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇರುವುದರಿಂದ ಕೊಡಗು ಜಿಲ್ಲೆಯಾದ್ಯಂತ ರಸ್ತೆ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

- Advertisement -

ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವಿಕೆ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ವಿಳಂಬವಿಲ್ಲದೆ ಕೈಗೊಳ್ಳಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

“ಹುದಿಕೇರಿ, ಬಾಳೆಲೆ, ಕಳತ್ಮಾಡು, ಸಿದ್ದಾಪುರ ಮತ್ತು ಕಾಟಕೇರಿ ಭಾಗಗಳಲ್ಲಿ ಉಪ ವಿದ್ಯುತ್ ಕೇಂದ್ರಗಳ ಕಾಮಗಾರಿಗಳು ಪ್ರಗತಿಯಲ್ಲಿವೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದರೂ, ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ರಸಗೊಬ್ಬರ ಪೂರೈಕೆ ಕುರಿತಂತೆ ಕೃಷಿ ಇಲಾಖೆಗೆ ಸೂಚನೆ ನೀಡಿದ ಅವರು, “ರೈತರಿಗೆ ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ ಆಗಬೇಕು. ಚೀಲಗಳ ತೂಕದಲ್ಲಿ ವ್ಯತ್ಯಾಸ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಎಚ್ಚರಿಸಿದರು. ಜತೆಗೆ ನೆರೆ ರಾಜ್ಯಗಳಿಗೆ ಅಕ್ರಮ ಸಾಗಾಣಿಕೆ ನಡೆಯದಂತೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿ ನಿಲಯಗಳಿಗೆ ಶುಚಿ ಸಂಭ್ರಮ ಕಿಟ್ ಹಾಗೂ ಗುಣಮಟ್ಟದ ಆಹಾರ ವಿತರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಸಕ ಡಾ. ಮಂತರ್ ಗೌಡ ಮಾತನಾಡಿ, “ಮಡಿಕೇರಿ ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು. ಐಗೂರು ಸೇತುವೆ ನಿರ್ಮಾಣ, ಗಾಳಿಬೀಡು ರಸ್ತೆ ದುರಸ್ತಿ, ಮುಟ್ಲು, ಹಮ್ಮಿಯಾಲ, ದೇವಸ್ತೂರು ಹಾಗೂ ಹಂಚಿನಾಡು ರಸ್ತೆ ನಿರ್ವಹಣೆಗೆ ಆದ್ಯತೆ ನೀಡಬೇಕು. ಮಳೆಗಾಲದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲ ಇಲಾಖೆಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು” ಎಂದು ಸಚಿವರು ಜಿಲ್ಲಾಧಿಕಾರಿಗೆ ಸೂಚಿಸಿದರು.

ರಸ್ತೆ ನಿರ್ವಹಣೆಗೆ ಸರ್ಕಾರ ನೂರಾರು ಕೋಟಿ ರೂ. ಬಿಡುಗಡೆ ಮಾಡಿದ್ದರೂ ಕಾಮಗಾರಿಗಳ ವಿಳಂಬದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ ಎಸ್ ಅರುಣ್ ಮಾಚಯ್ಯ ಕರಿಕೆ ರಸ್ತೆ ಸೇರಿದಂತೆ ಹಲವು ಕಾಮಗಾರಿಗಳು ಬಾಕಿ ಉಳಿದಿರುವುದನ್ನು ಸಭೆಯ ಗಮನಕ್ಕೆ ತಂದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಬಿಟ್ಟಂಗಾಲ, ತಿತಿಮತಿ, ಬಾಳುಗೋಡು ಸೇರಿದಂತೆ ಹಲವು ರಸ್ತೆಗಳ ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಳ್ಳುವಂತೆ ಮನವಿ ಮಾಡಿದರು. ನಾಪೋಕ್ಲು ಕ್ರೀಡಾಂಗಣದಲ್ಲಿ ಮಳೆಗಾಲದಲ್ಲಿ ಮಕ್ಕಳ ಓಡಾಟಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಸಮಿತಿ ಸದಸ್ಯ ಅಬ್ದುಲ್ ರೆಹಮಾನ್ ಒತ್ತಾಯಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಟ್ಟಡ ಕಾಮಗಾರಿಗಳ ಪ್ರಗತಿ ಕುರಿತು ಚರ್ಚೆ ನಡೆಯಿತು. ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಜನವರಿಯೊಳಗೆ ಪೂರ್ಣಗೊಳಿಸಬೇಕೆಂದು ಶಾಸಕರು ಸೂಚಿಸಿದರು. ಮಡಿಕೇರಿ ಹಾಗೂ ಕುಶಾಲನಗರ ಕಲಾಭವನಗಳ ಬಾಕಿ ಕಾಮಗಾರಿ ಮತ್ತು ಕುಶಾಲನಗರ ನ್ಯಾಯಾಲಯ ಕಟ್ಟಡದ ಪ್ರಗತಿ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು.

ಎರಡು ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹110 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಸಮರ್ಪಕ ವಿದ್ಯುತ್ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೆಸ್ಕ್ ಅಧಿಕಾರಿಗಳಿಗೆ ಸೂಚಿಸಿದರು. ಸೆಸ್ಕ್ ಇಇ ರಾಮಚಂದ್ರ ಮಾಹಿತಿ ನೀಡಿ, 70 ಮಂದಿ ಗ್ಯಾಂಗ್‌ಮೆನ್ ಕಾರ್ಯನಿರ್ವಹಿಸುತ್ತಿದ್ದು, ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಲಜೀವನ್ ಮಿಷನ್ ಯೋಜನೆ ಕುರಿತು ಸಚಿವರು ಅಸಮಾಧಾನ ವ್ಯಕ್ತಪಡಿಸಿ, ಶೇ.50ರಷ್ಟು ಕಾಮಗಾರಿ ತೃಪ್ತಿಕರವಾಗಿಲ್ಲ ಎಂದರು. ₹450 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಂದ ಸಾರ್ವಜನಿಕರಿಗೆ ಎಷ್ಟರ ಮಟ್ಟಿಗೆ ಪ್ರಯೋಜನವಾಗಿದೆ ಎಂಬುದರ ಕುರಿತು ತನಿಖೆ ನಡೆಸಬೇಕು ಎಂದು ಸಲಹೆ ನೀಡಿದರು.

ಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ಪರಿವರ್ತಿಸಿರುವುದರಿಂದ ಬಡವರಿಗೆ ತೊಂದರೆಯಾಗುತ್ತಿದೆ ಎಂದು ಹಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಆಹಾರ ಇಲಾಖೆ ಉಪನಿರ್ದೇಶಕ ಎಂ. ಭೀಮರಾಯ ಮಾಹಿತಿ ನೀಡಿ, ಜಿಲ್ಲೆಯಲ್ಲಿ 97,046 ಬಿಪಿಎಲ್ ಹಾಗೂ 42,260 ಎಪಿಎಲ್ ಪಡಿತರ ಚೀಟಿಗಳು ಇರುವುದಾಗಿ ತಿಳಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ 2 ಲೀಟರ್‌ಗಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲ್‌ಗಳನ್ನು ನಿಷೇಧಿಸಿರುವುದಾಗಿ ಪೌರಾಯುಕ್ತ ಎಚ್ ಆರ್ ರಮೇಶ್ ತಿಳಿಸಿದರು. ಅಮೃತ್ ಯೋಜನೆಯಡಿ ಮನೆಗಳಿಗೆ ನೀರಿನ ಸಂಪರ್ಕ ಹಾಗೂ ಒಳಚರಂಡಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.

ಈ ಸುದ್ದಿ ಓದಿದ್ದೀರಾ?ಕೊಡಗು | ಮಾನವ-ವನ್ಯಜೀವಿ ಸಂಘರ್ಷ ತಡೆಗೆ ತಜ್ಞರ ಮಟ್ಟದಲ್ಲಿ ಚರ್ಚೆ ಅಗತ್ಯ: ಈಶ್ವರ ಖಂಡ್ರೆ

ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್ ಜೆ ಸೋಮಶೇಖರ್, ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ ʼನೀರೋʼ; ಭಾರತ ಉರಿಯುತ್ತಿರುವಾಗ ಭಜನೆ ಮಾಡಿದ ʼಮೋದಿʼ!

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...