ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.
ಮೂಲತಃ ಮಂಡ್ಯದವರಾದ ರಶ್ಮಿ (27) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಮಡಿಕೇರಿಯಲ್ಲಿರುವ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ನೇಣಿಗೆ ಶರಣರಾಗಿದ್ದಾರೆ.
ರಶ್ಮಿ ಅವರು ಕಳೆದ ಎರಡು ವರ್ಷಗಳಿಂದ ಮಡಿಕೇರಿಯಲ್ಲಿ ಅರಣ್ಯ ಇಲಾಖೆಯ ರಿಸರ್ಚ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ಸಾವಿಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.
ಘಟನೆ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.